NEWSದೇಶ-ವಿದೇಶನಮ್ಮರಾಜ್ಯ

ಸತತ 3ನೇ ಬಾರಿಗೆ ನರೇಂದ್ರ ದಾಮೋದರ್‌ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲಿ: ಸತತ ಮೂರನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ದಾಮೋದರ್‌ ಮೋದಿಯವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ (Oath Taking) ಸ್ವೀಕರಿಸಿದ್ದಾರೆ.

ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ (Oath Taking) ಸ್ವೀಕಾರ ಸಮಾರಂಭದಲ್ಲಿ 72 ಸಚಿವರೊಂದಿಗೆ ಈಶ್ವರನ ಹೆಸರಿನಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಿದರು.

ಈ ಮೂಲಕ ಜವಾಹರಲಾಲ್ ನೆಹರೂ ಬಳಿಕ ಮೂರನೇ ಬಾರಿಗೆ ಮೋದಿ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ ಹೆಗ್ಗಳಿಗೆ ಪಾತ್ರರಾಗಿದ್ದಾರೆ. 72 ಸಚಿವರ ಪೈಕಿ 32 ಕ್ಯಾಬಿನೆಟ್ ದರ್ಜೆ ಸಚಿವರು, 5 ಸ್ವತಂತ್ರ ಮತ್ತು 36 ರಾಜ್ಯ ದರ್ಜೆ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

73ರ ಹರೆಯದ ಮೋದಿ ಅವರು ಎನ್‌ಡಿಎ ಮೈತ್ರಿಕೂಟದ ಪ್ರಧಾನಿಯಾಗಿ ಇಂದು ರಾತ್ರಿ 7.15ಕ್ಕೆ ಪ್ರಾರಂಭವಾಗಿ ಸುಮಾರು 2ಗಂಟೆಗಳ ಕಾಲ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅಧಿಕಾರ ವಹಿಸಿಕೊಂಡರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ಮೋದಿಗೆ ಸೇರಿದಂತೆ 72 ಮಂದಿಗೂ ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ಮೋದಿ ನಂತರ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಹಾಗೂ 9ನೇಯವರಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ನಿತಿನ್ ಗಡ್ಕರಿ, ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್ ಮತ್ತು ನಿರ್ಮಲಾ ಸೀತಾರಾಮನ್ ಸೇರಿದಂತೆ 72ಮಂದಿ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ