NEWSನಮ್ಮಜಿಲ್ಲೆಬೆಂಗಳೂರು

ಬೀದಿ ನಾಯಿಗಳಿಗೆ ಆಹಾರ ವ್ಯವಸ್ಥೆ ಮಾಡಲು ಹೊಸ ಯೋಜನೆ: ಎಸ್‌. ವಿಕಾಸ್ ಕಿಶೋರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಬೀದಿ ನಾಯಿಗಳಿಗೆ ಆಹಾರ ಸಿಗದಂತಹ ಪ್ರದೇಶದಲ್ಲಿ ಆಹಾರದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಪಾಲಿಕೆಯ ಪಶುಸಂಗೋಪನಾ ವಿಭಾಗದಿಂದ ಪ್ರಾಯೋಗಿಕವಾಗಿ ಹೊಸ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಪಶುಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

ನಗರದಲ್ಲಿ ಅನೇಕ ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರವೂ ಸಹ ಸಿಗದಿರುವುದು ಪಾಲಿಕೆಯ ಗಮನಕ್ಕೆ ಬಂದಿದೆ. ಇದರಿಂದ ಬೀದಿ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗೆ ಬೀದಿ ನಾಯಿಗಳು ಸಾರ್ವಜನಿಕರಿಗೆ ಕಚ್ಚುವ ಪ್ರಕರಗಳು ಕಂಡಬರುತ್ತಿದ್ದು, ಅದನ್ನು ನಿಂಯಂತ್ರಿಸಬೇಕಿದೆ. ಆದ್ದರಿಂದ ನಾಯಿಗಳಿಗೆ ಸರಿಯಾಗಿ ಆಹಾರ ಸಿಗುವಂತೆ ಮಾಡಲು ಪಾಲಿಕೆಯು ಪ್ರಾಣಿ ಪಾಲಕರು, ಪೌರಕಾರ್ಮಿಕರು, ಹೋಟೆಲ್ ಮಾಲೀಕರು, ಆರೋಗ್ಯ ವಿಭಾಗದ ಸಿಬ್ಬಂದಿ ಹಾಗೂ ಇತರೆ ಆಸಕ್ತರೊಂದಿಗೆ ಸಮನ್ವಯ ಸಾಧಿಸಿ ಇದನ್ನು ಮಾಡಲಾಗುವುದು ಎಂದರು.

ಯೋಜನೆಯ ಜಾರಿ ವಿಧಾನ: ಪ್ರಾಣಿಗಳಿಗೆ ಆಹಾರ ನೀಡುವ ಪ್ರಾಣಿ ಪ್ರಿಯರ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು. ನಂತರ ಪೌರ ಕಾರ್ಮಿಕರು ಮತ್ತು ಖಾಸಗಿ ಹೋಟೆಲ್ ಮಾಲೀಕರನ್ನು ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಿ ಆಹಾರ ನೀಡುವ ಸ್ಥಳಗಳನ್ನು ಗುರುತಿಸಿ ಬೀದಿ ನಾಯಿಗಳಿಗೆ ಸರಿಯಾಗಿ ಆಹಾರ ಸಿಗುವಂತೆ ಮಾಡುವುದು.

ಅದಾದ ಬಳಿಕ ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಆಯ್ದ ಸ್ಥಳಗಳಲ್ಲಿ ಅನುಷ್ಠಾನಗೊಳಿಸಿ ಎಲ್ಲ ಪಾಲುದಾರರ ಪ್ರತಿಕ್ರಿಯೆಯನ್ನು ಸಂಗ್ರಹಿಸಲಾಗುವುದು. ಯೋಜನೆ ಯಶಸ್ವಿಯಾದಲ್ಲಿ ಪಾಲಿಕೆಯ ಎಲ್ಲ ವಾರ್ಡ್‌ಗಳಲ್ಲಿ ಈ ಅಭಿಯಾನವನ್ನು ಅನುಷ್ಠಾನಗೊಳಿಸುವುದು.

ವಿವರವಾದ ಯೋಜನೆಯ ಶೀಘ್ರ ಬಿಡುಗಡೆ: ಸಮುದಾಯದ ಪ್ರಾಣಿಗಳಿಗೆ ಉತ್ತಮ ಸಹಾಯ ಮಾಡಲು ಕೇರ್‌ಟೇಕರ್‌ಗಳನ್ನು ಬಲಪಡಿಸುವುದರ ಜೊತೆಗೆ, ಪ್ರಾಣಿಗಳ ಸಂರಕ್ಷಣೆ ಕಾರ್ಯಾಚರಣೆ ಹಾಗೂ ಶಸ್ತ್ರಚಿಕಿತ್ಸಾ ನಂತರದ ಆರೈಕೆ, ವೈದ್ಯಕೀಯ ಮೇಲ್ವಿಚಾರಣೆಗೆ ಅಗತ್ಯವಿರುವ ಸಂದರ್ಭಗಳಲ್ಲಿ ಪ್ರತ್ಯೇಕ ವಲಯಗಳಲ್ಲಿ ರಕ್ಷಣೆ ಮತ್ತು ಚೇತರಿಸಿಕೊಳ್ಳುವಿಕೆಯನ್ನು ಬೆಂಬಲಿಸುವ ಸಾಮರ್ಥ್ಯವನ್ನು ಪಾಲಿಕೆ ನಿರ್ಮಿಸುತ್ತಿದೆ. ಈ ಕುರಿತು ವಿವರವಾದ ಯೋಜನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು.

ಪ್ರಾಣಿ ಪಾಲಕರು ನೋಂದಣಿ ಮಾಡಿಕೊಳ್ಳಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಯಿಗಳಿಗೆ ಆಹಾರ ನೀಡುತ್ತಿರುವ ಪ್ರಾಣಿ ಪಾಲಕರು ಪಾಲಿಕೆ ಪಶುಸಂಗೋಪನಾ ಇಲಾಖೆಯಿಂದ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು.

ಪಶಸಂಗೋಪನೆ ವಿಬಾಗದ ಸಾಮಾಜಿಕ ಜಾಲತಾಣವಾದ X, Facebook ಮತ್ತು Instagram (@bbmp_animalhusbandry) ಪುಟಗಳಲ್ಲಿ ನೋಂದಣಿಯ ಮಾಡಿಕೊಳ್ಳುವ ಲಿಂಕ್ ಅನ್ನು ನೀಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆಯನ್ನು ಯಶಸ್ವಿಗೊಳಿಸಲು ಪಾಲಿಕೆ ಜೊತೆ ಕೈಜೋಡಿಸುವಂತೆ ಎಲ್ಲಾ ಸಮುದಾಯ ಪ್ರಾಣಿ ಪಾಲಕರಲ್ಲಿ ಕೋರಲಾಗಿದೆ.

ನೋಂದಣಿ ಕಡ್ಡಾಯವಲ್ಲ: ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ಪಾಲಕರ ನೋಂದಣಿಯು 2ನೇ ಅಕ್ಟೋಬರ್ 2024 ರಿಂದ ಪ್ರಾರಂಭವಾಗಲಿದ್ದು, 31ನೇ ಅಕ್ಟೋಬರ್ 2024ರವರೆಗೆ ನೊಂದಣಿಯಾಗಲು ಅವಕಾಶವಿರುತ್ತದೆ. ಪ್ರಾಣಿ ಪಾಲಕರ ನೋಂದಣಿ ಕಡ್ಡಾಯವಾಗಿರುವುದಿಲ್ಲ. ಈ ನೋಂದಣಿಯು ಅಭಿಯಾನವನ್ನು ಯೋಜಿಸಲು ಮತ್ತು ಅದನ್ನು ಸಮರ್ಥನೀಯವಾಗಿ ಡೇಟಾಬೇಸ್ ರಚಿಸುವ ದೃಷ್ಟಿಯಿಂದ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ.

ಪಾಲಿಕೆ ಜೊತೆ ಕೈ ಜೋಡಿಸಿ: ಬೀದಿ ನಾಯಿಗಳಿಗೆ ಆಹಾರ ನೀಡುವ ಅಭಿಯಾನದ ಮೂಲಕ, ನಾಗರೀಕರಲ್ಲಿ ಸಹಾನುಭೂತಿಯ ಅರ್ಥವನ್ನು ಹಾಗೂ ಪ್ರಾಣಿಗಳೊಂದಿಗಿನ ಸಹಬಾಳ್ವೆಯ ಅನುಕೂಲವನ್ನು ಮನವರಿಕೆ ಮಾಡಲು Coexisting Champion ಆಗಿ ಪಾಲಿಕೆ ಜೊತೆ ಕೈ ಜೋಡಿಸಲು ಕೋರುತ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸ್ಥಳೀಯರು ತಮ್ಮ ಪ್ರದೇಶದಲ್ಲಿ ಸಮುದಾಯದ ಪ್ರಾಣಿಗಳ ಆರೈಕೆಯ ಸಾಮಾಜಿಕ ಕಾಳಜಿಯ ಕಾರ್ಯವನ್ನು ಕೈಗೊಳ್ಳಲು ಪ್ರೋತ್ಸಾಹಿಸಲು ಕೋರಿದೆ.

1533ಗೆ ಕರೆ ಮಾಡಿ: ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಪಾಲಿಕೆಯ ಪಶಸಂಗೋಪನಾ ವಿಭಾಗದಿಂದ ಸಾಕಷ್ಟು ಉಪ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಾಗರೀಕರಿಗೆ ಅಗತ್ಯವಿರುವ ಯಾವುದೇ ಸಹಾಯಕ್ಕಾಗಿ ಬಿಬಿಎಂಪಿ ಸಹಾಯವಾಣಿ ಸಂಖ್ಯೆಯಾದ 1533 ಗೆ ಸಂಪರ್ಕಿಸಬಹುದು.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!