ಬೆಂಗಳೂರು: ಕೊರೊನಾ ಸೋಂಕಿನಿಂದ ಜನರ ಬದುಕು ಅತಂತ್ರವಾಗಿದ್ದು, ಸರ್ಕಾರದ ಖಜಾನೆಯೂ ಖಾಲಿಯಾಗಿ ಆಡಳಿತ ನಡೆಸಲು ದುಸ್ತರವಾಗಿರುವ ಈ ಸಮಯದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ.
ಈ ಮೂಲಕ ಸಮಾಜ ಸೇವೆಗೆ ಪಣತೊಟ್ಟಿನಿಂತಿರುವ ಸುದೀಪ್ ಅವರ ನಡೆ ಸಮಾಜದ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಶಾಲೆಗಳನ್ನು ನಡೆಸುತ್ತಿರುವ ಉಳ್ಳವರು ಬೇರೆಬೇಡ ತಮ್ಮ ಶಾಲೆಯಲ್ಲಿ ಹಲವಾರು ವರ್ಷಗಳಿಂದ ದುಳಡಿಯುತ್ತಿರುವ ಶಿಕ್ಷಕರ ನೆರವಿಗೆ ಈ ರೀತಿ ಬಂದರೆ ನಿಜಕ್ಕೂ ಅದೇ ಪುಣ್ಯದ ಕಾರ್ಯವಾಗಲಿದೆ.
ಇನ್ನು ಸುದೀಪ್ ಅವರ ಸಮಾಜ ಸೇವಾ ಕಾರ್ಯ ಅತ್ಯಂತ ಶ್ಲಾಘನೀಯ. ಸರ್ಕಾರದ ಜತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವಿಟರ್ ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು pic.twitter.com/LpAVMLwQ6g
— Dr Sudhakar K (@mla_sudhakar) August 10, 2020