Please assign a menu to the primary menu location under menu

CrimeNEWSದೇಶ-ವಿದೇಶ

ಚುಡಾಯಿಸುತ್ತಿದ್ದನ್ನು ಅಪ್ಪನ ಬಳಿ ಹೇಳಿದ್ದಕ್ಕೇ ಬಾಲಕಿಯ ಕೊಡಲಿಯಿಂದ ಹೊಡೆದು ಕೊಂದ ದುಷ್ಕರ್ಮಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಬಾಲಕಿಯನ್ನು ಹಲವು ತಿಂಗಳಿನಿಂದ ಹಿಂಬಾಲಿಸುತ್ತಿದ್ದ ವ್ಯಕ್ತಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಪ್ರವೀಣ್‌ (21) ಹತ್ಯೆ ಮಾಡಿದ ಆರೋಪಿಯಾಗಿದ್ದು ಆತನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

11ನೇ ತರಗತಿ 16 ವರ್ಷದ ವಿದ್ಯಾರ್ಥಿನಿಯನ್ನು ನಿರ್ದಯವಾಗಿ ಕೊಡಲಿಯಿಂದ ಹಲ್ಲೆಮಾಡಿ ಪರಾರಿಯಾಗಿದ್ದ ಆರೋಪಿ ಹರ್ಯಾಣದ ಪಲ್ವಾಲ್‌ನಲ್ಲಿನ ಆತನ ಅಕ್ಕನ ಮನೆಯಿಂದ ಬಚ್ಚಿಟ್ಟುಕೊಂಡಿದ್ದ . ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯೊಬ್ಬಳ ಮೇಲೆ ಕೊಡಲಿಯಿಂದ ದಾಳಿ ನಡೆಸಲಾಗಿದೆ ಎಂದು ನಮಗೆ ಮಧ್ಯಾಹ್ನ 1.30ರ ಸುಮಾರಿಗೆ ಸೌತ್ ಕ್ಯಾಂಪಸ್ ಪೊಲೀಸರಿಂದ ಕರೆಬಂದಿತ್ತು. ಆಕೆಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರದೃಷ್ಟವಶಾತ್ ಆಕೆ ಮಂಗಳವಾರ ಮೃತಪಟ್ಟಿದ್ದಾಳೆ. ಆರೋಪಿಯು ಆಕೆಗೆ ಸದಾ ಕಿರುಕುಳ ನೀಡುತ್ತಿದ್ದ ಎಂದು ನೈಋತ್ಯ ಜಿಲ್ಲಾ ಪೊಲೀಸ್ ಆಯುಕ್ತ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ದೆಹಲಿಯ ಮೋತಿ ಬಾಗ್ ಪ್ರದೇಶದ ನಿವಾಸಿಯಾಗಿದ್ದ ನಿರುದ್ಯೋಗಿ ಪ್ರವೀಣ್, ಬಾಲಕಿಯನ್ನು ಹಿಂಬಾಲಿ ಚುಡಾಯಿಸುತ್ತಿದ್ದ. ಇದರಿಂದ ಕಿರಿಕಿರಿ ಅನುಭವಿಸಿದ್ದ ಬಾಲಕಿ, ಕಾವಲುಗಾರನ ಕೆಲಸ ಮಾಡುವ ತಂದೆಗೆ ತಿಳಿಸಿದ್ದಳು. ಆಕೆಯ ತಂದೆ ಪ್ರವೀಣ್‌ನನ್ನು ಥಳಿಸಿದ್ದರು. ಇದರಿಂದ ಮತ್ತಷ್ಟು ಕೋಪಗೊಂಡಿದ್ದ ಪ್ರವೀಣ್, ಆಕೆಯನ್ನು ಕೊಲ್ಲಲು ನಿರ್ಧರಿಸಿದ್ದ.

ಹೀಗಾಗಿ ಸುಮಾರು ಒಂದು ತಿಂಗಳ ಹಿಂದೆ ಕೊಡಲಿ ಖರೀದಿಸಿದ್ದ ಆತ, ಸೋಮವಾರ ಬಾಲಕಿಯ ಮನೆಗೆ ತೆರಳಿದ್ದ. ಆಕೆಯ ಮುಖಕ್ಕೆ ಕೊಡಲಿ ಬೀಸಿ ಅಲ್ಲಿಂದ ಪರಾರಿಯಾಗಿದ್ದ. ಬಾಲಕಿಯ ಕಣ್ಣಿನ ರೆಪ್ಪೆಯ ಬಳಿ ತೀವ್ರ ಗಾಯವಾಗಿತ್ತು. ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಳು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ