NEWSನಮ್ಮರಾಜ್ಯರಾಜಕೀಯ

ವರ್ಷ ಎಂಟು ಸಾಧನೆ ನೂರೆಂಟು: ನ.26 ರಂದು ಆಮ್ ಆದ್ಮಿ ಪಕ್ಷದ 8ನೇ ಸಂಸ್ಥಾಪನಾ ದಿನಾಚರಣೆ

ಕರ್ನಾಟಕದ ಹೆಮ್ಮೆಯ ಕೊರೊನಾ ಯೋಧರಿಗೆ ಸನ್ಮಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಸ್ವರಾಜ್ಯ ಕಲ್ಪನೆಯ ಮೇಲೆ ಸ್ಥಾಪಿತವಾದ ಆಮ್ ಆದ್ಮಿ ಪಕ್ಷ ಇಂದು ದೇಶದಲ್ಲೇ ವೇಗವಾಗಿ ಬೆಳೆಯುತ್ತಿರುವ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಈ ಹಿನ್ನೆಲೆಯಲ್ಲಿ ವರ್ಷ ಎಂಟು ಸಾಧನೆ ನೂರೆಂಟು ಘೋಷವಾಕ್ಯದೊಂದಿಗೆ ಗುರುವಾರ (ನ.26) ಸಂಜೆ 4 ಗಂಟೆಗೆ ಹಲಸೂರು ಕೆರೆ ಬಳಿಯ ಆರ್.ಬಿ.ಎನ್.ಎಂ.ಎಸ್ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ 8ನೇ ಸಂಸ್ಥಾಪನಾ ದಿನಾಚರಣೆ ಆಯೋಜಿಸಲಾಗಿದೆ ಎಂದು ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ತಿಳಿಸಿದ್ದಾರೆ.

ತಮ್ಮ ಪ್ರಾಣದ ಹಂಗನ್ನು ತೊರೆದು ಲಾಕ್‌ಡೌನ್ ವೇಳೆ ದುಡಿದ ಕರುನಾಡಿನ ಹೆಮ್ಮೆಯ ಕೊರೊನಾ ಯೋಧರನ್ನು ಕಾರ್ಯಕ್ರಮದಲ್ಲಿ  ಸನ್ಮಾನಿಸಲಾಗುವುದು ಎಂದು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇಡೀ ಭಾರತದ ರಾಜಕೀಯ ಇತಿಹಾಸದಲ್ಲಿ ಇಷ್ಟು ವೇಗವಾಗಿ ಬೆಳೆದ ರಾಜಕೀಯ ಪಕ್ಷ ಇನ್ನೊಂದಿಲ್ಲ. ಕೇವಲ ಎಂಟು ವರ್ಷದಲ್ಲಿ ನೂರೆಂಟು ಸಾಧನೆ ಮಾಡಿದ ನಮ್ಮ ಪಕ್ಷ ಭಾರತದ 135 ಕೋಟಿ ಜನರಲ್ಲಿ ಬದಲಾವಣೆಯ ಭರವಸೆ ಮೂಡಿಸಿದೆ, ಬದಲಾವಣೆ ಬಯಸುವ ಜನರು ಕಾರ್ಯಕ್ರಮಕ್ಕೆ ಬರಬೇಕು ಎಂದು ಮನವಿ ಮಾಡಿದರು.

ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಮಾತನಾಡಿ, ನಮ್ಮ ಪಕ್ಷ ರಾಷ್ಟ್ರೀಯ ನಾಯಕರಾದ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಗದ್ದುಗೆಯನ್ನು 3 ಬಾರಿ ಏರಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ದೆಹಲಿಯ ಜನರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಮಾಡಿದ ಕ್ರಾಂತಿಕಾರಕ ಬದಲಾವಣೆಗಳಿಂದ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ಸರ್ಕಾರ ವಿಶ್ವದರ್ಜೆಯ ಸವಲತ್ತುಗಳನ್ನು ತನ್ನ ಜನರಿಗೆ ಪರಿಚಯಿಸಿದೆ. ಈ ಸಾಧನೆಗಳ ಕುರಿತು ತಯಾರಿಸಿರುವ “ಇನ್‌ಸಿಗ್ನಿಫಿಕೆಂಟ್ ಮ್ಯಾನ್” ಎನ್ನುವ ಚಲನಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದರು.

ಅಂದು ಸಂಜೆ 5.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು; ಇನ್‌ಸಿಗ್ನಿಫಿಕೆಂಟ್ ಮ್ಯಾನ್ ಚಲನಚಿತ್ರ ಪ್ರದರ್ಶನ ಮತ್ತು ಏಷ್ಯಾದ ಬಲಶಾಲಿ ವ್ಯಕ್ತಿ ಮನೋಜ್ ಚೋಪ್ರಾ ಅವರಿಂದ ಶಕ್ತಿ ಪ್ರದರ್ಶನವಿರಲಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ