CrimeNEWSನಮ್ಮರಾಜ್ಯ

ರಾಜ್ಯದ 14ಕಡೆ ಎಸಿಬಿ ದಾಳಿ, ನಾಲ್ವರು ಅಧಿಕಾರಿಗಳಿಗೆ ಸೇರಿದ ಮಹತ್ವದ ದಾಖಲೆಗಳ ವಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಡಿ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಎಲ್‌.ಸತೀಶ್‌ ಕುಮಾರ್‌ ಸೇರಿ ರಾಜ್ಯದ ನಾಲ್ವರು ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬುಧವಾರ ಬೆಳಗ್ಗೆ ರಾಜ್ಯದ ವಿವಿಧ 14 ಸ್ಥಳಗಳಲ್ಲಿ ಏಕ ಕಾಲಕ್ಕೆ ದಾಳಿ ದಾಳಿ ನಡೆಸಿದ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

 ಎಲ್.ಸತೀಶ್ ಕುಮಾರ್
ಇವರ ಮೈಸೂರು ನಗರದ ಟಿ.ಕೆ.ಲೇಔಟ್‌ನ ವಾಸದ ಮನೆ, ಬೆಂಗಳೂರಿನ ಡಾಲರ್ಸ್ ಕಾಲೋನಿಯ ಬಾಡಿಗೆ ಮನೆ, ಅವರು ಕರ್ತವ್ಯ ಕಾರ್ಯನಿರ್ವಹಿಸುತ್ತಿರುವ ಗಾಂಧಿನಗರದ ವಾಣಿಜ್ಯ ತೆರಿಗೆ ಕಚೇರಿ ಮೇಲೂ ದಾಳಿ ಮಾಡಿದ್ದಾರೆ.

ವಲಯ ಅರಣ್ಯಾಧಿಕಾರಿ ಎನ್.ರಾಮಕೃಷ್ಣ
ಇನ್ನು, ಕೋಲಾರದ ಶ್ರೀನಿವಾಸ‍ಪುರ ವಲಯದ ಅರಣ್ಯಾಧಿಕಾರಿ ಎನ್‌.ರಾಮಕೃಷ್ಣ ಅವರ ವಿಜಯನಗರದಲ್ಲಿನ ನಿವಾಸ, ಬೆಂಗಳೂರಿನ ವಾಸದ ಮನೆ ಹಾಗೂ ಕಾರ್ಯನಿರ್ವಹಿಸುತ್ತಿರುವ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಗೋಪಶೆಟ್ಟಿ ಮಲ್ಲಿಕಾರ್ಜುನ
ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಇಂಜಿನಿಯರ್‌ ಗೋಪಶೆಟ್ಟಿ ಮಲ್ಲಿಕಾರ್ಜುನ ಅವರ ಪತ್ನಿ ಹೆಸರಿನ ಪೆಟ್ರೋಲ್ ಬಂಕ್ ಹಾಗೂ ರಾಯಚೂರು-ಲಿಂಗಸೂರು ರಾಜ್ಯ ಹೆದ್ದಾರಿ-20ರಲ್ಲಿರುವ ನಾಗಭೂಷಣ್ ಟ್ರ್ಯಾಕ್ಟರ್ ಶೋ ರೂಂ ಮತ್ತು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ರಾಯಚೂರಿನ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ರಾಘಪ್ಪ ಲಾಲಪ್ಪ ಲಮಾಣಿ
ಕೃಷ್ಣಭಾಗ್ಯ ಜಲ ನಿಗಮದ ಸಹಾಯಕ ಇಂಜಿನಿಯರ್‌ ರಾಘಪ್ಪ ಲಾಲಪ್ಪ ಲಮಾಣಿ ಅವರ ಬಾಗಲಕೋಟೆಯ ಮನೆ ಮತ್ತು ಕಚೇರಿಗಳಲ್ಲೂ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದರು.

ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ವಿವಿಧ ತಂಡಗಳಿಂದ ಈ ಆರೋಪಿತ ಸರ್ಕಾರಿ ನೌಕರರ ವಿರುದ್ಧ ದಾಳಿ ಮುಂದುವರಿದಿದ್ದು, ಇವರು ಹೊಂದಿರುವ ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಮುಂದುವರಿದಿದೆ ಎಂದು  ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ