NEWSಕೃಷಿದೇಶ-ವಿದೇಶರಾಜಕೀಯ

ಅನ್ನಕೊಡುವ ರೈತರನ್ನು ಉಗ್ರಗಾಮಿಗಳೆನ್ನುವ ನೀಚಮಟ್ಟಕ್ಕೆ ಇಳಿದಿದೆ ಕೇಂದ್ರ ಸರ್ಕಾರ: ಸಿದ್ದು ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರದ ನಿರ್ಲಕ್ಷದಿಂದ ರೈತರು ಇನ್ನಷ್ಟು ರೊಚ್ಚಿಗೆದ್ದರೆ ಮುಂದಿನ ಅನಾಹುತಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಕಾರಣರಾಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮೋದಿ ನೇತೃತ್ವದ ಸರ್ಕಾರ ರೈತ ಹೋರಾಟಗಾರರ ತಾಳ್ಮೆಯನ್ನು ಪರೀಕ್ಷಿಸುವ ದುಸ್ಸಾಹಸಕ್ಕೆ ಇಳಿಯದೆ, ತಕ್ಷಣ ಕೃಷಿಕ್ಷೇತ್ರಕ್ಕೆ ಮಾರಕವಾಗಿರುವ 3 ‘ಕಪ್ಪು ಕಾನೂನು’ಗಳನ್ನು ರದ್ದುಗೊಳಿಸಿ ಬಿಕ್ಕಟ್ಟನ್ನು ಪರಿಹರಿಸಬೇಕು ಎಂದು ಸರಣಿ ಟ್ವಿಟ್‌ ಮೂಲಕ ಸಲಹೆ ನೀಡಿದ್ದಾರೆ.

ದೇಶವನ್ನು ಕಾಂಗ್ರೆಸ್ ಮುಕ್ತ ಮಾಡಿದ್ದೇವೆ ಎಂದು ಇಲ್ಲಿಯ ವರೆಗೆ ಬಡಾಯಿ ಬಿಡುತ್ತಾ ಬಂದ ಬಿಜೆಪಿ, ಈಗ ದೆಹಲಿಯಲ್ಲಿನ ರೈತ ಹೋರಾಟದ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂದು ಹೇಳುತ್ತಿರುವುದು ತಮಾಷೆಯಾಗಿದೆ. ಕಾಂಗ್ರೆಸ್ ಪಕ್ಷ ರೈತಹೋರಾಟಗಾರರ ಹಿಂದೆ ಇಲ್ಲ, ಅವರ ಜೊತೆಯಲ್ಲಿದೆ ಎಂದು ಹೇಳಿದ್ದಾರೆ.

ದಲಿತರ ಪರ, ಮಾನವಹಕ್ಕುಗಳ ಪರವಾಗಿ ಹೋರಾಡುವವರನ್ನು ‘ಅರ್ಬನ್ ನಕ್ಸಲ್’ಗಳೆಂದು, ಕೋಮುವಾದದ ವಿರುದ್ಧ ಹೋರಾಡುವವರನ್ನು ದೇಶದ್ರೋಹಿಗಳೆಂದು ದೂಷಿಸುತ್ತ ಬಂದ ಕೇಂದ್ರ ಸರ್ಕಾರ ಈಗ ಅನ್ನಕೊಡುವ ರೈತರನ್ನು ಉಗ್ರಗಾಮಿಗಳೆನ್ನುವ ನೀಚಮಟ್ಟಕ್ಕೆ ಇಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದೆಡೆ ಗಂಭೀರವಾಗಿ ಮಾತುಕತೆಯನ್ನು ನಡೆಸದೆ, ಇನ್ನೊಂದೆಡೆ ರೈತ ಹೋರಾಟಗಾರರನ್ನು ಭಯೋತ್ಪಾದಕರು, ಉಗ್ರಗಾಮಿಗಳು ಎಂದೆಲ್ಲ ದೂಷಿಸುತ್ತಿರುವ ಸರ್ಕಾರ ಸಿಖ್ ಸಮುದಾಯಕ್ಕೆ ಮಾತ್ರವಲ್ಲ, ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ಹೋರಾಟ ನಡೆಸುತ್ತಿರುವ ರೈತರನ್ನು ಗೌರವಯುತವಾಗಿ ಕರೆದು, ಪ್ರಾಮಾಣಿಕವಾಗಿ ಮಾತುಕತೆ ನಡೆಸಬೇಕಾಗಿರುವ ಮೋದಿ ಸರ್ಕಾರ ಕಾಟಾಚಾರದ ಮಾತುಕತೆಯ ಮೂಲಕ ತನ್ನ ಸಹಜ ಸ್ವಭಾವವಾದ ಉದ್ದಟತನ ಮತ್ತು ಅಪ್ರಮಾಣಿಕತೆಯನ್ನು ಪ್ರದರ್ಶಿಸಿದೆ ಎಂದು ಆರೋಪಿಸಿದ್ದಾರೆ.

1 Comment

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ