NEWSದೇಶ-ವಿದೇಶ

ಭಾರತಕ್ಕೂ ಒಕ್ಕರಿಸಿದ ಹೊಸ ಸ್ವರೂಪದ ಕೊರೊನಾ ವೈರಸ್‌

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಚೆನ್ನೈ: ಇಂಗ್ಲೆಂಡ್‌ನಿಂದ ಚೆನ್ನೈಗೆ ಆಗಮಿಸಿರುವ ಪ್ರಯಾಣಿಕರೊಬ್ಬರಲ್ಲಿ ಹೊಸ ಮಾದರಿಯ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬ್ರಿಟನ್‌ನಲ್ಲಿ ಭಾರಿ ಆತಂಕ ಸೃಷ್ಟಿಸಿರುವ ಕೊರೊನಾ ಸೋಂಕಿನ ಹೊಸ ಮಾದರಿ ಈ ಮೂಲಕ ಭಾರತಕ್ಕೂ ಲಗ್ಗೆ ಇಟ್ಟು ಆತಂಕ ಹೆಚ್ಚಾಗುವಂತೆ ಮಾಡಿದೆ.

ಮಂಗಳವಾರ (ಡಿ.22) ಬೆಳಗ್ಗೆ ಬ್ರಿಟನ್ ನಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಒಟ್ಟು 15 ಮಂದಿ ಆಗಮಿಸಿದ್ದು, ಅವರಲ್ಲಿ ಒಬ್ಬರಿಗೆ ಹೊಸ ಮಾದರಿಯ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಈ ನಡುವೆ ಆರೋಗ್ಯ ಕಾರ್ಯದರ್ಶಿ ಜೆ. ರಾಧಾಕೃಷ್ಣನ್ ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಯಾಣಿಕರ ಮಾದರಿಗಳನ್ನು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ, ಪುಣೆಗೆ ಕಳುಹಿಸಲಾಗಿದ್ದು, ವ್ಯಕ್ತಿಗೆ ಹೊಸ ಮಾದರಿಯ ಕೊರೊನಾ ಸೋಂಕು ತಗುಲಿರುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ 10 ದಿನಗಳಲ್ಲಿ ಬ್ರಿಟನ್‌ನಿಂದ ರಾಜ್ಯಕ್ಕೆ ಆಗಮಿಸಿದ ಎಲ್ಲಾ ಪ್ರಯಾಣಿಕರನ್ನು ಪತ್ತೆ ಹಚ್ಚುವ ಕಾರ್ಯವನ್ನು ಈಗಾಗಲೇ ಆರೋಗ್ಯ ಇಲಾಖೆ ಆರಂಭಿಸಿದೆ ಎಂದು ತಿಳಿಸಿದ್ದಾರೆ.

ಸೋಂಕಿತ ಪ್ರಯಾಣಿಕರನ್ನು ಗಿಂಡಿಯ ಕಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿರುವ ವಿಶೇಷ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.

ಈ ನಡುವೆ ಆಸ್ಪತ್ರೆಯ ವೈದ್ಯರು ಹೇಳಿಕೆ ನೀಡಿ, ಸೋಂಕಿತ ವ್ಯಕ್ತಿ ಲಕ್ಷಣರಹಿತವಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ರೂಪಾಂತರ ಕೊರೊನಾ ಬಗ್ಗೆ ಜನರು ಆತಂಕಕ್ಕೊಳಗಾಗಬಾರದು. ಸೋಂಕು ಹರಡದಂತೆ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಆರ್‌ಟಿ ಪಿಸಿಆರ್ ಪರೀಕ್ಷೆಗಳಿಗೆ ವಿಸ್ತಾರವಾದ ವ್ಯವಸ್ಥೆ ಮಾಡಲಾಗಿದೆ. ಹೊಸ ಮಾದರಿ ಕೊರೋನಾ ಪತ್ತೆಯಾಗುತ್ತಿದ್ದಂತೆಯೇ ಯುರೋಪಿಯನ್ ರಾಷ್ಟ್ರಗಳ ಎಲ್ಲಾ ವಿಮಾನಗಳನ್ನು ಕಳೆದ ರಾತ್ರಿಯಿಂದಲೇ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಕರ್ನಾಟಕಕ್ಕೂ 138 ಪ್ರಯಾಣಿಕರು ಬ್ರಿಟನ್‌ನಿಂದ ಆಗಮಿಸಿದ್ದ, ಅವರೆಲ್ಲರ ಗಂಟಲು ಮತ್ತು ರಕ್ತ ಮಾದರಿಯನ್ನು ಲ್ಯಾಬ್‌ಗಳಿಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್‌ ತಿಳಿಸಿದ್ದಾರೆ.

ರಾಜ್ಯದ ರಾಜಧಾನಿಯಲ್ಲಿ ಹೊಸ ಸ್ವರೂಪದ ಕೊರೊನಾಗೆ ಬ್ರೇಕ್‌ ಹಾಕುವ ಎಲ್ಲಾ ಕ್ರಮಗಳನ್ನು ಸರ್ಕಾರ ಮತ್ತು ಆರೋಗ್ಯ ಇಲಾಖೆ ಕೈಗೊಂಡಿದೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ