NEWSಉದ್ಯೋಗನಮ್ಮರಾಜ್ಯ

ಎಸ್‌ಸಿ ಒಳಮೀಸಲಾತಿ ಅಳವಡಿಸಿಕೊಂಡು ಹೊಸ ನೇಮಕಾತಿಗೆ ಸರ್ಕಾರ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸೆ.4ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ ಮಂಡಳಿ/ ನಿಗಮ/ ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.‌

ಅಲ್ಲದೆ ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ (Time Bound) ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಸೂಚಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ ಮಂಡಳಿ/ ನಿಗಮ/ ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ  ಎಲ್ಲ ನೇಮಕಾತಿ ಅಧಿಸೂಚನೆಗಳನ್ನೂ ಸಹ ರದ್ದುಗೊಳಿಸಿದೆ.

ಬಳಿಕ ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದೂ ಸಹ ಹಾಗೂ ಕಾಲಬದ್ದವಾಗಿ (Time Bound) ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೂಳಿಸಲು ಎಲ್ಲ ನೇಮಕಾತಿ, ಆಯ್ಕೆ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

ವಿಜಯಪಥ - vijayapatha.in
Megha
the authorMegha

Leave a Reply

error: Content is protected !!