NEWSನಮ್ಮರಾಜ್ಯರಾಜಕೀಯ

ಅಭ್ಯರ್ಥಿ ಇಲ್ಲದೆ ಜೆಡಿಎಸ್‌ನವರ ಸೆಳೆಯುವ ಕಾಂಗ್ರೆಸ್‌ ರಾಜಕೀಯ ಪಕ್ಷವೇ? : ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜೆಡಿಎಸ್‌ನಿಂದ ಪ್ರವರ್ದಮಾನಕ್ಕೆ ಬಂದಿದ್ದ, ಜೆಡಿಎಸ್‌ನಿಂದಲೇ ಡಿಸಿಎಂ ಆದ ನಾಯಕರೊಬ್ಬರು, ಸಭೆಯೊಂದರಲ್ಲಿ ಜೆಡಿಎಸ್‌ ಮುಖಂಡರನ್ನು ತಮ್ಮ ಈಗಿನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾ ಅದೇ ಜೆಡಿಎಸ್‌ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಜೆಡಿಎಸ್‌ ರಾಜಕೀಯ ಪಕ್ಷವಲ್ಲ ಎಂದು ಹೇಳಿದ್ದಾರೆ. ಉಪಚುನಾವಣೆಗೆ ಅಭ್ಯರ್ಥಿಯ ಗತಿ ಇಲ್ಲದೆ ಜೆಡಿಎಸ್‌ನವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಭಾರತದ ಅತಿ ಹಳೆಯ ರಾಜಕೀಯ ಪಕ್ಷವಾಗಿರುವ ಕಾಂಗ್ರೆಸ್‌ ಇಂದು ಯಾವ ಪರಿಸ್ಥಿತಿಯಲ್ಲಿದೆ, ಯಾವ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿದೆ? ಎಲ್ಲೆಲ್ಲಿ ಯಾರು ಯಾರ ಹೆಗಲ ಮೇಲೆ ಕುಳಿತು ರಾಜಕೀಯ ಮಾಡುತ್ತಿದೆ? ಎಲ್ಲಿಲ್ಲಿ ಯಾರು ಯಾರಿಗೆ ಹೆಗಲಾಗಿದೆ? ಜೆಡಿಎಸ್‌ ಉಪ್ಪು ತಿಂದ ಆ ಮಹಾನ್‌ ನಾಯಕರು ಈ ಪ್ರಶ್ನೆಗಳಿಗೆ ಉತ್ತರ ನೀಡುವರೇ ಎಂದು ಸರಣಿ ಟ್ವೀಟ್‌ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಿತ್ರಪಕ್ಷಗಳನ್ನೇ ಆಪೋಷನ ಪಡೆದು ಜೀವಿಸುತ್ತಿರುವ, ಜನರಿಂದ ತಿರಸ್ಕಾರವಾಗಿರುವ, ಇತರ ಪಕ್ಷಗಳೊಂದಿಗೆ ಚೌಕಾಸಿಯಲ್ಲಿ ತೊಡಗಿರುವ ಕಾಂಗ್ರೆಸ್‌ ಭಾರತದಲ್ಲಿ ರಾಜಕೀಯ ಪಕ್ಷವಾಗಿ ಉಳಿದಿದೆಯೇ? ಕಾಂಗ್ರೆಸ್‌ ತನ್ನ ಅಹಂಕಾರದ ಪ್ರವೃತ್ತಿ ಮುಂದುವರಿಸಿಕೊಂಡು ಹೋದರೆ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳುವುದರಲ್ಲಿ ಅನುಮಾನಗಳಿಲ್ಲ ಎಂದು ಹೇಳಿದ್ದಾರೆ.

2018ರ ಚುನಾವಣೆಯಲ್ಲಿ ‘ಮಹಾನ್‌ ನಾಯಕರ’ ‘ಅಪ್ಪನಾಣೆ’ ‘ತಿಪ್ಪರಲಾಗ’ದ ಸವಾಲುಗಳನ್ನು ಜನ ಸೋಲಿಸಿದ್ದಾರೆ. ಆ ಪಕ್ಷ ಅಧಿಕಾರಕ್ಕೆ ಬಾರದು, ಈ ಪಕ್ಷ ಅಧಿಕಾರಕ್ಕೆ ಬಾರದು ಎಂದು ‘ಅಪ್ಪನಾಣೆ’ಗಳನ್ನು ಇಟ್ಟವರಿಗೆ ಜನ, ಆಣೆ ಪ್ರಮಾಣದ ಮಹತ್ವ ತಿಳಿಸಿಕೊಟ್ಟಿದ್ದಾರೆ. ಈ ಉಪ ಚುನಾವವಣೆಯಲ್ಲೂ ಅವರಿಗೆ ತಕ್ಕ ಉತ್ತರ ಸಿಗಲಿದೆ. ಅದಕ್ಕಾಗಿ ಕಾಯಲಿ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು