Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯರಾಜಕೀಯ

ಡಿ. 31ರ ಸಂಜೆ 6 ಗಂಟೆಯಿಂದ ಜ.1ರ ಬೆಳಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿ: ಪೊಲೀಸ್​ ಆಯುಕ್ತ ಕಮಲ್​ಪಂತ್​

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ರೂಪಾಂತರಗೊಂಡ ಕೊರೊನಾ ವೈರಸ್​ ಹಿನ್ನೆಲೆ ಈ ಬಾರಿ ಹೊಸ ವರ್ಷಾಚರಣೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್​ ಆಯುಕ್ತ ಕಮಲ್​ಪಂತ್​ ತಿಳಿಸಿದ್ದಾರೆ.

ಹೊಸವರ್ಷದ ಮಾರ್ಗಸೂಚಿ ಪ್ರಕಟಿಸಿ ಮಾತನಾಡಿದ ಅವರು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಡಿ. 31ರ ಸಂಜೆ 6 ಗಂಟೆಯಿಂದ ಜ.1ರ ಬೆಳಗ್ಗೆ 6ಗಂಟೆವರೆಗೆ ಸೆಕ್ಷನ್​ 144 ಜಾರಿಯಲ್ಲಿರಲಿದೆ. ರಾಜಧಾನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಇಡೀ ಬೆಂಗಳೂರಲ್ಲಿ ನಾಕಾಬಂದಿ ಇರಲಿದ್ದು, 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆ ನಿಷೇಧ ಇರಲಿದ್ದು, ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಆದರೆ, ಖಾಸಗಿ ಸ್ಥಳಗಳಲ್ಲಿ ಆಚರಣೆಗೆ ಅವಕಾಶ ನೀಡಲಾಗಿದೆ. ಪಬ್​ಗಳಲ್ಲಿ ಈವೆಂಟ್​, ಶೋ ನಡೆಸುವಂತಿಲ್ಲ ಹಾಗೂ ವಿಶೇಷ ಡಿಜೆ ವ್ಯವಸ್ಥೆ ಮಾಡುವಂತಿಲ್ಲ. ಹೊಟೇಲ್​ಗಳಲ್ಲಿ ಮಾರ್ಗಸೂಚಿ ಪಾಲಿಸಬೇಕು ಎಂದು ತಿಳಿಸಿದರು.

ಮಾಲ್​ಗಳು, ಹೊಟೇಲ್​, ಕ್ಲಬ್​, ಪಬ್​ಗಳಲ್ಲಿ ಕೋವಿಡ್​ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ. ಡಿ.31ರ ರಾತ್ರಿ ಅನವಶ್ಯಕ ಸಂಚಾರಕ್ಕೆ ಯಾವುದೇ ಅವಕಾಶವಿಲ್ಲ. ವೀಲಿಂಗ್, ಡ್ರ್ಯಾಗ್​ ರೇಸ್​ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿಯಮ ಮೀರಿ ಸಂಚಾರ ಮಾಡಿದರೆ, ವಾಹನ ಜಪ್ತಿ ಮಾಡಲಾಗುವುದು ಎಂದು ತಿಳಿಸಿದರು.

ಯಾವುದೇ ಸಾರ್ವಜನಿಕ ಸ್ಥಳ ರಸ್ತೆ, ಪಾರ್ಕ್​ ಬಳಿ ಯಾವುದೇ ಸಂಭ್ರಮಾಚರಣೆ ನಡೆಸಲು ಅವಕಾಶ ನೀಡಲಾಗಿಲ್ಲ. ಡಿಜೆ ಹಾಗೂ ಯಾವುದೇ ಸಂಗೀತ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದಿಲ್ಲ. ಆದರೆ, ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್, ಖಾಸಗಿ ಕ್ಲಬ್ ಗಳಲ್ಲಿ ಕಾರ್ಯಕ್ರಮಕ್ಕೆ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.

ಇನ್ನು ನಗರದ ಕೆಲವೆಡೆ ವಿಶೇಷ ನಿಗಾ ಇಡಲಾಗಿದ್ದು, ಎಂಜಿ ರಸ್ತೆ, ಕಮರ್ಷಿಯಲ್​ ಸ್ಟ್ರೀಟ್​, ಚರ್ಚ್​ಸ್ಟ್ರೀಟ್, ಕೋರಮಂಗಲ, ಇಂದಿರಾನಗರಗಳಲ್ಲಿ ಹೆಚ್ಚಿನ ಬಂದೋಬಸ್ತ್​ ಮಾಡಲಾಗುವುದು. ಈ ಏರಿಯಾಗಳಲ್ಲಿ ಕೂಪನ್​ ಬುಕ್ಕಿಂಗ್ ಕಡ್ಡಾಯವಾಗಿದೆ. ಸಂಭ್ರಮಾಚರಣೆ ವೇಳೆ ವಿಶೇಷ ಡಿಜೆಗೆ ನಿರ್ಬಂಧ ಹಾಕಲಾಗಿದ್ದು, ನಿಯಮ ಮೀರಿದರೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ