NEWSನಮ್ಮಜಿಲ್ಲೆ

ಕುಡಿಯುವ ನೀರು, ಮೇವು ಕೊರತೆಗೆ ಅಗತ್ಯ ಕ್ರಮ: ಡಿಸಿ ಬಸವರಾಜು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಮುಂದಿನ 3 ತಿಂಗಳುಗಳ ಕಾಲ ಜಿಲ್ಲೆಯಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿ  ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಅಗತ್ಯ ಕ್ರಮವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಬರ ಪರಿಸ್ಥಿತಿ ನಿವಾರಣೆಗೆ ತಕ್ಷಣ ಪರಿಹಾರ ಒದಗಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 04 ತಾಲೂಕುಗಳ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕಳೆದ 3 ರಿಂದ 5 ವರ್ಷಗಳಿಂದ ಹೆಚ್ಚಾಗಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಜನವಸತಿಗಳ ಆಧಾರದಲ್ಲಿ ಪ್ರಸಕ್ತ ವರ್ಷದ ಬೇಸಿಗೆ ಸಮಯದಲ್ಲಿ ಮಾರ್ಚ್‌ ರಿಂದ ಮೇ 2025ರ ಅಂತ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ 98 ಜನವಸತಿಗಳನ್ನು ಗುರುತಿಸಲಾಗಿದೆ.

ಹೀಗಾಗಿ 234 ಖಾಸಗಿ/ ರೈತರ ಕೊಳವೆ ಬಾವಿಗಳನ್ನು ಗುರುತಿಸಿ ಪರ್ಯಾಯವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಸ್ತುತ JJM ಯೋಜನೆಯಡಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯಕವಿರುವ ಮೊತ್ತದ ತುರ್ತು ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ.

ಇನ್ನು ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ ಮೇವಿನ  ಬೀಜ ಕಿಟ್‌ಗಳನ್ನು ರೈತರಿಗೆ ಪೂರೈಸಿ, ಈಗಾಗಲೇ ಗೋಶಾಲೆಗಳಲ್ಲಿ ಅಂದಾಜು 3 ಲಕ್ಷ ಟನ್ ರಷ್ಟು ಮೇವು ಸಂಗ್ರಹಿಸಿಡಲಾಗಿದೆ ಎಂದರು.

ಸಭೆಯಲ್ಲಿ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ