NEWSಕೃಷಿನಮ್ಮಜಿಲ್ಲೆ

ಬೇಸಿಗೆಯಲ್ಲಿ ಕೃಷಿ, ಕುಡಿಯಲು ನೀರಿನ ಸಮಸ್ಯೆ ತಲೆದೋರದಂತೆ ನಿಗವಹಿಸಿ : ಪಿ.ರವಿಕುಮಾರ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕಲಬುರಗಿ: ಪ್ರಸಕ್ತ ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ ಸೂಚನೆ ನೀಡಿದರು.

ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಸೇರಿದಂತೆ ಜಿಲ್ಲೆಯ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲಿಸಿ ಮಾತನಾಡಿದರು.

ಕಳೆದ ವರ್ಷ ಹೆಚ್ಚಿನ ಮಳೆಯಾಗಿದ್ದರಿಂದ ಅಂತರ್ಜಲ ವೃದ್ಧಿಯಾಗಿದ್ದು, ಅಷ್ಟೊಂದು ನೀರಿನ ಹಾಹಾಕಾರ ಆಗುವುದಿಲ್ಲ ಎಂದು ಅಂದಾಜಿಸಲಾಗಿದೆ. ಆದರೂ ಮುಂಜಾಗ್ರತವಾಗಿ ನೀರಿನ ಸಮಸ್ಯೆ ಕಾಣಬಹುದಾದ ಗ್ರಮಗಳ ಪಟ್ಟಿ ಸಿದ್ಧಪಡಿಸಿಕೊಂಡು ಪರಿಸ್ಥಿತಿಗೆ ತಕ್ಕಂತೆ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಅಫಜಲಪುರ ತಾಲೂಕಿನ ಅಳ್ಳಗಿಯಲ್ಲಿ ಖಾಯಂ ವಿದ್ಯುತ್ ಸಂಪರ್ಕವಿಲ್ಲದ ಕಾರಣ ಯೋಜನೆ ಅನಷ್ಠಾನವಾಗಿಲ್ಲ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಸಭೆಯ ಗಮನಕ್ಕೆ ತಂದಾಗ, ಕೂಡಲೆ ವಿದ್ಯುತ್ ವ್ಯವಸ್ಥೆ ಕಲ್ಪಿಸಿ ಯೋಜನೆ ಕಾರ್ಯರೂಪಕ್ಕೆ ತರುವಂತೆ ಜೆಸ್ಕಾಂ ಎಂ.ಡಿ. ರಾಹುಲ ಪಾಂಡ್ವೆ ಅವರಿಗೆ ಮುಖ್ಯ ಕಾರ್ಯದರ್ಶಿಗಳು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಕಾಣಬಹುದಾದ 156 ಗ್ರಾಮಗಳನ್ನು ಈಗಾಗಲೆ ಗುರುತಿಸಿದೆ. 2020-21ನೇ ಸಾಲಿನಲ್ಲಿ ವಾಡಿಕೆಗಿಂತ ಶೇ.39ರಷ್ಟು ಹೆಚ್ಚು ಮಳೆಯಾಗಿದ್ದರಿಂದ ಅಂತರ್ಜಲಮಟ್ಟ ವೃದ್ಧಿಯಾಗಿದೆ. 50 ವಾರಕ್ಕಾಗುವಷ್ಟು ಮೇವು ದಾಸ್ತಾನು ಜಿಲ್ಲೆಯಲ್ಲಿದ್ದು, ಮೇವಿನ ಕೊರತೆಯಿಲ್ಲ ಎಂದರು.

ಪ್ರತಿ ರೈತನ ಸರ್ವೇವಾರು ಪ್ಲಾಟುಗಳ ತಂತ್ರಾಂಶ ದಾಖಲೀಕರಣಕ್ಕೆ “ಫ್ರೂಟ್ಸ್” ಎಂಬ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದ್ದು, ಇದು ರೈತನ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ಸಹಾಯವಾಗಲಿದೆ. ಜಿಲ್ಲೆಯಲ್ಲಿ ಗುರುತಿಸಿರುವ 680227 ಪ್ಲಾಟ್‍ಗಳ ಪೈಕಿ 52356 ಡಾಟಾ ಇದೂವರೆಗೆ ದಾಖಲಿಸಿದ್ದು, ಉಳಿದ ಪ್ಲಾಟುಗಳನ್ನು ದಾಖಲೀಕರಣ 10 ದಿನದೊಳಗೆ ಪೂರ್ಣಗೊಳಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಡಾ.ರತೇಂದ್ರನಾಥ ಸುಗೂರು ಅವರಿಗೆ ಮುಖ್ಯ ಕಾರ್ಯದರ್ಶಿಗಳು ಸೂಚಿಸಿದರು.

ಪಿಎಂ.ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಯೋಜನೆಯಡಿ ಆನ್‍ಲೈನ್ ಮೂಲಕ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ ಮಾಡಿ ಸಾಲ ಮಂಜೂರಾತಿಗೆ ಕ್ರಮ ವಹಿಸಬೇಕು. ಇ-ಜನ್ಮ ತಂತ್ರಾಂಶದಲ್ಲಿ ಬಾಕಿಯಿರುವ ಅರ್ಜಿಗಳನ್ನು ಕೂಡಲೆ ವಿಲೇವಾರಿ ಮಾಡುವುದಲ್ಲದೆ ನಿಧನ ಹೊಂದಿದವರ ಆಧಾರ ಕಾರ್ಡ್ ಅಪಲೋಡ್ ಮಾಡಿದಲ್ಲಿ ಇದರಲ್ಲಿ ಕೆಲವರ ಖಾತೆಗೆ ಅನಗತ್ಯವಾಗಿ ಸರ್ಕಾರದಿಂದ ಹೋಗುವ ಪಿಂಚಣಿ ಹಣ ಉಳಿತಾಯ ಮಾಡಬಹುದಾಗಿದೆ.

ನೇಮಕಾತಿಗೆ ಸಂಬಂಧಿಸಿದಂತೆ ಸಿಂಧುತ್ವ ಪ್ರಮಾಣ ಪತ್ರ ನೀಡಲು ಇಂದಿನವರೆಗೆ ಜಿಲ್ಲೆಯಲ್ಲಿ 371 ಅರ್ಜಿ ಬಾಕಿಯಿದ್ದು, ಇದು ಸಹ ಕಾಲಾವಧಿಯಲ್ಲಿಯೇ ವಿಲೇವಾರಿ ಮಾಡುವಂತೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಅನುದಾನ ಕೊರತೆಯಾಗಲ್ಲ
ಕಳೆದ ವರ್ಷ ಕೋವಿಡ್ ಸೋಂಕು ಇಡೀ ವರ್ಷ ಕಾಡಿದ್ದರಿಂದ ಅನುದಾನದ ಸಮಸ್ಯೆಯಾಗಿದ್ದು, 2021-22ನೇ ಸಾಲಿನಲ್ಲಿ ಯಾವುದೇ ಅನುದಾನದ ಕೊರತೆಯಾಗುವುದಿಲ್ಲ. 2020-22ನೇ ಸಾಲಿಗೆ ಸಂಬಂಧಿಸಿದಂತೆ ಎಲ್ಲಾ ಕ್ರಿಯಾ ಯೋಜನೆಗಲನ್ನು ಬೇಗ ಸಿದ್ಧಪಡಿಸಿ ಮಂಜೂರಾತಿಗೆ ಕಳುಹಿಸಬೇಕು ಎಂದು ಅಧಿಕಾರಿಗಳಿಗೆ ಮುಕ್ಯ ಕಾರ್ಯದರ್ಶಿ ಪಿ.ರವಿಕುಮಾರ ನಿರ್ದೇಶನ ನಿಡಿದರು.

ಪ್ರಾದೇಶಿಕ ಆಯುಕ್ತರು ಮತ್ತು ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ ಸುಧಾಕರ ಲೋಖಂಡೆ ಸೇರಿದಂತೆ ತಾಲೂಕಿನ ತಹಸೀಲ್ದಾರರು, ಜಿಲ್ಲಾ ಮಟ್ಟದ ಇತರೆ ಅಧಿಕಾರಿಗಳು ಇದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ