Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯಶಿಕ್ಷಣ-

ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಲೂ ಸಾಧ್ಯವಾಗದಷ್ಟು ಸರ್ಕಾರ ದಿವಾಳಿ ಆಗಿದೆಯೇ : ಆಮ್ ಆದ್ಮಿ ಪಾರ್ಟಿ ಪ್ರಶ್ನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರಿ ಶಾಲೆಗಳ ತರಗತಿಗಳು ಆರಂಭವಾಗಿದ್ದರೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡದಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಆಮ್‌ ಆದ್ಮಿ ಪಾರ್ಟಿಯು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯ ಸರ್ಕಾರ ಈ ಮಟ್ಟಿಗೆ ದಿವಾಳಿಯಾಗಿದೆಯೇ ಎಂದು ಪ್ರಶ್ನಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಆಮ್‌ ಆದ್ಮಿ ಪಾರ್ಟಿಯ ಮಾಧ್ಯಮ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಮುಖ್ಯ ವಕ್ತಾರ ಶರತ್‌ ಖಾದ್ರಿ, “ಶಾಲೆಗಳು ಆರಂಭವಾಗಿ ತಿಂಗಳು ಕಳೆದಿದೆ. ನವೆಂಬರ್‌ 2ರಿಂದ ಎಲ್ಲಾ ತರಗತಿಗಳು ಪೂರ್ಣಾವಧಿ ನಡೆಯಲಿವೆ. ಆದರೆ ಸರ್ಕಾರವು ಒಂದು ಜೊತೆ ಸಮವಸ್ತ್ರವನ್ನೂ ಸಿದ್ಧಪಡಿಸಿಕೊಂಡಿಲ್ಲ.

ಇನ್ನೂ ಎರಡು ತಿಂಗಳು ಸಮವಸ್ತ್ರ ವಿತರಣೆ ಸಾಧ್ಯವಿಲ್ಲವೆಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಶೂ, ಸಾಕ್ಸ್‌ ನೀಡಲು ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿಲ್ಲ. ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯಗಳನ್ನು ನೀಡಲೂ ಸಾಧ್ಯವಾಗದಷ್ಟು ರಾಜ್ಯದ ಬೊಕ್ಕಸವನ್ನು ಬಿಜೆಪಿಯು ದಿವಾಳಿ ಮಾಡಿದೆಯೇ ಎಂದು ಪ್ರಶ್ನಿಸಿದರು.

ಸರ್ಕಾರವು ಶಾಸಕರಿಗೆ, ಸಚಿವರಿಗೆ ಐಶಾರಾಮಿ ಕಾರು, ಬೆಂಗಾವಲು ಪಡೆ, ವೇತನ ಹಾಗೂ ಅನೇಕ ಭತ್ಯೆಗಳನ್ನು ನೀಡುತ್ತದೆ. ಅದನ್ನು ಕಡಿತಗೊಳಿಸಿಯಾದರೂ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌ ವಿತರಿಸಲಿ. ಕೇವಲ ಒಂದು ಜೊತೆ ಸಮವಸ್ತ್ರ ವಿತರಿಸಿದರೆ ಸಾಲದು. ಒಂದು ಸಮವಸ್ತ್ರವನ್ನು ವಾರವಿಡೀ ಉಪಯೋಗಿಸಲು ಸಾಧ್ಯವಾಗುವುದಿಲ್ಲ.

ಹೀಗಾಗಿ ಕನಿಷ್ಠ ಎರಡು ಜೊತೆಯಾದರೂ ವಿತರಿಸಬೇಕು. ಉತ್ತಮ ಗುಣಮಟ್ಟದ ಸಮವಸ್ತ್ರವನ್ನು ನೀಡಬೇಕು. ದೇಶದ, ನಾಡಿನ ಭವಿಷ್ಯವೇ ಆಗಿರುವ ವಿದ್ಯಾರ್ಥಿಗಳ ಬಗ್ಗೆ ನಿರ್ಲಕ್ಷ್ಯ ಸಲ್ಲದು ಎಂದು ಶರತ್‌ ಖಾದ್ರಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಬೊಮ್ಮನಹಳ್ಳಿ ವಾರ್ಡ್‌ ಅಧ್ಯಕ್ಷರಾದ ಯೋಗಿತಾ ರೆಡ್ಡಿ ಮಾತನಾಡಿ, “ಪ್ರೌಢಶಾಲೆಗಳು ಆರಂಭವಾಗಿ ಎರಡೂವರೆ ತಿಂಗಳು ಕಳೆದಿದೆ. ಆದರೂ ಶಿಕ್ಷಣ ಇಲಾಖೆಯು ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ನೀಡಿಲ್ಲ. ಪ್ರಮುಖವಾಗಿ ಗ್ರಾಮೀಣ ಭಾಗದ ಹಾಗೂ ಬಡ-ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಇದರಿಂದ ತೀವ್ರ ತೊಂದರೆಯಾಗುತ್ತಿದೆ ಎಂದರು.

ಸ್ಯಾನಿಟರಿ ಪ್ಯಾಡ್‌ಗಳನ್ನು ಸರ್ಕಾರ ತಕ್ಷಣವೇ ಪೂರೈಸದಿದ್ದರೆ ವಿದ್ಯಾರ್ಥಿನಿಯರು ಮುಂದಿನ ದಿನಗಳಲ್ಲಿ ಶಾಲೆಗೆ ರಜೆ ಹಾಕುವ ಸಾಧ್ಯತೆಯಿದೆ. ಇದು ಅವರ ಶೈಕ್ಷಣಿಕ ಸಾಧನೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಹೇಳಿದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ