CrimeNEWSನಮ್ಮಜಿಲ್ಲೆ

71ವಯಸ್ಸಿನ ಅಜ್ಜಿ ರೇಪ್‌ ಮಾಡಿದ ಕಾಮುಕ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಈ ಮಹಾನಗರದಲ್ಲಿ 71 ವರ್ಷದ ವೃದ್ಧೆಯ ಮೇಲೆ 31 ವರ್ಷದ ವ್ಯಕ್ತಿ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೋರಮಂಗಲದ 6ನೇ ಬ್ಲಾಕ್​ ನಿವಾಸಿ ಜ್ಯೂಲಿರೋಸ್ ಈ ಕೃತ್ಯವೆಸಗಿರುವ ಕಾಮುಕನಾಗಿದ್ದಾನೆ. ಆತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಜ. 2ರಂದು ಕೋರಮಂಗಲದ 6ನೇ ಬ್ಲಾಕ್​ನಲ್ಲಿರುವ ಈತ ವೃದ್ಧೆಗೆ ಸಹಾಯ ಮಾಡುವ ನೆಪದಲ್ಲಿ ಹೋಗಿ ಅತ್ಯಾಚಾರವೆಸಗಿದ್ದಾನೆ. ಒಬ್ಬರೆ ಇದ್ದ ವೃದ್ಧೆಯನ್ನು ಪರಿಚಯಿಸಿಕೊಂಡಿದ್ದ ಆರೋಪಿ ಆಕೆಯ ಮನೆಯಲ್ಲೇ ಈ ಹಿಂದೆ ಬಾಡಿಗೆಗೆ ಇದ್ದ. ಅಜ್ಜಿಗೆ ಹೊರಗೆ ಓಡಾಡಲು ಶಕ್ತಿಯಿಲ್ಲದ ಕಾರಣ ಆಕೆಗೆ ಚಿಕ್ಕಪುಟ್ಟ ಸಹಾಯ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ.

ಹೀಗೆ ಸಹಾಯ ಮಾಡುವ ಮೂಲಕ ನಂಬಿಕೆ ಗಿಟ್ಟಿಸಿಕೊಂಡಿದ್ದ ಜ್ಯೂಲಿರೋಸ್ ಜ. 2ರಂದು ಮುಖ್ಯದ್ವಾರದ ಗ್ಲಾಸ್ ಒಡೆದು ಮನೆಯೊಳಗೆ ಪ್ರವೇಶಿಸಿದ್ದಾನೆ. ಬಳಿಕ ರೂಂನಲ್ಲಿ ಮಲಗಿದ್ದ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿ, ಪರಾರಿಯಾಗಿದ್ದ. ಈ ಘಟನೆಯಿಂದ ಆಘಾತಕ್ಕೊಳಗಾಗಿದ್ದ ವೃದ್ಧೆ ಬಳಿಕ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದರು.

ಅಜ್ಜಿಕೊಟ್ಟ ದೂರಿನ ಮೇರೆಗೆ ಪ್ರಕರಣದ ಬೆನ್ನತ್ತಿದ ಖಾಕಿ ಪಡೆಗೆ ಈ ಆರೋಪಿ ಮೇಲೆ ಅನುಮಾನ ಬಂದ ಹಿನ್ನೆಲೆ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಯಲಾಗಿದೆ. ತನ್ನ ಅಜ್ಜಿ ವಯಸ್ಸಿನ ಮನೆಯೊಡತಿಯನ್ನೇ ಕಾಮತೃಷೆಗೆ ಬಳಸಿಕೊಂಡ ಈ ಕಾಮುಕನನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಸದ್ಯ ವೃದ್ಧೆಯ ಆರೋಗ್ಯ ಸುಧಾರಿಸಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ