ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ಹಲವೆಡೆ ಜೂನ್ ಎರಡವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಈ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ನಿರಂತರವಾಗಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.
ಯಾಸ್ ಚಂಡ ಮಾರುತದಿಂದ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ಪ್ರದೇಶದಲ್ಲಿ ಮಾನ್ಸೂನ್ ಗಾಳಿಯ ತೀವ್ರತೆ ಹೆಚ್ಚಾಗಿದೆ. ಮುಂದಿನ ವಾರ ಕೇರಳದಲ್ಲಿ ಮಾನ್ಸೂನ್ ಪ್ರವೇಶಿಸಲಿದ್ದು, ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇದಕ್ಕೂ ಮೊದಲು ಅಂದರೆ ಮೇ 29 ಹಾಗೂ 30ರಂದು ಹಲವೆಡೆ ಮೋಡಕವಿದ ವಾತಾವರಣವಿರಲಿದ್ದು, ಒಣಹವೆ ಮುಂದುವರಿಯಲಿದೆ, ಮೇ 31 ರಿಂದ ಮೂರುದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ನೈಋತ್ಯ ಮಾನ್ಸೂನ್ ಮಾರುತಗಳು ನೈಋತ್ಯ ಮತ್ತು ಪೂರ್ವಕೇಂದ್ರದ ಬಂಗಾಳ ಕೊಲ್ಲಿಯತ್ತ ಸಾಗಿದ್ದು, ಮೇ 31ರ ಹೊತ್ತಿಗೆ ಕೇರಳ ಪ್ರವೇಶ ಮಾಡಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಮುಂಗಾರು ಮಳೆ ಹೊತ್ತುತರುವ ನೈಋುತ್ಯ ಮಾನ್ಸೂನ್ ಮಾರುತಗಳು ಮೇ 31ರಂದು ಕೇರಳ ಪ್ರವೇಶಿಸಲಿದೆ. ಇತ್ತೀಚೆಗೆ ಸೃಷ್ಟಿಯಾದ 2 ಚಂಡಮಾರುತಗಳೇ ಮಾನ್ಸೂನ್ ಮಾರುತಗಳ ಈ ಚಲನೆಗೆ ಕಾರಣ ಎನ್ನಲಾಗಿದೆ.
ಕಳೆದ ವಾರವಷ್ಟೇ ತೌಕ್ತೆ ಚಂಡಮಾರುತಕ್ಕೆ ಸಾಕಷ್ಟು ರಾಜ್ಯಗಳು ನಲುಗಿ ಹೋಗಿದ್ದವು. ಇದೀಗ ಅದರ ಬೆನ್ನಲ್ಲೇ ಯಾಸ್ ಚಂಡಮಾರುತ ಕೂಡ ಅಪ್ಪಳಿಸಿದೆ. ಹೀಗಾಗಿ ಮಾನ್ಸೂನ್ ಮಾರುತಗಳ ಚಲನೆಯಲ್ಲಿ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.