NEWSಕೃಷಿನಮ್ಮರಾಜ್ಯ

ಚುರುಕುಗೊಂಡ ಮುಂಗಾರು: ನಾಲ್ಕುದಿನ ರಾಜ್ಯದ ವಿವಿಧೆಡೆ ಭಾರಿ ಮಳೆ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು ಇನ್ನೂ ನಾಲ್ಕು ದಿನ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಮುಂಗಾರು ಮಳೆ ಹೊತ್ತುತಂದಿರುವ ನೈಋುತ್ಯ ಮಾನ್ಸೂನ್ ಮಾರುತಗಳು ಮೇ 31ರಂದು ಕೇರಳ ಪ್ರವೇಶಿಸಿದ್ದು, ಇತ್ತೀಚೆಗೆ ಸೃಷ್ಟಿಯಾದ 2 ಚಂಡಮಾರುತಗಳೇ ಮಾನ್ಸೂನ್ ಮಾರುತಗಳ ಈ ಚಲನೆಗೆ ಕಾರಣ ಎನ್ನಲಾಗಿದೆ.

ಕಳೆದ ವಾರವಷ್ಟೇ ತೌಕ್ತೆ ಚಂಡಮಾರುತಕ್ಕೆ ಸಾಕಷ್ಟು ರಾಜ್ಯಗಳು ನಲುಗಿ ಹೋಗಿದ್ದವು. ಅದರ ಬೆನ್ನಲ್ಲೇ ಯಾಸ್ ಚಂಡಮಾರುತ ಕೂಡ ಅಪ್ಪಳಿಸಿತ್ತು. ಹೀಗಾಗಿ ಮಾನ್ಸೂನ್ ಮಾರುತಗಳ ಚಲನೆಯಲ್ಲಿ ಪರಿಣಾಮ ಬೀರಿದೆ.

ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಇನ್ನು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಗುರುವಾರದ ವರೆಗೆ ಭಾರಿ ಮಳೆಯಾಗಲಿದೆ ಹವಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಸಮುದ್ರ ಮಟ್ಟದಲ್ಲಿ ಗಂಟೆಗೆ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ