NEWSನಮ್ಮರಾಜ್ಯರಾಜಕೀಯ

ಯಾರೂ ನಿರೀಕ್ಷಿಸದ ವ್ಯಕ್ತಿ ರಾಜ್ಯದ ಸಿಎಂ ಆಗ್ತಾರೆ: ಯತ್ನಾಳ್‌ ಅಚ್ಚರಿಯ ಹೇಳಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಅವರ ಪತ್ರನ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ರಾಜ್ಯದಲ್ಲಿ ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ಕುರಿತು ಹೈಕಮಾಂಡ್ ಕಾದು ನೋಡುತ್ತಿದೆ. ಎಷ್ಟು ಬೇಗ ಸಿಎಂ ಬಗಲಾಗುತ್ತಾರೋ ಅಷ್ಟು ಬೇಗ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗುತ್ತಾರೆ. ಒಳ್ಳೆಯವರು, ಪ್ರಾಮಾಣಿಕರು, ಹಿಂದುತ್ವದ ಪರ ಇರುವವರು ಸಿಎಂ ಆಗುತ್ತಾರೆ ನೋಡುತ್ತಿರಿ ಎಂದು ಅಚ್ಚರಿಯ ಹೇಳಿಕೆ ನೀಡುವ ಮೂಲಕ ಇಂದು ರಾಜಕೀಯ ನೂತನ ಚರ್ಚೆಗೆ ಗ್ರಾಸವಾಗಿದ್ದಾರೆ.

ಪಕ್ಷದ ವರಿಷ್ಠರು ಒಂದು ವೇಳೆ ನನಗೆ ಅವಕಾಶ ಕೊಟ್ಟರೆ ಬೇಡ ಅನ್ನಲ್ಲ. ಅಲ್ಲದೇ ಕೆಲವು ಶಾಸಕರು ಟಿಕೆಟ್ ಕೊಡಲ್ಲ ಅನ್ನೋ ಭಯದಿಂದ ಮಾತನಾಡುತ್ತಿಲ್ಲ ಅಂತಾ ತಮ್ಮದೇ ಪಕ್ಷದವರ ಬಗ್ಗೆ ಕಿಡಿಕಾರಿದರು.

ಅಖಿಲ ಭಾರತ ಪಂಚಮಶಾಲಿ ಮಠಾಧೀಶರ ಒಕ್ಕೂಟ ಸ್ಥಾಪನೆ ರಾಜಕೀಯ ಪ್ರೇರಿತವಾಗಿದೆ. ನಿನ್ನೆ ಸಭೆ ಸೇರಿದ್ದವರು ಪಂಚಮಶಾಲಿ ಪೀಠಾಧಿಪತಿಗಳಲ್ಲ, ಅವರೆಲ್ಲ ವಿರಕ್ತ ಮಠದ ಸ್ವಾಮೀಜಿ ಎಂದು ಹೇಳಿದರು.

ಇನ್ನು ರಾಜ್ಯ ರಾಜಕೀಯದಲ್ಲಿ ಒಂದು ಕಡೆ ಸಚಿವ ಸಿ.ಪಿ ಯೋಗೇಶ್ವರ್‌ ಬಿಎಸ್‌ವೈ ಮತ್ತು ಕುಟುಂಬದವರ ವಿರುದ್ಧ ಕಿಡಿಕಾರುತ್ತಿದ್ದರೆ ಇತ್ತ ಯತ್ನಾಳ್‌ ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ಮತ್ತೆ ಮತ್ತೆ ತೋರಿಸಿಕೊಡುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸಿಎಂ ಬದಲಾವಣೆಯೇ ಅಸ್ತ್ರವಾ? ಎಂಬುದನ್ನು ಕಾದು ನೋಡಬೇಕಿದೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ