ರಾಜಕೀಯ

ಸೆ.21ರಿಂದ ವಿಧಾನಮಂಡಲ ಅಧಿವೇಶನ: ಕಲಾಪದಲ್ಲಿ ಭಾಗಿಯಾಗಲೂ ಕೊರೊನಾ ಪರೀಕ್ಷೆ ಕಡ್ಡಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಇದೇ ಸೆ.21ರಿಂದ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಭಯ ಸದನಗಳ ಪ್ರವೇಶಕ್ಕೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯವಾಗಿದೆ.

ಪರಿಷತ್ ಸಭಾಂಗಣಕ್ಕೆ ಪ್ರವೇಶಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಜತೆಗೆ ಕೊರೊನಾ ನಿಯಂತ್ರಣ ಕ್ರಮ ಪಾಲಿಸಬೇಕೆಂದು ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ಕಲಾಪದವೇಳೆ ಕೊರೊನಾ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. 72 ಗಂಟೆಗಳೊಳಗಾಗಿ ಆರ್‌ಟಿ-ಪಿಸಿಆರ್ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿ ಹೊಂದಿದ್ದರೆ ಮಾತ್ರವೇ ಸದನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸದಸ್ಯರಿಂದ 1254 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ನಿಯಮ 72ರ ಅಡಿ 34 ಸೂಚನೆಗಳು ಹಾಗೂ ನಿಯಮ 330ರ ಅಡಿ 24 ಸೂಚನೆಗಳನ್ನು ಸ್ವೀಕರಿಸಲಾಗಿದೆ. ಕಳೆದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಅಂಗೀಕಾರಗೊಂಡ 9 ವಿಧೇಯಕಗಳು ವಿಧಾನಪರಿಷತ್‌ನಲ್ಲಿ ಮಂಡನೆಯಾಗುವುದು ಬಾಕಿ ಇದೆ. ಈ ಪೈಕಿ ಎರಡು ವಿಧೇಯಕಗಳಿಗೆ ಸುಗ್ರೀವಾಜ್ಞೆ ಹೊರಡಿಸಿದ್ದು, ಉಳಿದ 7 ವಿಧೇಯಕ ಮಂಡನೆಯಾಗಲಿದೆ. ಸದಸ್ಯರ ಖಾಸಗಿ ಕಲಾಪಕ್ಕೂ ಅವಕಾಶವಿದೆ ಎಂದು ವಿವರಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...