CrimeNEWSನಮ್ಮಜಿಲ್ಲೆ

ಗುಂಡು ಹಾರಿಸಿ ಕುಖ್ಯಾತ ಸರಗಳ್ಳನ ಬಂಧಿಸಿದ ನೆಲಮಂಗಲ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ನೆಲಮಂಗಲ: 15ಕ್ಕೂ ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ಸರಗಳ್ಳನ ಮೇಲೆ ಗುಂಡು ಹಾರಿಸಿ (Shootout) ಪೊಲೀಸರು (Town Police) ಸಿನಿಮೀಯ ರೀತಿಯಲ್ಲಿ ಬಂಧಿಸಿರುವ ಘಟನೆ ಬಿನ್ನಮಂಗಲದ ಬಳಿ ನಡೆದಿದೆ.

ನೆಲಮಂಗಲ ಟೌನ್ ಸಿಪಿಐ (CPI) ಶಶಿಕುಮಾರ್ ಫೈರಿಂಗ್ ಕುಖ್ಯಾತ ಸರಗಳ್ಳ ಯೋಗ ಯೋಗಾನಂದ್ (31) ಮೇಲೆ ಗುಂಡುಹಾರಿಸಿದ್ದು, ಆರೋಪಿಯನ್ನು ನೆಲಮಂಗಲ ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ಕಾನ್ಸ್ಟೇಬಲ್ ಹನುಮಂತ ಹಿಪ್ಪರಗಿ ಎಂಬುವರು ಗಾಯಗೊಂಡಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

15 ಪ್ರಕರಣಗಳಲ್ಲಿ (FIR) ಬೇಕಾಗಿದ್ದ ಮದ್ದೂರು ಮೂಲದ ಮಾರಸಿಂಗನಹಳ್ಳಿಯ ಯೋಗಾನಂದ್, ಪೆಪ್ಪರ್ ಸ್ಪ್ರೆ ಬಳಸಿ ಸಿನಿಮೀಯ ರೀತಿಯಲ್ಲಿ ಸರಗಳನ್ನು ಕದಿಯುತ್ತಿದ್ದ. ಹಲವು ದರೋಡೆ, ಬೈಕ್ ನಲ್ಲಿ ಚೈನ್ ಸ್ನ್ಯಾಚ್‌, ಮನೆಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಅಲ್ಲದೇ ಪೊಲೀಸರ ಮೇಲೆ ಆರೋಪಿ ಹಾಲೋಬ್ರಿಕ್ ನಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದ.

ಈ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಹಿಪ್ಪರಿಗಿ ಅವರಿಗೆ ಗಾಯಗೊಳಿಸಿದ್ದಾನೆ. ನಂತರ ತಪ್ಪಿಕೊಳ್ಳಲು ಯತ್ನಿಸಿದ್ದರಿ ಟೌನ್ ಸಿಪಿಐ ಶಶಿಧರ್ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.

ಆರೋಪಿ ವಿರುದ್ಧ ರಾಮನಗರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 15ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು