Vijayapatha – ವಿಜಯಪಥ
Friday, November 1, 2024
CrimeNEWSನಮ್ಮರಾಜ್ಯ

ಭೂ ಮಾಲೀಕರ ಹೆಸರು ಬದಲಾವಣೆಗೆ 11 ಲಕ್ಷ ರೂ. ಲಂಚ: ಇಬ್ಬರ ಬಂಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಜಮೀನಿನ ಮ್ಯುಟೇಷನ್‌ ಬದಲಾವಣೆ ಹಾಗೂ ರಕ್ಷಣೆ ಒದಗಿಸಲು 11 ಲಕ್ಷ ರೂ. ಲಂಚ ಪಡೆಯುತ್ತಿದ್ದ ಬೆಂಗಳೂರು ಉತ್ತರ ತಾಲೂಕಿನ ಜಾಲ ಹೋಬಳಿಯ ಕಂದಾಯ ನಿರೀಕ್ಷಕ ಎಚ್‌. ಪುಟ್ಟಹನುಮಯ್ಯ ಅಲಿಯಾಸ್‌ ಪ್ರವೀಣ್‌ ಮತ್ತು ಚಿಕ್ಕಜಾಲ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ರಾಜು ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ರಾತ್ರಿ ಬಂಧಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದೇ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಚಿಕ್ಕಜಾಲ ಠಾಣೆಯ ಇನ್‌ಸ್ಪೆಕ್ಟರ್‌ ಯಶವಂತ ಎಸಿಬಿ ಕಾರ್ಯಾಚರಣೆಯ ಸುದ್ದಿ ತಿಳಿದು ಪರಾರಿಯಾಗಿದ್ದಾರೆ. ಅವರಿಗಾಗಿ ಶೋಧ ನಡೆಯುತ್ತಿದೆ.

60 ಲಕ್ಷ ರೂ.ಗಳಿಗೆ ಬೇಡಿಕೆ: ಬೆಂಗಳೂರು ಉತ್ತರ ತಾಲೂಕಿನ ಜಾಲ ಹೋಬಳಿಯಲ್ಲಿ ವ್ಯಕ್ತಿಯೊಬ್ಬರು 2018ರಲ್ಲಿ 5 ಎಕರೆ ಜಮೀನು ಖರೀದಿಸಿದ್ದರು. ಅದೇ ಜಮೀನನ್ನು ಪುನಃ ಬೇರೊಬ್ಬರಿಗೆ ಮಾರಾಟ ಮಾಡಲು ಮೂಲ ಮಾಲೀಕರು ಒಪ್ಪಂದ ಮಾಡಿಕೊಂಡಿದ್ದರು. ಈ ಕುರಿತು ದೂರುದಾರರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಹೀಗಾಗಿ ಜಮೀನು ಮರು ಮಾರಾಟಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು.

ಈ ನಡುವೆ ಜಮೀನಿನ ಮ್ಯುಟೇಷನ್‌ನಲ್ಲಿ ಹೆಸರು ಬದಲಾವಣೆ ಮಾಡುವಂತೆ ಖರೀದಿದಾರರು ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆ ಪೂರ್ಣಗೊಳಿಸಲು 50 ಲಕ್ಷ ರೂ. ಲಂಚ ನೀಡುವಂತೆ ಪುಟ್ಟಹನುಮಯ್ಯ ಬೇಡಿಕೆ ಇಟ್ಟಿದ್ದರು. ಜಮೀನಿನ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವ ಕುರಿತು ಸ್ಥಳದಲ್ಲಿ ಮಾಹಿತಿ ಫಲಕ ಅಳವಡಿಸಿ, ರಕ್ಷಣೆ ನೀಡುವಂತೆಯೂ ದೂರುದಾರರು ಚಿಕ್ಕಜಾಲ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಿದ್ದರು. ಈ ವೇಳೆ ಅವರು 10 ಲಕ್ಷ ರೂ. ಬೇಡಿಕೆ ಇಟ್ಟಿದ್ದರು ಎಂದು ದೂರು ದಾರರು ತಿಳಿಸಿದ್ದಾರೆ.

ದೂರರ ಲಿಖಿತ ಹೇಳಿಕೆ ಮೇರೆಗೆ ಕಾರ್ಯಾಚರಣೆಗೆ ಇಳಿದ ಎಸಿಬಿ ಅಧಿಕಾರಿಗಳು 11 ಲಕ್ಷ ರೂ. ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಎಚ್‌. ಪುಟ್ಟಹನುಮಯ್ಯ ಮತ್ತು ಚಿಕ್ಕಜಾಲ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ರಾಜು ಅವರನ್ನು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ