NEWSನಮ್ಮರಾಜ್ಯರಾಜಕೀಯ

ತಾಪಂ, ಜಿಪಂ, ಬಿಬಿಎಂಪಿ ಚುನಾವಣೆ ಸಿದ್ಧತೆಯಲ್ಲಿ ಆಮ್ ಆದ್ಮಿ ಪಕ್ಷ: ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಮ್ಮ ಪಕ್ಷವು ಸಂಘಟಿತವಾಗಿ ಕೆಲಸ ಮಾಡುತ್ತಿದ್ದು, ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಹೇಳಿದ್ದಾರೆ.

ಶುಕ್ರವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಕಷ್ಟು ಯುವ ಜನತೆ ಪಕ್ಷದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಪ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಯಲ್ಲೂ ಗೆಲುವು ಸಾಧಿಸಲಿದ್ದೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಅರವಿಂದ್ ಕೇಜ್ರಿವಾಲ್ ಅವರ ದೆಹಲಿ ಮಾದರಿಗೆ ರಾಷ್ಟದ ಜನ ಮನಸೋತಿದ್ದಾರೆ. ಬಿಜೆಪಿ ಕಾಂಗ್ರೆಸ್ ಹೊರತಾಗಿ ಪರ್ಯಾಯ ರಾಜಕೀಯ ಪಕ್ಷವನ್ನು ಎದುರು ನೋಡುತ್ತಿದ್ದು ಇದಕ್ಕೆ ಉದಾಹರಣೆಯಾಗಿ ಇತ್ತೀಚೆಗೆ ರಾಷ್ಟ್ರದಾದ್ಯಂತ ಅನೇಕ ರಾಜ್ಯಗಳಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಜಯಗಳಿಸಿರುವುದು ಬದಲಾವಣೆಯ ಮುನ್ನುಡಿ ಎಂದರು.

ಕೊರೊನಾ ಸಂಕಷ್ಟದ ಹೊತ್ತಿನಲ್ಲೂ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್ ಬೆಲೆ, ಆಸ್ತಿ ತೆರಿಗೆ ಸೇರಿದಂತೆ ಎಲ್ಲಾ ಬೆಲೆಗಳನ್ನು ಹೆಚ್ಚಳ ಮಾಡಿ ಜನ ಸಾಮಾನ್ಯರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೆಂಗಳೂರನ್ನು ಕೊಳ್ಳೆ ಹೊಡೆಯುವ ಸಲುವಾಗಿ ಬಿಬಿಎಂಪಿ ಚುನಾವಣೆ ಮುಂದೂಡಿದ್ದು, ತನಗೆ ಅನುಕೂಲವಾಗುವ ಹಾಗೇ ವಾರ್ಡ್ ವಿಂಗಡಣೆ ಮಾಡಿಕೊಳ್ಳುತ್ತಿದೆ‌ ಎಂದು ಕಿಡಿಕಾರಿದರು.

ಬಿಬಿಎಂಪಿ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದ ಪ್ರತಿ ವಿಧಾನಸಭಾ ಕ್ಷೇತ್ರ, ವಾರ್ಡ್ ಹಾಗೂ ಬೂತ್ ಮಟ್ಟದಲ್ಲೂ ಕಚೇರಿಗಳನ್ನು ತೆರೆದು ವೀಕ್ಷಕರನ್ನು ನೇಮಿಸಿಲಾಗಿದೆ. ಬೂತ್ ಮಟ್ಟದಲ್ಲಿ ಜನ ಸಭೆಗಳನ್ನು ನಡೆಸಲಾಗುತ್ತಿದ್ದು, ಜನರು ನಮ್ಮ ಪಕ್ಷದ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ವಿಧಾನಪರಿಷತ್ತಿನಲ್ಲಿ 79 ಎ,ಬಿ ಸೇರಿದಂತೆ ರೈತ ವಿರೋಧಿ ಕಾಯ್ದೆಗಳಿಗೆ ಬೆಂಬಲ ನೀಡಿದ ಜೆಡಿಎಸ್ ರೈತರ ಹೆಸರು, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳಲು ನಾಚಿಕೆ ಪಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವರ್ಷ ಡಿಸೆಂಬರ್‌ 22 ಮತ್ತು 27 ರಂದು ನಡೆದ ವಿಚಾರಣೆ ವೇಳೆ ಹೈಕೋರ್ಟ್ ದೇವರ ಬೀಸನಹಳ್ಳಿ ಮತ್ತು ಬೆಳ್ಳಂದೂರು ಡಿನೋಟಿಫಿಕೇಶನ್ ಪ್ರಕರಣದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ನವರು ವಿಚಾರಣೆ ಎದುರಿಸಬೇಕೆಂದು ಆದೇಶ ನೀಡಿದ್ದರೂ ಸಹ ಲೋಕಾಯುಕ್ತ ಸಂಸ್ಥೆಯನ್ನೇ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿ ರಿಪೋರ್ಟ್ ಹಾಕಿಸಿಕೊಂಡಿರುವುದು ನಿಜಕ್ಕೂ ಆಘಾತಕಾರಿ.

ಕುಮಾರಸ್ವಾಮಿ ಅವರ ತಲೆಗೆ ಸುತ್ತಿಕೊಂಡಿರುವ ಮಠದಹಳ್ಳಿ ಡಿನೋಟಿಫಿಕೇಶನ್ ಪ್ರಕರಣ,ಜಂತಕಲ್ ಮೈನಿಂಗ್ ಹಗರಣ, ಸಿದ್ದರಾಮಯ್ಯ ಅವರು ತಮ್ಮ ಮೇಲಿರುವ ರೀಡೂ ಹಗರಣ,ಡಿ ಕೆ ಶಿವಕುಮಾರ್ ರವರ ಮೇಲಿರುವ ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ಮುಕ್ತಾಯಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುತ್ತಿವೆ.

ಇದೆಲ್ಲದರ ಪರಿಣಾಮ ಕರ್ನಾಟಕದಲ್ಲಿ ನಾಮ್‌ ಕೇ ವಾಸ್ತೆಗೆ ಮಾತ್ರ ಬಿಜೆಪಿ ಅಧಿಕಾರ ನಡೆಸುತ್ತಿದ್ದು ರಾಜ್ಯ ಸರ್ಕಾರ ನಡೆಸುತ್ತಿರುವ ಎಲ್ಲಾ ಹಗರಣ, ಹಣ ಕಬಳಿಕೆ, ಜನದ್ರೋಹದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಎರಡೂ ಪಾಲುದಾರಿಕೆ ಹೊಂದಿವೆ. ಇಂದು ಕರ್ನಾಟಕದಲ್ಲಿ ಮೂರು ಪಕ್ಷಗಳು ಸೇರಿ ಹೊಂದಾಣಿಕೆಯಿಂದ ನಡೆಸುತ್ತಿರುವ ಭ್ರಷ್ಟಾಚಾರಿಗಳ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಆರೋಪಿಸಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?