NEWSನಮ್ಮರಾಜ್ಯರಾಜಕೀಯ

ಮೋದಿ ಪ್ರಧಾನಿ ಬದಲಾಗಿ RSSನ ಒಬ್ಬ ಮುಖಂಡನಂತೆ ಕೆಲಸ ಮಾಡುತ್ತಿದ್ದಾರೆ: ಬಿಎಸ್ಪಿ ಟೀಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಧಮನ ಮಾಡಲು ನಿರಂತರವಾಗಿ ತೊಡಗಿಕೊಂಡಿವೆ. ಈ ಆಡಳಿತರೂಢ ಸರ್ಕಾರಗಳ ಜನ ವಿರೋಧಿ ನೀತಿಗಳನ್ನು ಜನಾಂದೋಲನವಾಗಿ ರೂಪಿಸಲು ಬಹುಜನ ಸಮಾಜ ಪಕ್ಷ (ಬಿಎಸ್ಪಿ)ದಿಂದ ಜನಜಾಗೃತಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧ್ಯಕ್ಷ ಬಿ.ಆರ್.ಪುಟ್ಟಸ್ವಾಮಿ ಹೇಳಿದರು.

ಪಟ್ಟಣದ ನಂಜನಗೂಡು ರಸ್ತೆಯಲ್ಲಿರುವ ಕಬಿನಿ ಅತಿಥಿ ಗೃಹದಲ್ಲಿ ಶುಕ್ರವಾರ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ಜವಾಬ್ದಾರಿಯನ್ನು ಸಂಪೂರ್ಣವಾಗಿ ಮರೆತಿರುವ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್ ಸಿದ್ಧಪಡಿಸಿರುವ ನೀತಿಗಳನ್ನು ಅನುಷ್ಠಾನಗೊಳಿಸುವ ಕೆಲಸವನ್ನಷ್ಟೇ ಮಾಡುತ್ತಿದ್ದಾರೆ. ಮೋದಿ ಅವರು ಪ್ರಧಾನಿಯ ಬದಲಾಗಿ ಆರ್ ಎಸ್ ಎಸ್ ನ ಓರ್ವ ಮುಖಂಡ ಅಥವಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಮುಂಬರುವ 2025ಕ್ಕೆ ಆರ್ ಎಸ್ಎಸ್ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವ ಮೂಲಕ ಪ್ರಜಾಪ್ರಭುತ್ವ ನಾಶಮಾಡಿ, ಸಂವಿಧಾನ ಜಾಗದಲ್ಲಿ ಮನುಸ್ಮೃತಿಯನ್ನು ಜಾರಿಗೆ ತರಬೇಕೆಂಬ ಅಜೆಂಡಾದಂತೆ ಪ್ರಧಾನಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಪಾಯಕಾರಿ ಕೃಷಿ ಕಾಯ್ದೆಗಳ ವಿರುದ್ಧ ಕಳೆದೆರಡು ತಿಂಗಳಿನಿಂದಲೂ ನಿರಂತರವಾಗಿ ದೇಶದ ರಾಜಧಾನಿ ದೆಹಲಿಯಲ್ಲಿ ರೈತರು ಧರಣಿ ಕುಳಿತು ಸತ್ಯಾಗ್ರಹ ಮಾಡುತ್ತಿದ್ದಾರೆ. ಹತ್ತಿರದಲ್ಲೇ ಇರುವ ಮೋದಿಯವರು ತಮಗೇನೂ ತಿಳಿಯದವರಂತೆ ನಟಿಸುತ್ತಾ ಜನರ ಗಮನವನ್ನು ಬೆರೇಡೆ ಸೆಳೆಯಲು ನವಿಲಿನೊಂದಿಗೆ ಆಟವಾಡುತ್ತಾರೆ. ವನ್ಯ ಜೀವಿಯನ್ನು ಕ್ಯಾಮರಾದಲ್ಲಿ ಸೆರೆಹಿಡಿಯುವ ಛಾಯಾಗ್ರಾಹಕನಂತೆ ನಾಟಕ ಆಡುತ್ತಿದ್ದಾರೆ ಎಂದರು.

ರೈತರು, ಕೂಲಿ ಕಾರ್ಮಿಕರನ್ನು ಅಭಿವೃದ್ಧಿ ಮಾಡಬೇಕಾದ ಪ್ರಧಾನಿಯವರು ಶ್ರಮಿಕರ ವಿರುದ್ಧವಾದ ಕಾಯ್ದೆಗಳನ್ನು ಜಾರಿಗೆ ತಂದು ಪ್ರಜಾಪ್ರಭುತ್ವ ಅಣಕಿಸುವಂತೆ ಆಡಳಿತವನ್ನು ನಡೆಸುತ್ತಿದ್ದಾರೆ. ಕೃಷಿ ಭೂಮಿ ನೀತಿಯನ್ನೇ ಸಡಿಲಗೊಳಿಸಿ, ಹಣವುಳ್ಳ ಶ್ರೀಮಂತರಿಗೆ ಭೂಮಿ ಸುಲಲಿತವಾಗಿ ಸಿಗುವಂತೆ ಕಾನೂನುಗಳನ್ನು ಮಾರ್ಪಡಿಸಲಾಗಿದೆ. ಇದರಿಂದಾಗಿ ರೈತರಲ್ಲದವರು ಭೂಮಿಯನ್ನು ಖರೀದಿಸಲು ಮುಕ್ತ ಅವಕಾಶ ಮಾಡಿಕೊಟ್ಟಿರುವುದರಿಂದ ಕೃಷಿ ಭೂಮಿ ರೈತರ ಕೈ ತಪ್ಪಿ ಹೋಗಲಿದೆ ಎಂಬ ಆತಂಕವನ್ನು ವ್ಯಕ್ತಪಡಿಸಿದರು.

ರೈತರ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿ, ಬೆಳೆಗಳಿಗೆ ಯೋಗ್ಯ ಬೆಲೆಯನ್ನು ಕಲ್ಪಿಸಲು ಲಾಯಕ್ಕಿಲ್ಲದ ಸಕರ್ಾರ ಕೃಷಿ ಮಾರುಕಟ್ಟೆಯನ್ನು ಖಾಸಗಿಯವರಿಗೆ ಬಿಟ್ಟುಕೊಡುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿದೆ. ಅರೆ ವೈದ್ಯಕೀಯ, ತಾಂತ್ರಿಕ ಶಿಕ್ಷಣ ಸೇರಿದಂತೆ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ 60 ಲಕ್ಷ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸಿದೆ. ಭವಿಷ್ಯ ಮಕ್ಕಳ ಶಿಕ್ಷಣಕ್ಕೂ ವೇತನ ನೀಡದಿರುವ ಬಿಜೆಪಿ ಸರ್ಕಾರ ಯಾರ ಅಭಿವೃದ್ಧಿಗಾಗಿ ಸರ್ಕಾರವನ್ನು ನಡೆಸುತ್ತಿದೆ ಎಂದು ಪ್ರಶ್ನಿಸಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲಬೆಲೆ ಕಡಿಮೆಯಿದ್ದರೂ ದೇಶದಲ್ಲಿ ಪೆಟ್ರೋಲ್ 90 ರೂ, ಡಿಸೇಲ್ 80 ರೂ.ಗಳ ಗಡಿದಾಟುತ್ತಿದೆ. ಭಾರತದಿಂದಲೇ ತೈಲ ಖರೀದಿಸುವ ಶ್ರೀಲಂಕಾದಲ್ಲಿ ಪೆಟ್ರೋಲ್ 50 ರೂ.ಗಳಿಗೆ ಮಾರಾಟ ಮಾಡಲಾಗುತ್ತಿದೆ. ಆದರೆ ಜನರನ್ನು ಬಿಜೆಪಿ ಸರ್ಕಾರ ಸುಲಿಗೆ ಮಾಡುತ್ತಿದೆ.

ರೈತ ನಾಯಕನೆಂದು ಹಸಿರು ಶಾಲು ಹೊದ್ದು ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ ಅನಗತ್ಯವಾಗಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದು ಜಾನುವಾರು ಸಾಕಾಣಿಕೆ ಮಾಡುತ್ತಿದ್ದ ರೈತರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ್ದಾರೆ. ಸಂತೆಯೊಂದರಲ್ಲಿ ಜಾನುವಾರು ಮಾರಾಟವಾಗದ್ದಕ್ಕೆ ಬೇಸತ್ತ ರೈತನೋರ್ವ ಮಡದಿ ಮಕ್ಕಳನ್ನು ಮಾರಬೇಕಾ ಎಂದು ಮುಖ್ಯಮಂತ್ರಿಯವರನ್ನು ಪ್ರಶ್ನಿಸಿದ್ದಾರೆ ಎಂದು ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಹರಿಹಾಯ್ದರು.

ಬಿಎಸ್ಪಿ ಜಿಲ್ಲಾ ಕಾರ್ಯದರ್ಶಿ ಯರಗನಹಳ್ಳಿ ಬಿ.ಮಹದೇವಸ್ವಾಮಿ, ಕ್ಷೇತ್ರ ಉಸ್ತುವಾರಿ ಕೈಯಂಬಳ್ಳಿ ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಪುಟ್ಟಮರುಡಯ್ಯ, ಕಾರ್ಯದರ್ಶಿ ಮೂಗೂರು ಮಹೇಂದ್ರಕುಮಾರ್, ಖಜಾಂಚಿ ಅಂಕನಹಳ್ಳಿ ಪುಟ್ಟರಾಜು, ಗ್ರಾ.ಪಂ ಸದಸ್ಯ ಕೃಷ್ಣಾಪುರ ಗೋವಿಂದರಾಜು, ಮಾಜಿ ಸದಸ್ಯ ಬನ್ನಹಳ್ಳಿಹುಂಡಿ ಪುಟ್ಟಸ್ವಾಮಿ, ಮುಖಂಡರಾದ ನಿಂಗರಾಜು, ಚೌಹಳ್ಳಿ ಶಿವಮೂರ್ತಿ, ಕೆಂಪನಪುರ ಆನಂದ, ರವಿ, ಸಿದ್ದರಾಜು, ಶೇಖರ್, ಶಿವಲಿಂಗಮೂರ್ತಿ,ಮಹದೇವಚಾರ್ ಇದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್