Friday, November 1, 2024
CrimeNEWSನಮ್ಮಜಿಲ್ಲೆ

ಮಂಡ್ಯ: ಊರಿನ ಮಧ್ಯೆಯೇ ಯುವಕನ ಬರ್ಬರ ಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ, ಮೊನ್ನೆಮೊನ್ನೆ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಇಬ್ಬರನ್ನು ಗುತ್ತಲು ದೇವಾಸ್ಥಾನದಲ್ಲಿ ಮೂವರು ಅರ್ಚಕರನ್ನು ಹತ್ಯೆಮಾಡಲಾಗಿತ್ತು. ಈ ಘಟನೆ ಹಸಿಹಸಿಯಾಗಿ ಇರುವಂತೆ ಗ್ರಾಮದ ಮಧ್ಯೆದಲ್ಲಿಯೇ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಹೊಡಾಘಟ್ಟ ಗ್ರಾಮದಲ್ಲಿ ಭಾನುವಾರ ಮುಂಜಾನೆ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಗ್ರಾಮದ ಪೂಜಾರಿ ಮಂಜಣ್ಣ ಎಂಬುವರ ಮಗ ಅಭಿಷೇಕ್(25) ಕೊಲೆಯಾದ ಯುವಕ. ಶನಿವಾರ ರಾತ್ರಿ 10 ಗಂಟೆಗೆ ಮನೆಗೆ ಬಂದ ಅಭಿಷೇಕ್‌ಗೆ ತಾಯಿ ಊಟ ಬಡಿಸಿದ್ದಾರೆ. ಊಟ ಮಾಡುತ್ತಿದಂತೆ ಯಾರೋ ಪೋನ್ ಮಾಡಿದ್ದಾರೆ. ಬಳಿಕ ಎಂದಿನಂತೆ ರೇಷ್ಮೆ ಸಾಕಣೆ ಮನೆಯಲ್ಲಿ ಮಲಗುವುದಾಗಿ ಹೇಳಿ ಹೊರ ಹೋದವನನ್ನು ಯಾರೊ ದುಷ್ಕರ್ಮಿಗಳು ತಲೆಯ ಭಾಗಕ್ಕೆ ಹೊಡೆದು ಹತ್ಯೆ ಮಾಡಿದ್ದಾರೆ. ಮುಂಜಾನೆ ಡೈರಿಗೆ ಹಾಲು ತೆಗೆದುಕೊಂಡು ಹೋಗುತ್ತಿದ್ದವರಿಗೆ ಯುವಕನ ಕೊಲೆಯಾಗಿರುವುದು ತಿಳಿದಿದೆ.

ಅಭಿಷೇಕ್ ಸದಾ ಸ್ನೇಹಿತರೊಂದಿಗೆ ಕಾಲ ಕಳೆಯುತ್ತಿದ್ದ. ಹೆತ್ತವರು ಎಷ್ಟೇ ಬುದ್ಧಿವಾದ ಹೇಳಿದರೂ ಸ್ನೇಹಿತರ ಸಹವಾಸದಿಂದ ದೂರವಾಗಿರಲಿಲ್ಲ. ಶನಿವಾರವೂ ಬೆಳಗ್ಗೆ ಮನೆಯಿಂದ ಹೋದವನು ರಾತ್ರಿ 10 ಗಂಟೆಗೆ ಬಂದಿದ್ದ. ರೇಷ್ಮೆ ಸಾಕಾಣಿಕೆ ಮನೆಗೆ ಮಲಗಲು ಹೋದವನನ್ನು ಯಾರೋ ಸ್ನೇಹಿತರೇ ಕರೆಸಿಕೊಂಡು ಕೊಲೆ ಮಾಡಿರಬಹುದು ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಗ್ರಾಮದ ಮಧ್ಯ ಭಾಗದಲ್ಲೇ ನಡೆದ ಕೊಲೆಯಿಂದಾಗಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಇನ್ಸ್‌ಪೆಕ್ಟರ್‌ ಮಹೇಶ್, ಸಬ್ ಇನ್ಸ್ಪೆಕ್ಟರ್ ಚಂದ್ರಹಾಸನ್ ನಾಯ್ಕ್ ನೇತೃತ್ವದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...