Vijayapatha – ವಿಜಯಪಥ
Friday, November 1, 2024
CrimeNEWSನಮ್ಮರಾಜ್ಯರಾಜಕೀಯ

ಅಕ್ರಮ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಿ: ಆಮ್ ಆದ್ಮಿ ಪಕ್ಷದ ನಾಗಣ್ಣ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯಾದ್ಯಂತ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಆಗ್ರಹಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಶನಿವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ, ಕರ್ನಾಟಕದ ಪ್ರತಿ ಜಿಲ್ಲೆಯಲ್ಲೂ ನೂರಾರು ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಸ್ಥಳೀಯ ಶಾಸಕರು, ಪ್ರಭಾವಿಗಳೇ ಇದರ ರುವಾರಿಗಳು. ಇವರಿಂದಲೇ ದುರ್ಘಟನೆಗಳು ನಡೆಯುತ್ತಿದ್ದು, ಅಮಾಯಕರ ಪ್ರಾಣಕ್ಕೆ ಬೆಲೆಯೆ ಇಲ್ಲದಂತಾಗಿದೆ. ಈ ಕೂಡಲೇ ಸರ್ಕಾರ ಇಂತಹ ಅಕ್ರಮ ಕಲ್ಲು ಗಣಿಗಾರಿಕೆಗಳನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮುಖ್ಯಮಂತ್ರಿ ಮತ್ತು ಪ್ರಭಾವಿ ಸಚಿವರ ಜಿಲ್ಲೆಯಲ್ಲಿ ಡೈನಮೈಟ್ ಸಿಡಿದು ನಡೆದಿರುವ ಘೋರ ಘಟನೆ ವಿಷಾದನೀಯ. ಪಶ್ಚಿಮ ಘಟ್ಟಗಳ ಸೆರಗಿನಲ್ಲಿ ಇಂತಹ ಅಕ್ರಮ ಗಣಿಗಾರಿಕೆ ತೀರ ಅಪಾಯಕಾರಿ ಎಂದು ಅನೇಕ ವರದಿಗಳನ್ನು ಸರ್ಕಾರಕ್ಕೆ ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದ ಸರ್ಕಾರ ಪ್ರಭಾವಿಗಳ ಜತೆ ಕೈಜೋಡಿಸಿ ಹಫ್ತಾ ವಸೂಲಿಗೆ ನಿಂತಿದೆ ಎಂದು ಕಿಡಿಕಾರಿದರು.

ಅಕ್ರಮ ಗಣಿಗಾರಿಕೆ ವಿರುದ್ದ ನಾಗರಿಕರು, ಗ್ರಾಮಸ್ಥರು ಶಿವಮೊಗ್ಗ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಲೇ ಇದ್ದರು. ಪ್ರತಿಭಟನೆಗೆ ಮಣಿದ ಅಧಿಕಾರಿಗಳು ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರಿಗೆ ನೋಟಿಸ್ ಜಾರಿ ಮಾಡಿದ್ದರು. ಆಗ ಸಚಿವ ಈಶ್ವರಪ್ಪ ಅವರು ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ನೋಟಿಸ್ ವಾಪಸ್‌ ಪಡೆಯುವಂತೆ ಮಾಡಿದ್ದರು.

ಇಡೀ ರಾಜ್ಯದ ಎಲ್ಲಾ ಭಾಗಗಳಲ್ಲೂ ಸೇರಿ ಅನೇಕ ಸೂಕ್ಷ್ಮ ಪ್ರದೇಶಗಳಲ್ಲಿ ನಿಯಮ ಮೀರಿ ಅತಿ ಆಳದವರೆಗೂ ಕಾನೂನುಬಾಹಿರವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ. ಇದಕ್ಕೆ ಸ್ಥಳೀಯ ಪ್ರತಿನಿಧಿಗಳ ಕುಮ್ಮಕ್ಕೂ ಇದೆ, ಇದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರಾಜಸ್ವ ಧನ ನಷ್ಟವಾಗುತ್ತಿದೆ ಎಂದರು.

ಸರ್ಕಾರವನ್ನು ನಂಬಿಕೊಂಡರೆ ಸೂಕ್ತ ತನಿಖೆ ನಡೆಸುತ್ತದೆ ಎನ್ನುವ ನಂಬಿಕೆ ಇಲ್ಲ ಆದ ಕಾರಣ ಹೈಕೋರ್ಟ್‌ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಹೇಳಿದರು.

ಅಕ್ರಮವಾಗಿ ನಡೆಯುತ್ತಿರುವ ಎಲ್ಲಾ ಗಣಿಗಾರಿಕೆಗಳನ್ನೂ ಈ ಕೂಡಲೇ ಸ್ಥಗಿತಗೊಳಿಸಬೇಕು ಮತ್ತು ಅಕ್ರಮ ಗಣಿಗಾರಿಕೆಗೆ ಕಾರಣಕರ್ತರಾದ ಸರ್ಕಾರಿ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಶಾಸಕರಿಗೆ ಸರ್ಕಾರ ಬಿಸಿ ಮುಟ್ಟಿಸಬೇಕು ಎಂದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ