NEWSಆರೋಗ್ಯನಮ್ಮಜಿಲ್ಲೆ

ರಾಮನಗರ ಜಿಲ್ಲೆಯಲ್ಲಿ 16 ಹಾಸಿಗೆಯ ಐ.ಸಿ.ಯು ವ್ಯವಸ್ಥೆ

 ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಹೇಳಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಜಿಲ್ಲೆಯಲ್ಲಿ ಕೋವಿಡ್-19 ಹಾಗೂ ಇತರೆ ರೋಗಗಳ ಚಿಕಿತ್ಸೆಗಾಗಿ 16 ಹಾಸಿಗೆಯ ಐ.ಸಿ.ಯು ವ್ಯವಸ್ಥೆಯನ್ನು ಮಾಡಲಾಗಿದೆ. ಐ.ಸಿ.ಯು ವ್ಯವಸ್ಥೆ ಅಂತರಾಷ್ಟ್ರೀಯ ಗುಣಮಟ್ಟದಾಗಿದ್ದು, ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕರಿಗೆ ಸದಾಕಾಲ ಉಪಯುಕ್ತವಾಗಲಿದೆ ಎಂದು ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಹಾಗೂ ಮೂಲಭೂತ ವ್ಯವಸ್ಥೆಗಳ ಬಗ್ಗೆ ಮಾಹಿತಿಯನ್ನು ಪಡೆದು ಡಿಜಿಟಲೈಸ್ ಮಾಡಿ ವಾರ್ ರೂಂ ಸಿದ್ಧಪಡಿಸಲಾಗಿದೆ. ಇಂದು ಡಿಸಿಎಂ ವಾರ್‌ರೂಂಗೆ ಚಾಲನೆ ನೀಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಜಿಲ್ಲೆಯಲ್ಲಿ ಮೂರು ಲಕ್ಷ ಕುಟುಂಬಗಳು ಹಾಗೂ 12 ಲಕ್ಷ ಜನಸಂಖ್ಯೆಯಿದ್ದು, ಮನೆ ಮನೆಗೆ ತೆರಳಿ ಆರೋಗ್ಯ ಕಾರ್ಯಕರ್ತೆಯರು ಸಾರ್ವಜನಿಕರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇವರಲ್ಲಿ 60 ವರ್ಷ ಮೇಲ್ಪಟ್ಟವರು, ಸಕ್ಕರೆ ಖಾಯಿಲೆ, ಬಿ.ಪಿ, ಶ್ವಸಕೋಶ ಹೃದ್ರೋಗವಿರುವವರ ಮಾಹಿತಿಯನ್ನು ಪಡೆದು ಡಿಜಿಟಲೈಸ್ ಮಾಡಲಾಗಿದೆ. ಡಿಜಿಟಲೈಸ್ ಮಾಡಿರುವುದಲ್ಲಿ ಇಡೀ ದೇಶದಲ್ಲೇ ರಾಮನಗರ ಮೊದಲ ಜಿಲ್ಲೆಯಾಗಿದೆ ಎಂದರು.

ರಾಮನಗರ ಜಿಲ್ಲೆಯಲ್ಲೂ ಕೋವಿಡ್-19 ಪರೀಕ್ಷಾ ಲ್ಯಾಬ್ ಪ್ರಾರಂಭಿಸಲು ಸರ್ಕಾರದಿಂದ 1.5 ಕೋಟಿ ರೂ. ಮಂಜೂರು ಮಾಡಲಾಗಿದೆ. ಇನ್ನೂ ಹೆಚ್ಚಿನ ಅನುದಾನ ಬೇಕಿದ್ದು, ಶೀಘ್ರದಲ್ಲೇ ಒದಗಿಸಿ ಲ್ಯಾಬ್ ಪ್ರಾರಂಭಿಸಲಾಗುವುದು ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

“ರಾಮನಗರದಲ್ಲಿ ಹೊಸ ರೇಷ್ಮೆ ಗೂಡು ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಏಷ್ಯಾದ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ವಿಸ್ತರಣೆ ಮಾಡಿ ಹೈಟೆಕ್ ಮಾರುಕಟ್ಟೆಯಾಗಿ ರೂಪಿಸಲಾಗುವುದು. ಎರಡು ಎಕರೆಯಲ್ಲಿರುವ ಮಾರುಕಟ್ಟೆ ವಿಸ್ತರಣೆ ಆಗಿ, ಪಾರದರ್ಶಕ ಆಡಳಿತ ನಡೆಸುವಂತಾಗಬೇಕು. ಅದಕ್ಕಾಗಿ ಈ ಮಾರುಕಟ್ಟೆಗೆ ಹೊಂದಿಕೊAಡAತೆ ಇರುವ ಕೆಐಎಡಿಬಿಗೆ ಸೇರಿದ ಮೂರು ಎಕರೆ ಭೂಮಿಯನ್ನು ಪಡೆದುಕೊಳ್ಳಲಾಗುವುದು. ಜಾಗದ ಸಂಬAಧ ಕೋರ್ಟ್ ನಲ್ಲಿ ವಿವಾದ ಇದ್ದು ಅದನ್ನು ಬೇಗ ಬಗೆಹರಿಸಿ, ಭೂಮಿಯನ್ನು ವಶಕ್ಕೆ ಪಡೆಯಲಾಗುವುದು” ಎಂದರು.

“ರೇಷ್ಮೆಗೂಡಿನ ದರ ಕುಸಿದು ಬೆಳೆಗಾರರು ಕಂಗಾಲಾಗಿದ್ದ ಸಂದರ್ಭದಲ್ಲಿ ಸರ್ಕಾರ ಮಧ್ಯ ಪ್ರವೇಶಿಸಿ ದರ ಕುಸಿತವನ್ನು ತಡೆಯುವ ಪ್ರಯತ್ನ ಮಾಡಿದೆ. ಈ ನಿಟ್ಟಿನಲ್ಲಿ ತೋಟಗಾರಿಕೆ ಸಚಿವ ನಾರಾಯಣಗೌಡರು ಅಗತ್ಯ ಕ್ರಮ ವಹಿಸಿ, ರೈತರಿಗೆ ನೆರವಾಗಿದ್ದಾರೆ. ಆದ್ದರಿಂದ ರೈತರು ಆತಂಕಗೊಳ್ಳುವ ಅಗತ್ಯವಿಲ್ಲ” ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಮಾವು ಸಂಸ್ಕರಣಾ ಘಟಕ
ಕೋಲಾರದ ನಂತರ ಅತಿ ಹೆಚ್ಚು ಮಾವು ಬೆಳೆಯುವ ಜಿಲ್ಲೆ ರಾಮನಗರ. ಇಲ್ಲಿ ಸುಮಾರು 97 ಸಾವಿರ ಟನ್ ಮಾವು ಉತ್ಪಾದನೆ ಆಗುತ್ತಿದ್ದು, ಜಿಲ್ಲೆಯಲ್ಲಿ ಮಾವು ಸಂಸ್ಕರಣಾ ಘಟಕ ಆರಂಭಿಸಬೇಕು ಎಂಬ ಬಹುಕಾಲದ ಬೇಡಿಕೆ ಈಗ ಈಡೇರುತ್ತಿದೆ. ರೇಷ್ಮೆ ಇಲಾಖೆಯ 16 ಎಕರೆ ಜಾಗ ಪಡೆದು, ಮಾವು ಸಂಸ್ಕರಣಾ ಘಟಕ ನಿರ್ಮಾಣ ಮಾಡಲಾಗುವುದು ಎಂದು ಉಸ್ತುವಾರಿ ಸಚಿವರು ಹೇಳಿದರು.

ತೋಟಗಾರಿಕಾ ಸಚಿವ ಕೆ.ಸಿ.ನಾರಾಯಣಗೌಡ, ಮಾಗಡಿ ಶಾಸಕ ಎ.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ರಾಮನಗರ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಇಕ್ರಂ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ