Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಮೀಸಲಾತಿ ನೀಡಲು ನಿರಾಕರಣೆ- ಮಾನಸಿಕ ಅಸ್ವಸ್ಥರಾಗಿರುವ ಸಿಎಂ ಬದಲಿಸಿ: ಬಿಜೆಪಿ ಹೈಕಮಾಂಡ್‌ಗೆ ಪಂಚಮಸಾಲಿ ಸ್ವಾಮೀಜಿ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾನಸಿಕ ಅಸ್ವಸ್ಥರಾಗಿದ್ದು, ಅವರನ್ನು ಸಿಎಂ ಸ್ಥಾನದಿಂದ ಬದಲಾಯಿಸಬೇಕು ಎಂದು ಕೂಡಸಂಗಮದ ಲಿಂಗಾಯತ ಪಂಚಮಸಾಲಿ ಮಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು ಹಿರಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಮಾನಸಿಕ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಅವರು ಮಾತಿನ ಮೇಲೆ ನಿಲ್ಲದ ವ್ಯಕ್ತಿ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಎಂದು ಬಿಜೆಪಿ ಹೈಕಮಾಂಡ್‌ಗೆ ಒತ್ತಾಯಿಸಿದರು.

ಹಿಂದುಳಿದ ವರ್ಗ 2ಎ ಮೀಸಲಾತಿಗೆ ಲಿಂಗಾಯತ ಪಂಚಮಸಾಲಿ ಜನಾಂಗವನ್ನು ಸೇರಿಸಬೇಕು ಎಂದು ಮನವಿ ಮಾಡಿದ್ದೆವು ಆದರೆ ಮುಖ್ಯಮಂತ್ರಿ ನಿರಾಕರಿಸಿಸಿದ್ದಾರೆ ಎಂದು ಸ್ವಾಮೀಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ಸಮಾಜದವರಿಗೆ 2ಎ ಮೀಸಲಾತಿ ನೀಡುವುದು ರಾಜ್ಯದ ಆಂತರಿಕ ವಿಚಾರಕ್ಕೆ ಸಂಬಂಧಿಸಿದೆ. ಈ ಬಗ್ಗೆ ಸಿಎಂ ಅವರೇ ನಿರ್ಧಾರ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಅವರು ತಮ್ಮ ಜವಾಬ್ದಾರಿಯನ್ನು ಕೇಂದ್ರದ ಮೇಲೆ ಹಾಕಿ ತಾವು ಜಾರಿಕೊಳ್ಳುವ ಪ್ರಯತ್ನ ಮಾಡಬಾರದು. ಈ ಬಗ್ಗೆ ಸ್ಪಷ್ಟವಾಗಿ ಹೇಳಿಕೆ ನೀಡಬೇಕು ಎಂದು ಅವರು ಕಳೆದ ಗುರುವಾರ ಮಂತ್ರಿಗಳ ನಿಯೋಗದ ಮೂಲಕ ನಮಗೆ ಕಳುಹಿಸಿದ್ದ ಸಂದೇಶವನ್ನು ಬಿಎಸ್‌ವೈ ನೆನಪಿಸಿಕೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ನಾವು ಪಂಚಮಸಾಲಿ ಲಿಂಗಾಯತರ ಬೆಂಬಲದಿಂದಾಗಿ ಸಿಎಂ ಸ್ಥಾನ ಅಲಂಕರಿಸಿದ್ದೇವೆ ಎಂಬುದನ್ನು ಬಿಎಸ್‌ವೈ ಮರೆಯಬಾರದು. ನಮ್ಮ ಸಮುದಾಯ ಬಿಜೆಪಿ ಮತ್ತು ಬಿಎಸ್‌ವೈ ಅವರಿಗೆ ಹೆಚ್ಚಿನ ಶಕ್ತಿ ನೀಡಿದ್ದು ಅವರು ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಲು ಸಾಧ್ಯವಾಗಿದೆ. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ನಡೆದುಕೊಳ್ಳಬೇಕು. ಅದನ್ನು ಬಿಟ್ಟಿ ಆಗಾಗ ತಮ್ಮ ನಡೆ ಮತ್ತು ನುಡಿಯನ್ನು ಬದಲಿಸುವ ಪ್ರಯತ್ನವನ್ನು ಸಿಎಂ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ