NEWSನಮ್ಮಜಿಲ್ಲೆರಾಜಕೀಯ

ಬಡವರ ಅನ್ನ ಕಸಿಯಲು ಹೊರಟಿದೆ ಬಿಜೆಪಿ: ಎಎಪಿ ಮಾಧ್ಯಮ ಸಂಚಾಲಕ ಜಗದೀಶ್ ಸದಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದ ದಿನದಿಂದ ಇಂದಿರಾ ಕ್ಯಾಂಟೀನ್ ಮುಚ್ಚಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹವಣಿಸುತ್ತಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದು ಸರ್ಕಾರ ಬಡವರ ಪಾಲಿನ ಅನ್ನ ಕಸಿಯುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದ್ದಾರೆ.

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ನಗರಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯ, ತಿರಸ್ಕಾರ ಭಾವದಿಂದ ನೋಡಲಾಗುತ್ತಿದೆ ಎಂದರು.

ಲಾಕ್‌ಡೌನ್ ಸಂದರ್ಭದಲ್ಲಿ ಬಡವರಿಗೆ, ವಲಸೆ ಕಾರ್ಮಿಕರಿಗೆ ಊಟ ನೀಡಿ ಎಂದು ಆಮ್ ಆದ್ಮಿ ಪಕ್ಷ ಎಷ್ಟೇ ಒತ್ತಾಯಿಸಿದರೂ, ಉಚಿತವಾಗಿ ಊಟ ನೀಡಲಿಲ್ಲ. ದೆಹಲಿಯಲ್ಲಿ ಇಷ್ಟು ಸುಸಜ್ಜಿತವಾದ ವ್ಯವಸ್ಥೆ ಇಲ್ಲದಿದ್ದರೂ ಪ್ರತಿದಿನ 13 ಲಕ್ಷ ಜನರಿಗೆ ಊಟ ನೀಡಲಾಗುತ್ತಿತ್ತು. ಆದರೆ ನಮ್ಮ ರಾಜ್ಯದಲ್ಲಿ ವ್ಯವಸ್ಥಿತವಾಗಿ ಇರುವ ಯೋಜನೆಯನ್ನು ಉಪಯೋಗಿಸಿಕೊಳ್ಳದೆ ಬಡವರನ್ನು ಹಸಿವಿನಲ್ಲೆ ಮಲಗಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ, ಮುಖ್ಯಮಂತ್ರಿಗಳಿಗೆ, ಸಚಿವ ಸುರೇಶ್ ಕುಮಾರ್ ಅವರಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವರಾದ ಸುರೇಶ್ ಕುಮಾರ್, ಅಶ್ವಥ್ ನಾರಾಯಣ ಮೊದಲಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚಲು ಚಿತಾವಣೆ ನಡೆಸುತ್ತಿದ್ದಾರೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಮಮಾರ್ಗದ ಮೂಲಕ ಮೂಲ ಸೌಕರ್ಯಗಳಿಗೆ ಕತ್ತರಿ ಹಾಕುವ ಹಾಗೂ ಸರಿಯಾಗಿ ಬಿಲ್‌ ಗಳನ್ನು ಬಿಡುಗಡೆ ಮಾಡದೆ ಉಸಿರುಗಟ್ಟಿಸಲಾಗುತ್ತಿದೆ. ಬಡವರ ಅನ್ನ ಕಿತ್ತುಕೊಳ್ಳುವುದಕ್ಕೆ ನೇರ ಕಾರಣ ಸಚಿವ ಸುರೇಶ್ ಕುಮಾರ್ ಎಂದು ದೂರಿದರು.

ಇಂದಿರಾ ಕ್ಯಾಂಟೀನ್‌ ಊಟದ ಗುತ್ತಿಗೆ ಪಡೆದಿರುವ ಚೆಫ್ ಟಾಕ್ ಮತ್ತು ರಿವಾಡ್ರ್ಸ್ ಎಂಬ ಸಂಸ್ಥೆಗಳ ವಿರುದ್ದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಹಣಕಾಸು ವಿಭಾಗದ ಜಂಟಿ ಆಯುಕ್ತ ವೆಂಕಟೇಶ್ ಅವರು ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ದೂರು ದಾಖಲಿಸಿದ್ದರು. ಈ ಬಗ್ಗೆಯೂ ತನಿಖೆ ನಡೆಸಿಲ್ಲ, ಗುತ್ತಿಗೆದಾರರನ್ನು ಬದಲಾಯಿಸಲಾಗುವುದು ಎಂದು ಹೇಳಿ ಆ ಕೆಲಸವನ್ನೂ ಮಾಡದೆ ಏಕೆ ವಿಳಂಬ ಮಾಡುತ್ತಿದ್ದೀರಿ? ಬಡವರ, ಕೂಲಿ ಕಾರ್ಮಿಕರ, ನಿರ್ಗತಿಕರ ಪಾಲಿನ ಅನ್ನಕ್ಕೂ ಕನ್ನ ಹಾಕುವ ಬಿಜೆಪಿಯ ಈ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಕೂಡಲೇ ಇಂದಿರಾ ಕ್ಯಾಂಟೀನ್‌ಗೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ಬಿಲ್‌ಗಳನ್ನು ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕು ಎಂದು ಹೇಳಿದರು.

ಗೋಷ್ಠಿಯಲ್ಲಿ ವಸಂತ ನಗರ ವಾರ್ಡ್ ಅಧ್ಯಕ್ಷೆ ಜನನಿ ಭರತ್ ಇದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...