NEWSನಮ್ಮಜಿಲ್ಲೆಸಂಸ್ಕೃತಿ

ನಾಳೆಯ ಕನ್ನಡಕ್ಕಾಗಿ ತಂತ್ರಾಂಶ ಬಳಕೆಗೆ ಹೆಚ್ಚಿನ ಆದ್ಯತೆ: ಟಿ.ಎಸ್. ನಾಗಾಭರಣ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕಲಬುರಗಿ: ತಂತ್ರಾಂಶ ಬಳಸಿಕೊಂಡು ಮುನ್ನಡೆದಾಗ ಮಾತ್ರ ಕನ್ನಡ ಉಳಿಸಿ-ಬೆಳೆಸಲು ಸಾಧ್ಯ ಎಂದು ಸಿನಿಮಾ ನಿರ್ದೇಶಕ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅಭಿಪ್ರಾಯಪಟ್ಟರು.

ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಸಹಯೋಗದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಹರಿಹರ ಸಭಾಂಗಣದಲ್ಲಿ ನಡೆದ `ಕವಿರಾಜಮಾರ್ಗ ಪರಿಸರದ ಭಾಷೆ ಮತ್ತು ಸಂಸ್ಕೃತಿ’ ರಾಜ್ಯ ಮಟ್ಟದ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿ, ಮುಂಬೈ ಕರ್ನಾಟಕ, ಕಲ್ಯಾಣ ಕರ್ನಾಟಕ ಎಂದು ಹೀಗೆ ಹರಿದು ಹಂಚಿಹೋಗಿರುವ ಮನೋಭಾವ, ಮನಸ್ಥಿತಿಯನ್ನು ಒಗ್ಗೂಡಿಸುವ ಕೆಲಸ ಆಗಬೇಕಿದೆ ಎಂದರು.

ಕರ್ನಾಟಕ ಸಾರಸ್ವತ ಲೋಕ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ `ಆದ್ಯರು’ ಎಂದರೆ ಕವಿರಾಜಮಾರ್ಗ ಪರಿಸರದ ಕಲ್ಯಾಣದ ನೆಲ. ಕನ್ನಡಕ್ಕೆ ಕಿರೀಟಪ್ರಾಯದಂತೆ. ಅತ್ಯಂತ ಶ್ರೀಮಂತವಾಗಿರುವ ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಯನ್ನು ಅರ್ಥಮಾಡಿಕೊಂಡು `ಭವಿಷ್ಯ’ದ ಕನ್ನಡ ಕಟ್ಟಬೇಕಾಗಿದೆ ಎಂದು ತಿಳಿಸಿದರು.

ಒಂದು ಪ್ರದೇಶದ ಅಭಿವೃದ್ಧಿಯನ್ನು ಕೇವಲ ರಸ್ತೆ ಮತ್ತು ಕಟ್ಟಡಗಳಿಂದ ಅಳೆಯಲು ಬರುವುದಿಲ್ಲ. ಅದು ನಮ್ಮ ಕನ್ನಡ ಸಂಸ್ಕೃತಿ, ಪರಂಪರೆಯಿಂದ ಮಾತ್ರ ಸಾಧ್ಯ ಎಂದ ಅವರು, ರಾಷ್ಟ್ರಕೂಟರ ಕಾಲದ ಕವಿರಾಜಮಾರ್ಗಕಾರ ಇಡೀ ಕರ್ನಾಟಕದ ಸಾಹಿತ್ಯ, ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡಿದೆ. ಇಲ್ಲಿನ ಕಲೆ, ಸಾಹಿತ್ಯ, ಸಂಗೀತ ಇತರ ಭಾಗದವರಿಗೆ ಹೆದ್ದಾರಿಯಾಗಿದೆ ಎಂದು ಹೇಳಿದರು.

ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದ ಗುಲಬರ್ಗಾ ವಿವಿ ಕುಲಪತಿ ಪ್ರ. ಚಂದ್ರಕಾಂತ ಎಂ.ಯಾತನೂರ ಮಾತನಾಡಿ, ವಿಶ್ವವಿದ್ಯಾಲಯದಲ್ಲಿ ನಡೆಯುವ ಚಟುವಟಿಕೆಗಳನ್ನು ಕನ್ನಡ ಅಧ್ಯಯನ ಸಂಸ್ಥೆಯು ತನ್ನ ಸಾಹಿತ್ಯಿಕ, ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ಮಾತನಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆಶಯ ನುಡಿಗಳನ್ನಾಡಿದ ಧಾರವಾಡ ಕರ್ನಾಟಕ ವಿವಿ ವಿಶ್ರಾಂತ ಪ್ರಾಧ್ಯಾಪಕ ಪ್ರ. ಶಾಂತಿನಾಥ ದಿಬ್ಬದ, ಕನ್ನಡ ಬಾಷೆ, ಕನ್ನಡ ಕವಿಗಳಿಗೆ ರಾಜಮಾರ್ಗವಾಗಿರುವ ಕವಿರಾಜಮಾರ್ಗ ಕೃತಿ ಕನ್ನಡದ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿ ಎಂದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಹಾಗೂ ಕಲಾನಿಕಾಯದ ಡೀನರಾದ ಪ್ರೊ. ಎಚ್.ಟಿ. ಪೋತೆ, ಕನ್ನಡನಾಡಿಗೆ ಕಿರೀಟ ಆಗಿರುವ ಕಲ್ಯಾಣದ ಈ ಪ್ರದೇಶವನ್ನು ಅಲಕ್ಷಿಸಲಾಗುತ್ತಿದೆ. ಸಾಂಸ್ಕøತಿಕ, ಸಾಹಿತ್ಯಕ ಪರಂಪರೆ ಹೊಂದಿರುವ ಕಲ್ಯಾಣ ಕರ್ನಾಟಕ, ಇಡೀ ಅಖಂಡ ಕರ್ನಾಟಕಕ್ಕೆ ಬಹಳ ಮಹತ್ವದ ಕೊಡುಗೆ ನೀಡಿದೆ ಎಂದರು.

ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ, ಕಸಾಪ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ. ರಾಜೇಂದ್ರ ಯರನಾಳೆ, ತೋಟಗಾರಿಕೆ ಇಲಾಖೆಯ ವಿಶ್ರಾಂತ ಅಧಿಕಾರಿ ಬಸವಲಿಂಗಪ್ಪ ಅಲ್ಹಾಳ, ಡಾ. ಸೂರ್ಯಕಾಂತ ಸುಜ್ಯಾತ್, ಪ್ರೊ. ಈಶ್ವರ ಇಂಗನ್, ಡಾ. ಬಿ.ಎಂ. ಕನಹಳ್ಳಿ, ಗುಲ್ಬರ್ಗಾ ವಿವಿ ಸಿಂಡಿಕೇಟ್ ಸದಸ್ಯ ಲಕ್ಷ್ಮಣ ರಾಜನಾಳಕರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ಅತಿಥಿ ಉಪನ್ಯಾಸಕ ಡಾ. ಹನುಮಂತ ಮೇಲ್ಕೇರಿ, ಅತಿಥಿ ಉಪನ್ಯಾಸಕಿ ಡಾ. ಶೈಲಜಾ ಬಾಗೇವಾಡಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಚಾರ ಸಂಕಿರಣದ ಅರಂಭಕ್ಕೂ ಮುನ್ನ ಹರಿಪ್ರಿಯಾ ವಚನ ಪ್ರಾರ್ಥನೆ ಮಾಡಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು