ಬೆಂಗಳೂರು: ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ವಿರುದ್ಧ ರಾಜ್ಯ ರೈತರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಸೋಮವಾರ ಬೆಳಗ್ಗೆ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಟ 500ಕ್ಕೂ ಹೆಚ್ಚು ಜನರಿದ್ದ ರೈತರು ಫ್ರೀಡಂಪಾರ್ಕ್ ತಲುಪಿ ಹೋರಾಟ ನಡೆಸುತ್ತಿದ್ದಾರೆ.
ಕಾಯ್ದೆ ವಿರುದ್ಧ ಮಾತನಾಡಿದ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ನೀವು ಕಾಯ್ದೆ ತಿದ್ದುಪಡಿ ಮಾಡಿರುವುದು ರೈತರಿಗೆ ಅನುಕೂಲವಾಗಲಿ ಎಂದು ಅಲ್ಲ ಬದಲಿಗೆ ಕಾರ್ಪೋರೇಟ್ ಕಂಪನಿಗಳಿಗೆ ಅನುವು ಮಾಡಿಕೊಡಲು, ಅವರು ಎಲ್ಲಿ ಬೇಕಾದರೂ ಭೂಮಿ ಖರೀದಿಸಲು ಅನುಕೂಲ ಮಾಡಿಕೊಟ್ಟಿದ್ದೀರಿ ಇದು ರೈತರಿಗೆ ಮರಣ ಶಾಸನವಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ನಡುವೆ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ರಾಜ್ಯ ಸಭೆಯ ಎಂಟು ಮಂದಿ ಸದಸ್ಯರನ್ನು ಒಂದು ವಾರ ಅಮಾನತು ಮಾಡಲಾಗಿದೆ. ಇದನ್ನು ವಿರೋದಿಸಿ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ರಸ್ತೆಗಿಳಿದು ಹೋರಾಟ ಮಾಡುತ್ತಿದ್ದಾರೆ.
ಜತೆಗೆ ರೈತರಿಗೆ ಅನುಕೂಲವಾಗುವಂತಹ ಮಸೂದೆ ಜಾರಿಗೆ ತರಲು ಒತ್ತಾಯಿಸಿದ್ದು, ಅಹೋರಾತ್ರಿ ಧರಣಿ ನಡೆಸಲು ಸಹ ಮುಂದಾಗಿದ್ದಾರೆ.
Dombharatada sarkara nadiyali