NEWSನಮ್ಮರಾಜ್ಯರಾಜಕೀಯ

ಕ್ಷೇತ್ರ ಅಭಿವೃದ್ಧಿಗೆ 382.98 ಕೋಟಿ ರೂ. ಅನುದಾನ: ಸಚಿವ ಆರ್.ಶಂಕರ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಹಾವೇರಿ: ರಾಣೇಬೆನ್ನೂರ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಇಲಾಖೆಗಳಿಗೆ ರೂ.382.98 ಕೋಟಿ ಅನುದಾನ ನೀಡಲಾಗಿದೆ. ರಾಣೇಬೆನ್ನೂರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು ಎಂದು ನೂತನ ಸಚಿವ ಆರ್.ಶಂಕರ್ ಹೇಳಿದರು.

ಸಚಿವರಾದ ನಂತರ ಮೊದಲಬಾರಿಗೆ ಶುಕ್ರವಾರ ರಾಣೇಬೆನ್ನೂರ ನಗರಕ್ಕೆ ಆಗಮಿಸಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನನಗೆ ರಾಜ್ಯ ಒಂದು ಕಣ್ಣಾದರೆ ರಾಣೇಬೆನ್ನೂರು ಕ್ಷೇತ್ರ ಇನ್ನೊಂದು ಕಣ್ಣಾಗಿದೆ. ಎರಡು ಕಣ್ಣುಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ಕೊರೊನಾ ಹಿನ್ನೆಲೆಯಲ್ಲಿ ಅಭಿವೃದ್ಧಿ ಕುಂಟಿತಗೊಂಡಿದ್ದು, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಾಗುವುದು ಎಂದು ತಿಳಿಸಿದರು.

ತಾಲೂಕಿನ ಜನರ ಸಹಕಾರದಿಂದ ಮೂರನೇ ಬಾರಿಗೆ ಸಚಿವನಾಗಿದ್ದು, ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದರಾಜ ಕಲಕೋಟಿ ಇತರರು ಉಪಸ್ಥಿತರಿದ್ದರು.

1 Comment

  • ಇದನ್ನೆಲ್ಲ ಯಾವುದು ಉಪಯೋಗಿಸುತ್ತೀರಾ ಅಥವಾ ಎಲ್ಲ ಬೋಕಸ್ ಹೋಗುತ್ತಾ.ಬರಿ ಬಾಯಿ ಮಾತು ಅನ್ಸುತ್ತೆ ಅಷ್ಟೇ ಅಭಿವೃದ್ಧಿಕಾರ್ಯ ಒಂದು ಆಗಲ್ಲ

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ