NEWSನಮ್ಮಜಿಲ್ಲೆ

ಮೈಸೂರು: ತಿಂಗಳೊಳಗೇ ಡಿಸಿ ಶರತ್ ಎತ್ತಂಗಡಿ, ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇತ್ತೀಚೆಗಷ್ಟೇ ಮೈಸೂರು ಜಿಲ್ಲಾಧಿಕಾರಿಯಾಗಿ ಕಲಬುರಗಿಯಿಂದ ವರ್ಗಾವಣೆಗೊಂಡಿದ್ದ ಬಿ.ಶರತ್ ಅವರನ್ನು ರಾಜ್ಯ ಸರ್ಕಾರ ಸೋಮವಾರ ದಿಢೀರ್ ಎತ್ತಂಗಡಿ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಇಂದು ವರ್ಗಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದು, ಆಗಸ್ಟ್ 29 ರಂದು ಕಲಬುರಗಿಯಿಂದ ಮೈಸೂರು ಡಿಸಿಯಾಗಿ ವರ್ಗಾವಣೆ ಗೊಂಡಿದ್ದ ಬಿ ಶರತ್ ಅವರನ್ನು ಒಂದು ತಿಂಗಳು ತುಂಬುವ ಮೊದಲೇ ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಬಿ ಶರತ್ ಬರುವುದಕ್ಕಿಂತ ಹಿಂದೆ ಅಭಿರಾಮ್‌ ಜಿ. ಶಂಕರ್‌ ಡಿಸಿಯಾಗಿದ್ದರು.

ನಂಜನಗೂಡು ಟಿಎಚ್‌ಒ ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಅಭಿರಾಮ್‌ ಜಿ. ಶಂಕರ್‌ ಅವರನ್ನು ಎತ್ತಂಗಡಿ ಮಾಡಿ ಬಿ. ಶರತ್ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕಮಾಡಲಾಗಿತ್ತು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?