NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ರಾಜ್ಯ ರಾಜಕಾರಣದಲ್ಲಿ ದೊಡ್ಡ ತಿರುವು: ಬಿಎಸ್‍ವೈ ಉತ್ತರಾಧಿಕಾರಿ ಹುಡುಕಾಟದಲ್ಲಿದೆಯೇ ಹೈಕಮಾಂಡ್?

ಖುರ್ಚಿ ಉಳಿಸಿಕೊಳ್ಳಲು ನ್ಯೂಡೆಲ್ಲಿಗೆ ಹೋದ್ರಾ ಸಿಎಂ? l ಮೂವರು ಶಾಸಕರ ಗುರುತಿಸಿದ ಹೈಕಮಾಂಡ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಾಜ್ಯದಲ್ಲಿ ಕೊರೊನಾ ಒಂದುಕಡೆ, ಇನ್ನೊಂದುಕಡೆ ಡ್ರಗ್ಸ್ ಕೇಸ್  ಈ ಮಧ್ಯೆ, ರಾಜ್ಯ ರಾಜಕೀಯ ತಿರುವುಗಳ ಮೇಲೆ ತಿರುವು ಪಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಬಹು ದಿನಗಳ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ನ್ಯೂಡೆಲ್ಲಿ ಯಾತ್ರೆ ಕೈಗೊಂಡಿರುವುದು ಇದಕ್ಕೆ ಇನ್ನಷ್ಟು ಪುಷ್ಟಿ ನೀಡುತ್ತಿದೆ.

ಹೌದು! ಸಿಎಂ ಯಡಿಯೂರಪ್ಪ ನ್ಯೂಡೆಲ್ಲಿಗೆ ಹೋಗಿರುವುದು ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯುವುದಕ್ಕೆ ಎಂದು ಸಂಪುಟ ಆಕಾಂಕ್ಷಿಗಳು, ಬಿಜೆಪಿ ಕೆಲ ಶಾಸಕರು, ನಾಯಕರು ಭಾವಿಸಿದ್ದಾರೆ. ಆದರೆ ಬಿಎಸ್‌ವೈ ನ್ಯೂಡೆಲ್ಲಿಗೆ ಹೋಗಲು ಬೇರೆಯದ್ದೇ ಕಾರಣವಿದೆ ಎಂಬ ಮಾತುಗಳು ಪಕ್ಷದೊಳಗಿನ ಬಣಗಳೊಳಗೆ ಕೇಳಿಬರುತ್ತಿವೆ. ಶೀಘ್ರವೇ ಸಂಪುಟ ಪುನಾರಚನೆ ಮಾತ್ರವಲ್ಲ. ಮುಖ್ಯಮಂತ್ರಿಯೂ ಬದಲಾದರೂ ಅಚ್ಚರಿ ಇಲ್ಲ ಎಂಬ ಮಾತು ಗುನುಗುತ್ತಿದೆ.

ವರ್ಷದಿಂದ ಯಡಿಯೂರಪ್ಪ ಉತ್ತರಾಧಿಕಾರಿಯ ಬೇಟೆಯಲ್ಲಿ ತೊಡಗಿರುವ ಹೈಕಮಾಂಡ್, ಈಗಾಗಲೇ ಲಿಂಗಾಯತ ಸಮುದಾಯದ ಮೂವರು ಶಾಸಕರನ್ನು ಇದಕ್ಕಾಗಿ ಗುರುತಿಸಿದೆ. ಅಷ್ಟೇ ಅಲ್ಲ ಈ ಬಗ್ಗೆಅಳೆದು ತೂಗಿ ಒಂದು ಹೆಸರನ್ನು ಅಂತಿಮ ಮಾಡುವುದು ಮಾತ್ರ ಬಾಕಿಯಿದೆ ಉಳಿದಿದೆ ಎಂದು ಕೂಡ ಹೇಳಲಾಗುತ್ತಿದೆ.

ಈ ವಿಚಾರ ತಿಳಿದೇ ಸಿಎಂ ತಮ್ಮ ಖುರ್ಚಿ ಉಳಿಸಿಕೊಳ್ಳುವ ಕಸರತ್ತನ್ನು ಆರಂಭಿಸಿದ್ದು ತರಾತುರಿಯಲ್ಲಿ ನ್ಯೂಡೆಲ್ಲಿ ಯಾತ್ರೆ ಕೈಗೊಂಡಿದ್ದಾರೆ. ಆದರೆ ಆ ಮೂವರಲ್ಲಿ ಯಾರು ಬೆಸ್ಟ್ ಅಂತಾ ನಿಮ್ಮ ಅಭಿಪ್ರಾಯ ಹೇಳಿ ಎಂದು ಕೇಳಲು ಹೈಕಮಾಂಡ್ ಕೇಳುತ್ತಿದೆ ಎಂಬ ಮಾತುಗಳು ಪಕ್ಷದ ಬಣದೊಳಗಿನ ಅಂಗಳದಲ್ಲಿ ಪ್ರತಿಧ್ವನಿಸುತ್ತಿದೆ ಎನ್ನಲಾಗಿದೆ.

ಈ ಬಾರಿಯ ನ್ಯೂಡೆಲ್ಲಿಯಾತ್ರೆಯಲ್ಲಿ, ಎದುರಾಳಿಗಳನ್ನು ಹತ್ತಿಕ್ಕುವಲ್ಲಿ ಯಡಿಯೂರಪ್ಪ ಯಶಸ್ವಿಯಾಗುತ್ತಾರೋ ಅಥವಾ ವಿಫಲರಾಗಿ ಬಂದ ದಾರಿಗೆ ಸುಂಕವಿಲ್ಲ ಎಂದು ಬರಿಗೈಯಲ್ಲಿ ಹಿಂದಿರುಗುತ್ತಾರೆ ಎಂಬ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಮನೆ ಮಾಡಿದೆ.

75 ವರ್ಷ ಮೀರಿದವರಿಗೆ ಅಧಿಕಾರವಿಲ್ಲ
ಬಿಎಸ್‍ವೈ ಸ್ಥಾನದಲ್ಲಿ ಲಿಂಗಾಯತರನ್ನೇ ಕೂರಿಸಲು ಹೈಕಮಾಂಡ್ ಒಲವು ವ್ಯಕ್ತಪಡಿಸಿದೆ ಎನ್ನಲಾಗುತ್ತಿದೆ. ಈ ಸಂಬಂಧವಾಗಿ ಉತ್ತರ ಕರ್ನಾಟಕದ ಮೂವರು ಶಾಸಕರನ್ನ ಗುರುತಿಸಿದೆ. `ಆ’ ಮೂವರು ಲಿಂಗಾಯತ ಶಾಸಕರ ಸಂಪರ್ಕ, ಪಕ್ಷದಲ್ಲಿ ಮಾಡಿರುವ ಕೆಲಸ ಸೇರಿ ಸಂಪೂರ್ಣ ಜಾತಕವನ್ನು ಹೈಕಮಾಂಡ್‌ ಕಲೆಹಾಕುತ್ತಿದೆ.

ಅದಕ್ಕೆ ಕಾರಣವು ಇಲ್ಲದಿಲ್ಲ, ಯಡಿಯೂರಪ್ಪನವರಿಗೆ ಈಗ 77 ವರ್ಷ. ಆದರೆ ಬಿಜೆಪಿಯಲ್ಲಿ 75 ವರ್ಷ ಮೀರಿದವರಿಗೆ ಅಧಿಕಾರವಿಲ್ಲ ಎಂಬ ಗೆರೆಯನ್ನು ಈಗಾಗಲೇ ಹಾಕಲಾಗಿದೆ. ಹೀಗಾಗಿ ಪಕ್ಷದ ಭವಿಷ್ಯದ ದೃಷ್ಟಿಯಿಂದ ಶೀಘ್ರ ಉತ್ತರಾಧಿಕಾರಿ ನೇಮಕಕ್ಕೆ ಹೈಕಮಾಂಡ್‌ ಒಲವು ತೋರಿದೆ ಎಂದು ಹೇಳಲಾಗುತ್ತಿದೆ.

ಇನ್ನು ಆ ಮೂವರು ಶಾಸಕರ ವಯಸ್ಸು 51 ರಿಂದ 56 ವರ್ಷ ಆದರೆ ಈ ಮೂವರು ಶಾಸಕರಿಗೂ ಮಾಸ್ ಇಮೇಜ್ ಇಲ್ಲ. ಆದರೂ ಕುತೂಹಲಕಾರಿ ವಿಷಯವೆಂದರೆ ಮೂವರ ಪಟ್ಟಿಯನ್ನು ಹೈಕಮಾಂಡ್ ಸಿದ್ಧಪಡಿಸಿದೆ. ಬಿಎಸ್‍ವೈ ಬಳಿ ಈ ಬಗ್ಗೆ ಪ್ರಸ್ತಾಪಿಸಿ ಅಭಿಪ್ರಾಯ ಪಡೆಯಲು ಪ್ಲಾನ್ ಮಾಡಿದೆ. ಈ ನಡುವೆ ಅವರ ಪ್ಲಾನ್‌ ತಿಳಿದ ಬಿಎಸ್‌ವೈ ಅವರು ಇನ್ನೊಂದಿಷ್ಟು ದಿನ ನನಗೆ ಟೈಮ್ ಕೊಡಿ ಎಂದು ಕೇಳು ಪ್ಲಾನ್‌ ಅನ್ನು ಮಾಡಿಕೊಂಡು ಸಿದ್ಧರಾಗಿಯೇ ಹೋಗಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...