NEWSಕೃಷಿನಮ್ಮಜಿಲ್ಲೆ

ಮೈದುಂಬಿ ನಿಂತ ಕೃಷ್ಣೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದರು. ಇಂದು ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿದ ಸಿಎಂ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು.

ಮೈದುಂಬಿ ನಿಂತ ಕೃಷ್ಣೆಯ ಜಲನಿಧಿಗೆ, ಜಿಲ್ಲೆಯ ಆಲಮಟ್ಟಿ ಅಣೆಕಟ್ಟೆಯಲ್ಲಿ ಮುಖ್ಯಮಂತ್ರಿ ಬಾಗೀನ ಅರ್ಪಿಸಿದ ಸಿಎಂ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆ ಈ ಭಾಗದ ಜನರ ಜೀವನವನ್ನು ಸಮೃದ್ಧಿಗೊಳಿಸಲಿ ಎಂದು ಪ್ರಾರ್ಥಿಸಿದರು.

ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಲಮಟ್ಟಿ ಗೆ ಆಗಮಿಸಿದರು. ಸಿಎಂ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಮೂರು ಅರ್ಚಕರು ಗಂಗಾಮಾತೆಗೆ ಪೂಜೆ ನೇರವೇರಿಸಿದರು. ನಂತರ ನದಿಯ ಬಳಿ ಸೀರೆ, ಕುಪ್ಪಸ, ಹಣ್ಣು, ಹೂವು ಹಾಗೂ ಉಡಿ ತುಂಬುವ ಸಾಮಗ್ರಿಗಳನ್ನೊಳಗೊಂಡ ಬಾಗಿನವನ್ನು ಕೃಷ್ಣೆಯ ಮಡಿಲಿಗೆ ಸಮರ್ಪಿಸಿದರು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವರಾದ ಮುರುಗೇಶ್‌ ನಿರಾಣಿ, ಊಮೇಶ್‌ ಕತ್ತಿ, ಸಿ.ಸಿ.ಪಾಟೀಲ್‌, ಸಂಸದ ಗದ್ದಿಗೌಡರ್‌, ಜಿಲ್ಲೆಯ ಶಾಸಕರು, ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...