NEWSಕೃಷಿನಮ್ಮಜಿಲ್ಲೆ

ಕೊರೊನಾದಿಂದ ಗ್ರಾಮ ಸೀಲ್‍ಡೌನ್: ಬೆಳೆದ ಸೌತೆಕಾಯಿ ಮಣ್ಣು ಪಾಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಾಂಡವಪುರ (ಮಂಡ್ಯ): ಕೊರೊನಾದಿಂದ ಇಡೀ ಗ್ರಾಮ ಸೀಲ್‍ಡೌನ್ ಆಗಿದ್ದು, ರೈತರು ಸೇರಿದಂತೆ ಯಾರು ಮನೆಯಿಂದ ಹೊರಬರಲು ಆಗದ ಕಾರಣ ಬೆಳೆದ ಫಸಲು ಮಣ್ಣುಪಾಲಾಗುತ್ತಿದೆ.

ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಇದರಿಂದ ಗ್ರಾಮವನ್ನು ಸೂಲ್‌ಡೌನ್‌ ಮಾಡಲಾಗಿದೆ. ಹೀಗಾಗಿ ಯಾರು ಮನೆಯಿಂದ ಹೊರಬರದಂತೆ ಸ್ಥಳೀಯ ಆಡಳಿತ ನಿಗಾ ವಹಿಸಿದೆ. ಇದರಿಂದ ಗ್ರಾಮದ ರೈತರ ಬೆಳೆದಿರುವ ಸುನಾಮಿ ಸೌತೆಕಾಯಿ ಮಣ್ಣು ಪಾಲಾಗಿದೆ.

ಕ್ಯಾತನಹಳ್ಳಿ ಗ್ರಾಮದಲ್ಲಿ 100ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಪಾಸಿಟಿವ್‌ ಇರುವ ಹಿನ್ನೆಲೆಯಲ್ಲಿ ಇಡೀ ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದೆ. ಇದೇ ಗ್ರಾಮ ರೈತ ಕುಮಾರ್ ಸಾವಿರಾರು ರೂಪಾಯಿ ಬಂಡವಾಳ ಹಾಕಿ ಸುನಾಮಿ ಸೌತೆಕಾಯಿಯನ್ನು ಬೆಳೆದಿದ್ದಾರೆ. ಫಸಲು ಕೂಡ ಸಮೃದ್ಧಿಯಾಗಿ ಬಂದಿದೆ. ಆದರೆ, ಬೆಳೆಯನ್ನು ಕಟಾವು ಮಾಡಿಸಲಾಗದೇ ಬೆಳೆದ ಬೆಳೆಯಲ್ಲಾ ಮಣ್ಣು ಪಾಲಾಗುತ್ತಿದೆ.

ಲಕ್ಷಾಂತರ ರೂಪಾಯಿ ಲಾಭದ ನಿರೀಕ್ಷೆಯಲ್ಲಿ ಇದ್ದ ಕುಮಾರ್ ಇದೀಗ ಕೊರೊನಾದ ಆರ್ಭಟಕ್ಕೆ ಅಕ್ಷರಶಃ ನಲುಗಿ ಹೋಗಿದ್ದಾರೆ. ತಾವು ಹಾಕಿದ ಬಂಡವಾಳವು ಕೈ ಸೇರಲಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ಸರ್ಕಾರ ನನ್ನ ನೆರವಿಗೆ ಬರಬೇಕೆಂದು ಕುಮಾರ್ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ