Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆರಾಜಕೀಯ

838 ಕೋಟಿ ರೂ. ಹಗರಣ ಕಿತ್ತಾಟ: ಎನ್.ಆರ್. ರಮೇಶ್ ಆರೋಪ ರಾಜಕೀಯ ದುರುದ್ಧೇಶದ್ದು- ಶಾಸಕ ಶಿವಣ್ಣ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಆನೇಕಲ್: ಅಭಿವೃದ್ಧಿ ನೆಪದಲ್ಲಿ 838 ಕೋಟಿ ರೂ. ಹಗರಣ ನಡೆದಿದೆ ಎಂದು ತಮ್ಮ ವಿರುದ್ಧ ಬಿಜೆಪಿಯ ಎನ್.ಆರ್. ರಮೇಶ್ ಮಾಡಿರುವ ಆರೋಪ ರಾಜಕೀಯ ದುರುದ್ಧೇಶದಿಂದ ಕೂಡಿದೆ ಎಂದು ಆನೇಕಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ ಶಿವಣ್ಣ ಹೇಳಿದ್ದಾರೆ.

ವಿಜಯಪಥ ಹೊಸ ಆಪ್ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/details?id=manyathy.vijayapatha.app

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಚಂದಾಪುರ ಸಮೀಪದ ಸೂರ್ಯಸಿಟಿ ಗೃಹಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್‌ ಶಾಸಕ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡುವ ಕುತಂತ್ರದ ಭಾಗವಾಗಿದೆ. ಇದಕ್ಕೆ ನುನು ಹೆದರುವ ಪ್ರಶ್ನೆಯೇ ಇಲ್ಲ. ಸರ್ಕಾರದ ಯಾವುದೇ ತನಿಖೆಗೂ ಸಿದ್ದ ಎಂದು ತಿಳಿಸಿದರು.

ನಾಳೆ ಗ್ರಾಮ ಪಂಚಾಯಿತಿ ಚುನಾವಣೆ ಇದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಹಿನ್ನಡೆಯಾಗಲಿ ಎಂದು ಇಂತಹ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಆನೇಕಲ್ ಯೋಜನಾ ಪ್ರಾಧಿಕಾರದಲ್ಲಿ ತಾಲೂಕಿನ 71 ಕೆರೆಗಳ ಅಭಿವೃದ್ಧಿ 570 ಕೋಟಿ ಅನುದಾನ ದುರ್ಬಳಕೆಯಾಗಿದೆ ಎಂದು ರಮೇಶ್ ಆರೋಪ ಮಾಡಿದ್ದಾರೆ. ಆದರೆ ವಾಸ್ತವವಾಗಿ ಆನೇಕಲ್ ವಿಧಾನಸಭಾ ವ್ಯಾಪ್ತಿಯಲ್ಲಿ ಆನೇಕಲ್ ಯೋಜನಾ ಪ್ರಾಧಿಕಾರದಿಂದ 65 ಕೋಟಿ ಮಾತ್ರ ರಸ್ತೆ ಮತ್ತು ಕೆರೆ ಅಭಿವೃದ್ಧಿಗೆ ಅನುದಾನ ಬಳಕೆ ಮಾಡಲಾಗಿದೆ ಎಂದರು.

ಇನ್ನು ಅದರಲ್ಲಿ 49 ಕೋಟಿ ರೂ. ಅನುದಾನದ ಕಾಮಗಾರಿಗಳು‌ ಮುಗಿದಿದ್ದು, 11 ಕೋಟಿ ರೂ. ಅನುದಾನದ ಕಾಮಗಾರಿಗಳು ಪ್ರಗತಿಯಲ್ಲಿದೆ. ಇಂತಹ ಸ್ಥಿತಿಯಲ್ಲಿ 570 ಕೋಟಿ ರೂ. ಹೇಗೆ ದುರ್ಬಳಕೆ ಮಾಡಲು ಸಾಧ್ಯ. ಬಳಕೆಯಾದ 65 ಕೋಟಿ ರೂ. ಬಿಟ್ಟು 505 ಕೋಟಿ ರೂ. ಬಹುಶ ಬಿಜೆಪಿಯವರು ದುರ್ಬಳಕೆ ಮಾಡಿಕೊಂಡಿರಬಹುದು. ಹಾಗಾಗಿ 505 ಕೋಟಿ ರೂ. ಬಗ್ಗೆ ತನಿಖೆಯಾಗಬೇಕು. ಇಲ್ಲವಾದರೆ ಮಾನನಷ್ಟ ಮೊಕದ್ದಮೆ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಆನೇಕಲ್ ಯೋಜನಾ ಪ್ರಾಧಿಕಾರದಿಂದ ಒಂದು ಕೆರೆ ಮಾತ್ರ 1 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಅದು ಬಿಜೆಪಿ ಶಾಸಕ ಕೃಷ್ಣಪ್ಪ ಪ್ರತಿನಿಧಿಸುವ ಬೆಂಗಳೂರು ದಕ್ಷಿಣ ತಾಲೂಕಿನ ರಾಗಿಹಳ್ಳಿ ಕರೆ. ಹಾಗಾದರೆ ಕೃಷ್ಣಪ್ಪನ ವಿರುದ್ಧ ಯಾಕೆ ದೂರು ನೀಡಿಲ್ಲ ಎಂದು ಶಿವಣ್ಣ ಪ್ರಶ್ನಿಸಿದ್ದಾರೆ‌.

ವಿಜಯಪಥ ಹೊಸ ಆಪ್ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/details?id=manyathy.vijayapatha.app

1997 ರಿಂದ ಇಲ್ಲಿಯವರೆಗೆ ತಾಲ್ಲೂಕಿನಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳ ಬಗ್ಗೆಯು ತನಿಖೆ ಮಾಡಿಸಲಿ. ಆಗ ದೊಡ್ಡಕೆರೆ ಮಣ್ಣು ಗುಡ್ಡೆಗಳು, ಚಿಕ್ಕ ಕೆರೆ ಕ್ರೀಡಾಂಗಣ, ಆನೇಕಲ್ ಪಟ್ಟಣದ ಕಾರಂಜಿ ಕಾಮಗಾರಿಗಳಲ್ಲಿನ ಆಕ್ರಮಗಳೂ ಹೊರ ಬರಲಿ. ನಿಮ್ಮದೇ ಸರ್ಕಾರ ರಾಜ್ಯದಲ್ಲಿದೆ. ತನಿಖೆ ಮಾಡಿಸಿ. ನಾನು ಹೆದರುವುದಿಲ್ಲ ಎಂದು ಎನ್ ಆರ್ ರಮೇಶ್ ವಿರುದ್ಧ ಗುಟುರು ಹಾಕಿದ್ದಾರೆ.

ಚಲ್ಲಘಟ್ಟ ಮತ್ತು ಕೊರಮಂಗಲ ಕಣಿವೆಯಿಂದ ಏತ ನೀರಾವರಿ ಯೋಜನೆ ಅನುಷ್ಠಾನದಲ್ಲಿ 270 ಕೋಟಿ ರೂ. ಅಕ್ರಮ ನಡೆದಿದೆ. ಜತೆಗೆ ಕಾಮಗಾರಿ ನಿರ್ದಿಷ್ಟ ಕಾಲದಲ್ಲಿ ಪೂರ್ಣಗೊಂಡಿಲ್ಲ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಶಿವಣ್ಣ, ಏತ ನೀರಾವರಿ ಯೋಜನೆ ತಡವಾಗಲು ಇಂದಿನ ಬಿಜೆಪಿ ಸರ್ಕಾರವೇ ಕಾರಣ. ಏತ ನೀರಾವರಿ ಯೋಜನೆ ತಾಲೂಕಿನ 68 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ. ಬಿಜೆಪಿ ಸರ್ಕಾರ ಸಕಾಲಕ್ಕೆ ಅನುದಾನ ಬಿಡುಗಡೆ ಮಾಡಿದ್ದರೆ ಇವತ್ತು ತಾಲೂಕಿನ ಕೆರೆಗಳು ತುಂಬಿ ನಳನಳಿಸುತ್ತಿದ್ದವು. ಆದ್ರೆ ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಶಾಸಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಬಿಜೆಪಿಯವರು, ತಾಪಂ ಅಧ್ಯಕ್ಷರು ಬಿಜೆಪಿಯವರು. ಟೆಂಡರ್ ಕರೆಯುವಾಗ ಕಾಮಗಾರಿ ನಡೆಸುವಾಗ ಅಕ್ರಮ ಕಾಣಲಿಲ್ಲವೇ ಎಂದು ತಿರುಗೇಟು ನೀಡಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ