NEWSರಾಜಕೀಯ

ಸೋಲಿನ ಕಹಿ: ಜನತಾಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ – ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಿರಾ ಮತ್ತು ಆರ್‌ಆರ್‌ ನಗರ ಉಪ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಗಳು ಮೂರನೇ ಸ್ಥಾನ ಪಡೆದಿದ್ದು, ಈ ರಾಜ್ಯದ ಮತದರರು ಕೊಟ್ಟ ತೀರ್ಪಿಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಸಮಾಧಾನದಿಂದಲೇ ಒಪ್ಪಿಕೊಂಡಿದ್ದಾರೆ.

ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ ಎಂದು ದರಣಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಈ ಫಲಿತಾಂಶದ ಹಿನ್ನಡೆಯಿಂದ ನಮ್ಮ ಪಕ್ಷದ ಕಾರ್ಯಕರ್ತರು ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ ಎಂದು ತಿಳಿಸಿದ್ದಾರೆ.

ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಿರಲಿಲ್ಲ. ಕೇವಲ 2 ಸೀಟು ಪಕ್ಷಕ್ಕೆ ಬಂದಿದ್ದ ಕಾಲವೊಂದಿತ್ತು. ಆನಂತರ ಇದೇ ಜನತೆ ಮುಖ್ಯಮಂತ್ರಿ ಮಾಡಿದರು, ಜನಾಶೀರ್ವಾದದಿಂದ ಪ್ರಧಾನಿಯಾದರು. ಉಪಚುನಾವಣೆ ಫಲಿತಾಂಶದಿಂದ ಕುಗ್ಗಿ ಹೋಗದೆ, ಪಕ್ಷವನ್ನು ಸಂಘಟಿಸಿ ಬಲಪಡಿಸುವತ್ತ ಗಮನಹರಿಸುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದು ಸರಣಿ ಟ್ವೀಟ್‌ ಮಾಡಿ ವ್ಯಂಗ್ಯವಾಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ