NEWSದೇಶ-ವಿದೇಶ

177 ವಿದೇಶಿ ಪ್ರಯಾಣಿಕರು ಇಂದು ಮಂಗಳೂರಿಗೆ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ವಿದೇಶದಲ್ಲಿರುವ ಭಾರತೀಯರನ್ನು ಮಂಗಳೂರಿಗೆ ಕರೆತರಲು ಮೊದಲ ವಿಮಾನ ಸಜ್ಜಾಗಿದ್ದು ಮೇ 12 ರಂದು  ರಾತ್ರಿ ಸುಮಾರು 10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದೆ ಎಂದು ಐ.ಎ.ಎಸ್ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.

ಸೋಮವಾರ ಮಂಗಳೂರು ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ಈ ಕುರಿತು ನಡೆದ ಸಭೆಯಲ್ಲಿ ಮಾತನಾಡುತ್ತಾ,  ವಿದೇಶದಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು  ಮಾಡಿಕೊಂಡಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಯು.ಎ.ಇ ನಿಂದ ಮಂಗಳೂರಿಗೆ ವಿಮಾನದಲ್ಲಿ ಒಟ್ಟು  177 ಪ್ರಯಾಣಿಕರು ಆಗಮಿಸಲಿದ್ದಾರೆ. 17 ಹೋಟೆಲ್‍ಗಳು ಹಾಗೂ 12 ಹಾಸ್ಟೆಲ್ ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ನೇಮಿಸಿರುವ ಅಧಿಕಾರಿಯು ಪ್ರಯಾಣಿಕರಿಂದ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಪಡೆಯುವರು ಎಂದು ತಿಳಿಸಿದರು.

ಪ್ರಯಾಣಿಕರನ್ನು ಸ್ವೀಕರಿಸುವಲ್ಲಿ, ಹೋಟೆಲ್ ಬುಕ್ಕಿಂಗ್ ವ್ಯವಸ್ಥೆ, ವಾಹನ ವ್ಯವಸ್ಥೆ, ಹೋಟೆಲ್ ಕ್ವಾರಂಟೈನ್ ವ್ಯವಸ್ಥೆ ಪ್ರತಿಯೊಂದು ವಿಭಾಗಕ್ಕೂ ಒಬ್ಬ ಅಧಿಕಾರಿಯನ್ನು  ನೇಮಕ ಮಾಡಲಾಗಿದ್ದು, ಅಧಿಕಾರಿಗಳು ಎಲ್ಲಾ ಕಡೆ ಭೇಟಿ ನೀಡಿ ಮಾಹಿತಿ ನೀಡಬೇಕು ಎಂದು ರಾಹುಲ್  ಸೂಚಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಪ್ರಯಾಣಿಕರಲ್ಲಿ  ಎ ಮತ್ತು ಬಿ ಎಂದು 2 ವಿಭಾಗ ಮಾಡಲಾಗುವುದು. ಕೆಮ್ಮು, ಜ್ವರ, ನೆಗಡಿ ಇರುವವರು ಎ  ವಿಭಾಗದ ಪ್ರಯಾಣಿಕರು.  ಇವರಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ 14 ದಿನಗಳವರೆಗೆ ಕ್ವಾರಂಟೈನ್ ಮಾಡಿ ಬೇಕಾಗುವ ಅಗತ್ಯ ಚಿಕಿತ್ಸೆ ನೀಡಲಾಗುವುದು  ಎಂದರು.   ಬಿ  ವಿಭಾಗ ಎಂದರೆ ಯಾವುದೇ ರೋಗ ಲಕ್ಷಣ ಇಲ್ಲದವರು ಅಂತವರನ್ನು  ಹೋಟೆಲ್/ಹಾಸ್ಟೆಲ್ ಕ್ವಾರೆಂಟೈನ್‍ನಲ್ಲಿ ಇರಿಸಲಾಗುವುದು. ವಿಮಾನ ನಿಲ್ದಾಣದಲ್ಲೇ  ಹೋಟೆಲ್‍ಗಳನ್ನು  ಗುರುತಿಸಲು ಏರ್‍ಪೆÇೀರ್ಟ್‍ನಲ್ಲೇ ಆನ್‍ಲೈನ್  ಬುಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಪ್ರಯಾಣಿಕರು ಗುರುತಿಸಿರುವ ಹೋಟೆಲ್‍ಗಳಿಗೆ ತಲುಪಿಸಲು ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಚಂದ್ರ ಬಾಯರಿ,  ಮಂಗಳೂರು ಮಹಾನಗರಪಾಲಿಕೆ ಪರಿಸರ ಅಭಿಯಂತರ ಮಧು ಮನೋಹರ್ ಇತರ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು