NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಟಿಕೆಟ್‌ ದರ ಏರಿಕೆಗೆ ಹೊಸ ಆಯೋಗ- ಪಿಕ್ ಪಾಕೆಟ್‌ಗಾಗಿ ಸರ್ಕಾರದ ಹೊಸ ಪ್ರಯೋಗ: ವಿಪಕ್ಷ ನಾಯಕ ಆರ್‌.ಅಶೋಕ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಸ್ ಟಿಕೆಟ್‌ ದರ ಏರಿಕೆಗೆ ಹೊಸ ಆಯೋಗ ಇದು ಪಿಕ್ ಪಾಕೆಟ್ ಸರ್ಕಾರದ ಹೊಸ ಪ್ರಯೋಗ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಸ್‌ ಟಿಕೆಟ್‌ ದರ ಏರಿಸುವುದು ಅನಿವಾರ್ಯ ಅದು ಕಾಲ ಕಾಲಕ್ಕೆ ಏರಿಕೆ ಆಗಲಿದೆ ಎಂದು ಹೇಳಿಕೆ ಕೊಟ್ಟ ಬೆನ್ನಲೇ ಅಶೋಕ್‌ ಟ್ವೀಟ್‌ ಮಾಡಿದ್ದಾರೆ.

ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ @INCKarnataka ಸರ್ಕಾರ ಈಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್‌ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಆಡಳಿತ ಮಾಡುವಲ್ಲಿ ಮೂರು ಕಾಸು ಪ್ರಯೋಜನ ಇಲ್ಲದಿದ್ದರೂ ಜನರಿಗೆ ಮಂಕು ಬೂದು ಎರಚಿ ಹೊಸ ಪ್ರಯೋಗಗಳ ಮೂಲಕ ಜನರನ್ನು ಸುಲಿಗೆ ಮಾಡುವಲ್ಲಿ ಕಾಂಗ್ರೆಸ್ ಪಕ್ಷದವರು ಬಹಳ ನಿಸ್ಸೀಮರು ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು