NEWSದೇಶ-ವಿದೇಶನಮ್ಮರಾಜ್ಯ

ಮಾತುಕತೆ ಯಶಸ್ವಿ: ಆರ್‌ಟಿಸಿ ಮುಷ್ಕರ ಅಂತ್ಯ-ಇಂದಿನಿಂದ ಬಸ್ ಸೇವೆ ಪುನಾರಂಭ

ಮೃತ ಚಾಲಕ ಶಂಕರ್‌ ಗೌಡ್‌ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ, ಒಂದು ಮನೆ ಹಾಗೂ ಒಬ್ಬರಿಗೆ ಸರ್ಕಾರಿ ನೌಕರಿ ಕೊಡುವುದಾಗಿ ಸಿಎಂ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ವಾರಂಗಲ್‌: ಸರ್ಕಾರದೊಂದಿಗೆ ಆರ್‌ಟಿಸಿಯನ್ನು ವಿಲೀನಗೊಳಿಸುವ ಪ್ರಕ್ರಿಯೆಗೆ ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮ (ಟಿಜಿಎಸ್‌ಆರ್‌ಟಿಸಿ) ನೌಕರರು ತಮ್ಮ ಮುಷ್ಕರವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ನಿಗಮದ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವೈ. ನಾಗಿ ರೆಡ್ಡಿ ತಿಳಿಸಿದ್ದಾರೆ.

ತೆಲಂಗಾಣ ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ಸಂಘಗಳ ನಡುವಿನ ಮಾತುಕತೆ ಯಶಸ್ವಿಯಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ತಿಳಿಸಿದ್ದಾರೆ.

ಇನ್ನು ಇದರೊಂದಿಗೆ, ಶನಿವಾರ ಮುಂಜಾನೆಯಿಂದಲೇ ಮೊದಲ ಪಾಳಿಯಲ್ಲೇ ರಾಜ್ಯಾದ್ಯಂತ ಶೇ.100ರಷ್ಟು ಬಸ್ ಸೇವೆ ಪುನಾರಂಭವಾಗಿವೆ ಎಂದು ತಿಳಿಸಿದ್ದಾರೆ.

ನಿನ್ನೆ ಅಂದರೆ ಶುಕ್ರವಾರ ಸರ್ಕಾರದೊಂದಿಗೆ ಮಾತುಕತೆಗಳು ಅತ್ಯಂತ ಸಕಾರಾತ್ಮಕ ವಾತಾವರಣದಲ್ಲಿ ನಡೆದವು ಮತ್ತು ಪ್ರಮುಖ ಬೇಡಿಕೆಗಳ ಕುರಿತು ಎರಡೂ ಕಡೆಯಿಂದ ಒಮ್ಮತಕ್ಕೆ ಬಂದಿದ್ದರಿಂದ ಬಸ್‌ಗಳ ಓಡಾಟ ಎಂದಿನಂತೆ ಇರಲಿದೆ ಎಂದುಎಂಡಿ ಹೇಳಿದ್ದಾರೆ.

ಸರ್ಕಾರದೊಂದಿಗೆ ಆರ್‌ಟಿಸಿಯನ್ನು ವಿಲೀನಗೊಳಿಸುವ ಪ್ರಕ್ರಿಯೆಗೆ ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದ್ದು, ಸಂಬಂಧಿತ ಕಾರ್ಯವಿಧಾನಗಳನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಅಲ್ಲದೆ, 2021ರ ವೇತನ ಪರಿಷ್ಕರಣೆ (ಪಿಆರ್‌ಸಿ) ಅನುಷ್ಠಾನಕ್ಕೆ ಸರ್ಕಾರ ಅನುಮೋದನೆ ನೀಡಿದೆ. ನೌಕರರ ಮತ್ತೊಂದು ಪ್ರಮುಖ ಬೇಡಿಕೆಯಾದ ಕಾರ್ಮಿಕ ಸಂಘಗಳ ಪುನರುಜ್ಜೀವನಗೊಳಿಸಲು ಮತ್ತು ಮಾನ್ಯತೆಗಾಗಿ ಸಂಘಟನೆಗಳ ಚುನಾವಣೆ ನಡೆಸಲು ಸರ್ಕಾರ ಹಸಿರು ನಿಶಾನೆ ತೋರಿಸಿದೆ.

ಇನ್ನು ಇದೇ ಏ.22ರಿಂದ ನಡೆದ ಮುಷ್ಕರದ ಅವಧಿಯಲ್ಲಿ ಪ್ರಯಾಣಿಕರು ಎದುರಿಸಿದ ತೊಂದರೆಗಳಿಗೆ ನಾಗಿ ರೆಡ್ಡಿ ವಿಷಾದ ವ್ಯಕ್ತಪಡಿಸಿದ್ದು, ಈಗ ಎಲ್ಲ ಡಿಪೋಗಳಿಂದ ಬಸ್‌ಗಳು ಎಂದಿನಂತೆ ಸೇವೆ ನೀಡಲಿವೆ ಮತ್ತು ಪ್ರಯಾಣಿಕರು ತಮ್ಮ ಪ್ರಯಾಣವನ್ನು ಯಾವುದೇ ಆತಂಕವಿಲ್ಲದೆ ಮಾಡಬಹುದು ಎಂದು ಭರವಸೆ ನೀಡಿದ್ದಾರೆ.

ಟಿಜಿಎಸ್‌ಆರ್‌ಟಿಸಿಯನ್ನು ಸರ್ಕಾರದೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳು ಮತ್ತು ಕಾರ್ಮಿಕ ಸಂಘಗಳೊಂದಿಗೆ ಸಮಿತಿಯನ್ನು ರಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಘೋಷಿಸಿದರು.

ಆರ್‌ಟಿಸಿ ಜೆಎಸಿ ನಾಯಕರೊಂದಿಗೆ ಸುದೀರ್ಘ ಚರ್ಚೆಯ ನಂತರ, ಅವರು ಶೇ.11ರಷ್ಟು ಪಿಆರ್‌ಸಿ ಅನುಷ್ಠಾನಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಇನ್ನು ಈ ಮುಷ್ಕರದ ವೇಳೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನಿಗಮದ ಚಾಲಕ ಶಂಕರ್‌ ಗೌಡ್‌ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ, ಒಂದು ಮನೆ ಹಾಗೂ ಒಬ್ಬರಿಗೆ ಸರ್ಕಾರಿ ನೌಕರಿ ಕೊಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ