NEWSದೇಶ-ವಿದೇಶರಾಜಕೀಯ

ರಾಷ್ಟ್ರದಲ್ಲಿ ಬಿಜೆಪಿ ಆಡಳಿತದ ಕೊನೆ ದಿನಗಳು ಸಮೀಪಿಸುತ್ತಿವೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾರ್ಚ್ 9ರಂದು ರಾಜ್ಯದಲ್ಲಿ ಒಂದೇ ಒಂದು ಕೊರೊನಾ ಪ್ರಕರಣವಿತ್ತು, ಇಂದು 5 ಲಕ್ಷಕ್ಕಿಂತ ಹೆಚ್ಚು ಕೇಸ್ ದಾಖಲಾಗಿವೆ. ಆದರೂ ನಮ್ಮ ರಾಜ್ಯದ ಆರೋಗ್ಯ ಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು ಕರ್ನಾಟಕ ಬೇರೆಲ್ಲಾ ರಾಜ್ಯಗಳಿಗಿಂತ ಬೆಟರ್ ಅಂತಿದಾರೆ. ಅಂದ್ರೆ ಅವರು ಇದಕ್ಕಿಂತ ಕೆಟ್ಟ ಪರಿಸ್ಥಿತಿ ನಿರೀಕ್ಷಿಸಿದ್ದರು ಅಂತನಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜೆಡಿಎಸ್‌ನ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರನ್ನು ಶನಿವಾರ ಕಾಂಗ್ರೆಸ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದರು.

ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ದೆಹಲಿಗೆ ಹೋಗಿ ನೆರೆಪರಿಹಾರ, ಜಿಎಸ್‌ಟಿ ಪರಿಹಾರ ಸೇರಿ ಹೆಚ್ಚಿನ‌ ಅನುದಾನ ಕೇಳಿ ತರುತ್ತಾರೆಂಬ ನಿರೀಕ್ಷೆಯಿತ್ತು, ಆದರೆ ಅನುದಾನ ನೀಡುವ ಬಗ್ಗೆ ಕೇಂದ್ರದ ಯಾವೊಬ್ಬ ಮಂತ್ರಿಯೂ ಈ ವರೆಗೆ ಮಾತನಾಡಿಲ್ಲ. ಹೀಗಾಗಿ ರಾಜ್ಯದ ಬಿಜೆಪಿ ಸರ್ಕಾರ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ ಎಂದು ಕಿಡಿಕಾರಿದರು.

ಮತ ನೀಡಿ ಗೆಲ್ಲಿಸಿದ ಮತದಾರರೇ ನೊಂದು ಪ್ರಧಾನಿ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ ಮಾಡಿದ್ದಾರೆ ಎಂದರೆ ರಾಷ್ಟ್ರದಲ್ಲಿ ಬಿಜೆಪಿ ಆಡಳಿತದ ಕೊನೆ ದಿನಗಳು ಸಮೀಪಿಸುತ್ತಿದೆ ಎಂದೇ ಅರ್ಥ. ಇಂಥಾ ಸಂದರ್ಭದಲ್ಲಿ ಗೌರವಯುತವಾಗಿ ಅವರೇ ರಾಜೀನಾಮೆ ನೀಡುವುದು ಉತ್ತಮ ಎಂದು ಸಲಹೆ ನೀಡಿದರು.

ಅಧಿಕಾರದಾಹಿಗಳ ಅಗತ್ಯ ನಮ್ಮ ಪಕ್ಷಕ್ಕಿಲ್ಲ
ನಾವಾಗಿಯೇ ಯಾರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕೈಹಿಡಿದು ಎಳೆದುಕೊಂಡು ಬರೋದಿಲ್ಲ. ನಮ್ಮ ಪಕ್ಷದ ಸಿದ್ಧಾಂತಗಳನ್ನು, ಪಕ್ಷದ ನಾಯಕತ್ವವನ್ನು ಒಪ್ಪಿ ಬರುವವರಿಗೆ ಪಕ್ಷದ ಬಾಗಿಲು ಸದಾ ತೆರೆದಿರುತ್ತದೆ. ಸೈದ್ಧಾಂತಿಕ ಬದ್ಧತೆಯಿಲ್ಲದ ಅಧಿಕಾರದಾಹಿಗಳ ಅಗತ್ಯ ನಮ್ಮ ಪಕ್ಷಕ್ಕಿಲ್ಲ. ಅಂಥವರಿಂದ ಕಾಂಗ್ರೆಸ್ ದೂರವಿರಲಿದೆ ಎಂದರು.

ದೇಶದ ಇತರ ಎಲ್ಲಾ ರಾಜಕೀಯ ಪಕ್ಷಗಳಿಗೂ ಕಾಂಗ್ರೆಸ್ ಮಾತೃಪಕ್ಷ. ಅದು ರಾಷ್ಟ್ರೀಯ ಪಕ್ಷವೇ ಆಗಿರಲಿ ಅಥವಾ ಪ್ರಾದೇಶಿಕ ಪಕ್ಷಗಳೇ ಆಗಿರಲಿ. ಅವು ಒಂದಲ್ಲಾ ಒಂದು ರೀತಿ ಕಾಂಗ್ರೆಸ್ ಪಕ್ಷದ ಮೂಲದಿಂದಲೇ ಅಸ್ತಿತ್ವಕ್ಕೆ ಬಂದಿವೆ. ಹಾಗಾಗಿಯೇ ದೇಶದ ಉದ್ದಗಲಕ್ಕೂ ಕಾರ್ಯಕರ್ತರನ್ನು ಹೊಂದಿರುವ ಏಕೈಕ ಪಕ್ಷವೆಂಬ ಹೆಗ್ಗಳಿಕೆ ನಮಗಿದೆ ಎಂದ ತಿಳಿಸಿದರು.

ಕಾಂಗ್ರೆಸ್ ಪಕ್ಷ ರಾಜಕೀಯಕ್ಕಷ್ಟೇ ಸೀಮಿತವಲ್ಲ, ಇದೊಂದು ಚಳವಳಿ. ದೇಶದ ಸ್ವಾತಂತ್ರ್ಯಕ್ಕಾಗಿ ಆರಂಭಗೊಂಡ ಕಾಂಗ್ರೆಸ್‌ ಎಂಬ ಚಳವಳಿ ಇಂದು ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯಾತೀತತೆಯ ಸ್ಥಾಪನೆಗಾಗಿ ನಿರಂತರವಾಗಿದೆ. ಈ ಸಿದ್ಧಾಂತಗಳನ್ನು ಬೆಂಬಲಿಸುವ ಎಲ್ಲಾ ಮನಸ್ಸುಗಳು ಈ ವೇಳೆ ಒಂದಾಗಬೇಕು ಎಂದು ಕರೆ ನೀಡಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?