NEWSಕ್ರೀಡೆ

ಐಪಿಎಲ್ 2020: ಹಾಲಿ ಚಾಂಪಿಯನ್ ಬಗ್ಗುಬಡಿದ ಚೆನ್ನೈ ಸೂಪರ್ ಕಿಂಗ್ಸ್

ವಿಜಯಪಥ ಸಮಗ್ರ ಸುದ್ದಿ

ಅಬುದಾಬಿ: ಕೊರೊನಾ ಆತಂಕದ ನಡುವೆಯೂ ಇಲ್ಲಿನ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2020 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಐದು ವಿಕೆಟ್‌ಗಳ ಅಂತರದಲ್ಲಿ ಸೋಲಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವನ್ನು ಮುಡಿಗೇರಿಸಿಕೊಂಡು ನಗೆಯ ಬುಗ್ಗೆ ಹರಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ಮುಂಬೈ ಇಂಡಿಯನ್ಸ್ ಪರ ಸೌರಭ್ ತಿವಾರಿ 42, ಕ್ವಿಂಟನ್ ಡಿ ಕಾಕ್ 33, ಕೀರನ್ ಪೊಲಾರ್ಡ್ 18 ರನ್ ಗಳಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಬೌಲಿಂಗ್ ಮಾಡಿದ ಲುಂಗಿ ಎನ್ಗಿಡಿ 4 ಓವರ್ ಗಳಲ್ಲಿ 38 ರನ್ ಗಳಿಗೆ 3 ವಿಕೆಟ್ ಪಡೆದರೆ, ದೀಪಕ್ ಚಹರ್, 4 ಓವರ್ ಗಳಲ್ಲಿ 32 ರನ್ ಗಳಿಗೆ 2 ವಿಕೆಟ್ ಹಾಗೂ ರವೀಂದ್ರ ಜಡೇಜಾ 4 ಓವರ್ ಗಳಲ್ಲಿ 42 ರನ್ ನೀಡಿ 2 ವಿಕೆಟ್ ಪಡೆದುಕೊಂಡರು.

ಮುಂಬೈ ಇಂಡಿಯನ್ಸ್ ನೀಡಿದ 162 ರನ್ ಗಳ ಗುರಿ ಬೆನ್ನತ್ತಿದ್ದ ಸೂಪರ್ ಕಿಂಗ್ಸ್ ತಂಡ 19.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 166 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿತು. ಚೆನ್ನೈ ಸೂಪರ್ ಕಿಂಗ್ಸ್ ಪರ ಅಂಬಟಿ ರಾಯುಡು ಆಕರ್ಷಕ 71, ಪಾಫ್ ಡು ಪ್ಲೆಸ್ಸಿಸ್ 58, ಸ್ಯಾಮ್ ಕರನ್ 18ರನ್ ಗಳಿಸಿದರು.

ಮುಂಬೈ ಇಂಡಿಯನ್ಸ್ ಪರ ಟ್ರೆಂಟ್ ಬೌಲ್ಟ್ ಹಾಗೂ ಜೇಮ್ಸ್ ಪ್ಯಾಟಿನ್ಸನ್ ಹಾಗೂ ರಾಹುಲ್ ಚಹರ್ ತಲಾ ಒಂದೊಂದು ವಿಕೆಟ್ ಗಳನ್ನು ಪಡೆದುಕೊಂಡರು. ಅಂಬಟಿ ರಾಯುಡು ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?