Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಮುದಿ ಹಸು, ಗೊಡ್ಡು ಹಸುನಾ ಆರ್‌ಎಸ್‌ಎಸ್‌ನವರ ಮನೆಗೆ ಹೊಡೆಯೋದಾ: ಸಿದ್ದರಾಮಯ್ಯ

ಹಿಂದೂ, ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದವರು ಬಹಳ ಜನ ಇದ್ದಾರೆ ಎಂದ ಸಿದ್ದು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುದಿ ಹಸು, ಗೊಡ್ಡು ಹಸುನಾ ಏನು ಮಾಡೋದು? ಆರ್‍ಎಸ್‍ಎಸ್‍ನವರ ಮನೆಗೆ ಹೊಡೆಯೋದಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ಸರ್ಕಾರ ಚಿಂತನೆ ಹಿನ್ನೆಲೆ ಇಂದು ಮುಸ್ಲಿಂ ಮುಖಂಡರ ನಿಯೋಗಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತ್ತು. ಈ ವೇಳೆ ಮಾತಾಡಿದ ಅವರು, ಲವ್ ಜಿಹಾದ್ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಹಾಲು, ತುಪ್ಪ ಎಲ್ಲ ಇವರು ತಗೊಂಡು ತಿಂತಾರೆ. ಪಾಪ ಅವರು ಸಗಣಿ ಇಟ್ಕೊಂಡು ಏನ್ ಮಾಡೋದು. ನಾನು ತಿಪ್ಪೆಗೆ ಸಗಣಿ ಹೊತ್ತಿದ್ದೇನೆ. ಇವರು ಹೊತ್ತಿದ್ದಾರಾ? ನಮ್ಮ ದೇಶದಲ್ಲಿ ಹುಚ್ಚರ ಸಂತೆಯಲ್ಲಿ ಉಂಡೋನೆ ಜಾಣ ಅನ್ನೋ ಹಾಗಾಗಿದೆ. ಗೋಹತ್ಯೆ ನಿಷೇಧ ಮಾಡಿದ್ರೆ ಸಾಕಷ್ಟು ಬಡವರಿಗೆ ತೊಂದರೆ ಆಗುತ್ತದೆ ಎಂದು ತಿಳಿ ಹೇಳಿದರು.

ಇನ್ನು ಕೇಂದ್ರ ವಿವೇಕ ಇಲ್ಲದೆ ಕಾನೂನು ತರುತ್ತಿದೆ. ಮದುವೆ ಅವರವರ ವೈಯಕ್ತಿಕ ಆಯ್ಕೆ. ಈ ದೇಶದಲ್ಲಿ ಮುಸ್ಮಿಂ ಮೊಘಲರು 600 ವರ್ಷಗಳಿಂದ ಇದ್ದಾರೆ. ಎಷ್ಟೋ ಸಂಬಂಧಗಳು ಬೆಳೆದು ಬಿಟ್ಟಿದ್ದಾವೆ ಎಂದ ಅವರು, ಹಿಂದೂ- ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದವರು ಬಹಳ ಜನ ಇದ್ದಾರೆ. ನನ್ನ ಪ್ರಕಾರ ಇದೊಂದು ಮೂರ್ಖತನ. ಇದನ್ನು ಸಂವಿಧಾನ ಅನುಮತಿಸುವುದಿಲ್ಲ. ಕೋರ್ಟಿಗೆ ಹೋದರೆ ವಜಾ ಆಗುತ್ತದೆ ಎಂದರು. ಶಾಸಕರಾದ ರಿಜ್ವಾನ್ ಅರ್ಷದ್  ಮತ್ತಿತರರು ಇದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ