NEWSನಮ್ಮರಾಜ್ಯಸಂಸ್ಕೃತಿ

ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಂದ ದಸರಾ ಉದ್ಘಾಟನೆ, ಸರ್ಕಾರದ ಗೌರವಕ್ಕೆ ಆಭಾರಿ: ಡಾ.ಮಂಜುನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದಸರಾ ಉದ್ಘಾಟನೆಗೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವೈದ್ಯರಿಗೆ ಸರ್ಕಾರ ಆಹ್ವಾನ ನೀಡಿದೆ. ಹೀಗಾಗಿ ಸಿಎಂ ಡಿಸಿಎಂ ಸಚಿವರ ಗೌರವಕ್ಕೆ ನಾನು ಆಭಾರಿಯಾಗಿರುತ್ತೇನೆ ಎಂದು ಹೃದ್ರೋಗ ತಜ್ಞ ಡಾ.ಮಂಜುನಾಥ್ ಹೇಳಿದ್ದಾರೆ.

ದಸರಾ ಉದ್ಘಾಟನೆಗೆ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಸಂತವಾಗಿದೆ ಎಂದು ಸುದ್ದಿಗಾರರೊಂದದಿಗೆ ಖುಷಿ ಹಂಚಿಕೊಂಡರು. ಕೊರೊನಾ ವಾರಿಯರ್ಸ್‍ಗೆ ಗೌರವ ಸಲ್ಲಿಸುವ ಸಲುವಾಗಿ ವಿಶ್ವವಿಖ್ಯಾತ ದಸರಾ ಉದ್ಘಾಟನೆಗೆ ನನ್ನನ್ನು ಆಹ್ವಾನ ಮಾಡಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆ ಆಹ್ವಾನ ನೀಡಿದ್ದಾರೆ. ಸರ್ಕಾರದ ಗೌರವಕ್ಕೆ ನಾನು ಆಭಾರಿಯಾಗಿರುತ್ತೇನೆ. ಜೊತೆಗೆ ಕೊರೊನಾ ನಡುವೆ ದಸರಾ ನಡೆಯುತ್ತಿದೆ. ಹೀಗಾಗಿ ಸರ್ಕಾರದ ಜತೆಗೆ ಸಾರ್ವಜನಿಕರು ಎಚ್ಚರಿ ವಹಿಸಬೇಕು ಎಂದರು.

ಕೊರೊನಾಕ್ಕೆ ಇನ್ನೂ ವ್ಯಾಕ್ಸಿನ್ ಇಲ್ಲ. ವ್ಯಾಕ್ಸಿನ್ ಅಂದರೆ ಅದು ಕೇವಲ ಮಾಸ್ಕ್ ಮಾತ್ರ. ಮಾಸ್ಕ್ ಹಾಕಿಕೊಂಡು, ಸಾಮಾಜಿಕ ಅಂತರ ಕಾಪಾಡಬೇಕು. ಬಹುಮುಖ್ಯವಾಗಿ ಮಾತನಾಡುವಾಗ ಮಾಸ್ಕ್ ಹಾಕಿಕೊಂಡು ಮಾತನಾಡಿ. ರೋಗದಿಂದ ದೂರ ಇರೋದು ನಿಮ್ಮ ಎಚ್ಚರಿಕೆಯ ಕೆಲಸವಾಗಿದೆ ಎಂದು ಡಾ.ಮಂಜುನಾಥ್ ಸಾರ್ವಜನಿಕರ ಬಳಿ ಮನವಿ ಮಾಡಿದರು.

ಇನ್ನು ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಮೈಸೂರು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದ ತಂಡ ಸೋಮವಾರ (ಇಂದು) ಸಿಎಂ ಯಡಿಯೂರಪ್ಪಗೆ ಅಧಿಕೃತವಾಗಿ ಆಹ್ವಾನ ನೀಡಿದೆ. ಮೈಸೂರು ಪೇಟ ಮತ್ತು ರೇಷ್ಮೆ ಶಾಲು ಹೊದಿಸಿ ಉದ್ಘಾಟನೆಗೆ ಡಾ.ಮಂಜುನಾಥ್ ಅವರಿಗೂ ಆಹ್ವಾನ ನೀಡಿದೆ.

ಅಕ್ಟೋಬರ್ 17ರಂದು ಆರಂಭವಾಗಲಿರುವ ಜಗತ್ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಿದರು. ಮೈಸೂರು ನಗರದ ಮೇಯರ್ ತಸ್ನಿಂ, ಅಧಿಕಾರಿಗಳೊಂದಿಗೆ ಡಿಸಿಎಂ ನಿವಾಸಕ್ಕೆ ಭೇಟಿ ನೀಡಿದ ಸಚಿವರು, ಉಪ ಮುಖ್ಯಮಂತ್ರಿಗಳಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ ನಾಡಹಬ್ಬದಲ್ಲಿ ಪಾಲ್ಗೊಳ್ಳುವಂತೆ ಆತ್ಮೀಯವಾಗಿ ಸ್ವಾಗತ ಕೋರಿದರು.

ಚಾಮುಂಡಿಬೆಟ್ಟದಲ್ಲಿ ನಾಡಹಬ್ಬಕ್ಕೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ ಜೋಷಿ, ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಜೊತೆಗೆ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ.ರವಿ ಮತ್ತಿತರರು ಭಾಗಿಯಾಗಲಿದ್ದಾರೆ.

 

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...