NEWSನಮ್ಮಜಿಲ್ಲೆರಾಜಕೀಯ

ಮಾದರಿ ಗ್ರಾಮ ರೂಪಿಸಲು ಪಣ ತೊಡಿ : ಗ್ರಾಪಂ ನೂತನ ಸದಸ್ಯರಿಗೆ ತಾಪಂ ಇಒ ಶ್ರುತಿ ಕಿವಿಮಾತು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ನೂತನವಾಗಿ ಆಯ್ಕೆಯಾಗಿರುವ ಗ್ರಾಪಂ ಸದಸ್ಯರು ತಮಗಿರುವ ಐದು ವರ್ಷಗಳ ಅವಧಿಯನ್ನು ಸದ್ಬಳಕೆ ಬಳಸಿಕೊಂಡು ಜನತೆಯ ವಿಶ್ವಾಸವನ್ನು ಗಳಿಸುವುದರೊಂದಿಗೆ ಗ್ರಾಮಗಳನ್ನು ಮಾದರಿ ಗ್ರಾಮವನ್ನಾಗಿ ಮಾಡುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ತಾಪಂ ಕಾರ್ಯನಿರ್ವಣಾಧಿಕಾರಿ ಡಿ.ಸಿ.ಶ್ರುತಿ ಕಿವಿ ಮಾತು ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಏರ್ಪಡಿಸಿದ್ದ ಐದು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಸ್ಥಳೀಯ ಸರ್ಕಾರಗಳಿಗೆ ಯಾವುದೇ ಹೈಕಮಾಂಡ್ ಇರುವುದಿಲ್ಲ ಇಲ್ಲಿ ಸದಸ್ಯರೇ ಹೈಕಮಾಂಡ್, ಸರ್ಕಾರದ ಯೋಜನೆಗಳ ಬಗ್ಗೆ ಸದಸ್ಯರಿಗೆ ಅರಿವಿರಬೇಕು, ಗ್ರಾಮಗಳ ಅಭಿವೃದ್ಧಿಗೆ ಪೂರಕವಾದ ಅನುದಾನ ಪಂಚಾಯಿತಿಯಲ್ಲಿಯೇ ಲಭ್ಯವಿರುತ್ತದೆ. ಆದ್ದರಿಂದ ಗ್ರಾಮಗಳ ಅಭಿವೃದ್ಧಿಗೆ ಸದಸ್ಯರೆಲ್ಲರೂ ಪಕ್ಷಭೇದ ಮರೆತು ಶ್ರಮಿಸಬೇಕಿದೆ.

ಉದ್ಯೋಗ ಖಾತ್ರಿ ಯೋಜನೆ, ವಸತಿ ಯೋಜನೆ, ಪಶು ಸಂಗೋಪನೆ, ಜಲ ರಕ್ಷಣೆ, ದನದ ಕೊಟ್ಟಿಗೆ, ಬದು ನಿರ್ಮಾಣ ಸೇರಿ ಕೃಷಿ ಸಂಬಂಧಿತ ಮಾಹಿತಿಗಳನ್ನು ತರಬೇತಿ ಶಿಬಿರದಲ್ಲಿ ಸದಸ್ಯರಿಗೆ ನೀಡಲಾಗುವುದು. ಸರಕಾರದ ವಿವಿಧ ಯೋಜನೆಗಳನ್ನು ಅರ್ಹರಗೆ ತಲುಪಿಸುವ ಕಲೆಸವನ್ನು ಸದಸ್ಯರು ಮಾಡಬೇಕು ಎಂದರು.

ಎನ್ಆರ್‌ಇಜಿ ಸಹಾಯಕ ನಿರ್ದೆಶಕ ರಘುನಾಥ್ ಮಾತನಾಡಿ, ಗ್ರಾಪಂ ಸದಸ್ಯರಿಗೆ ಆಯೋಜಿಸಿರುವ ಈ ತರಬೇತಿ ಶಿಬಿರ ಅತ್ಯಂತ ಮಹತ್ತರವಾಗಿದ್ದು, ಸದಸ್ಯರು ನೆಪಹೇಳಿ ತರಬೇತಿಗೆ ತಪ್ಪಿಸಿಕೊಳ್ಳಬಾರದು. ಸರ್ಕಾರದ ವಿವಿಧ ಯೋಜನಗಳ ಮಾಹಿತಿ ಪಡೆದರೆ, ಅವುಗಳನ್ನು ನಿಮ್ಮ ಗ್ರಾಮಗಳಲ್ಲಿ ಜಾರಿಗೊಳಿಸಲು ಅನುಕೂಲವಾಗುತ್ತದೆ.

ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾವಂತರು ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿರುವುದರಿಂದ ಸರ್ಕಾರದ ಯೋಜನೆಗಳು ಪ್ರಗತಿ ಕಾಣಲು ಸಹಕಾರಿಯಾಗಲಿದೆ ಎಂದರು.

ಗ್ರಾಮೀಣ ನೈರ್ಮಲ್ಯ, ಆರೋಗ್ಯ, ಶುದ್ಧ ಕುಡಿಯುವ ನೀರು, ಅಂಗನವಾಡಿ ಪೂರಕ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣದ ಬಗ್ಗೆ ಅರಿವು, ಗ್ರಂಥಾಲಯಗಳ ಆಧುನೀಕರಣ, ಆಡಳಿತ ಸುಧಾರಣೆಯಲ್ಲಿ ಜನಪ್ರತಿನಿಧಿಗಳ ಪಾತ್ರ ಹಾಗೂ ಗ್ರಾಮೀಣ ಭಾಗದಲ್ಲಿ ಸೇವೆ ಮಾಡಲು ಬೇಕಾದ ಉಪಯುಕ್ತ ಮಾಹಿತಿ ಸೇರಿದಂತೆ ಇನ್ನಿತರ ವಿಷಯಗಳನ್ನು ಕುರಿತು ಮಾಹಿತಿ ನೀಡಲಾಯಿತು.

ಸಂಪನ್ಮೂಲ ವ್ಯಕ್ತಿಗಳಾದ ಎಸ್.ಸೋಮಶೇಖರ್, ಸಿ.ಆರ್.ಪ್ರಸನ್ನ, ವಿವಿಧ ಗ್ರಾಪಂ ಅಧ್ಯಕ್ಷರಾದ ಎಚ್.ಸಿ.ದೇವೆಂದ್ರ, ಮೀನಾಕ್ಷಮ್ಮ ಬಸವಣ್ಣ, ಪ್ರಭಾವತಿ, ಮರಡಿಯೂರು ಶಿವು, ರಾಣಿ, ವಿಜಯಕುಮಾರ್, ಮಾಲಂಗಿ ಹರೀಶ್, ಮಾಳಮ್ಮ, ನಸರತ್ ಬಾನು, ಸಿ.ಎಸ್.ರವಿ ಸೇರಿದಂತೆ ಮತ್ತಿತರರು ಇದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್