NEWSಕೃಷಿನಮ್ಮಜಿಲ್ಲೆ

ಅಧಿಕ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿದರೆ ಕಾನೂನುಕ್ರಮ: ಎಚ್ಚರಿಕೆ ನೀಡಿದ ಶಿವಕುಮಾರ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ರಸಗೊಬ್ಬರ ಮಾರಾಟ ಮಾಡಲು ಪರಾವನಗಿ ಹೊಂದಿರುವ ಖಾಸಗಿ ಮಾರಾಟಗಾಗರರು ರಸಗೊಬ್ಬರಗಳನ್ನು ಚೀಲದ ಮೇಲೆ ಮುದ್ರಿತ ಮಾರಾಟ ದರದಲ್ಲೇ ಮಾರಾಟ ಮಾಡಬೇಕು ತಪ್ಪಿದ್ದಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ                                                               ಎ.ಪಿ.ಶಿವಕುಮಾರ್ ತಿಳಿಸಿದ್ದಾರೆ.

ಪ್ರಸಕ್ತ ವರ್ಷದಲ್ಲಿ ಅಂತಾರಾಷ್ಟೀಯ ಮಾರುಕಟ್ಟೆಯಲ್ಲಿ ಪಾಸ್ಫಾರಿಕ್ ಆಸಿಡ್ ದರವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಸಗೊಬ್ಬರಗಳ ಮಾರಾಟ ದರವು ಕಳೆದ ವರ್ಷಕ್ಕಿಂತ ಹೆಚ್ಚಾಗಿದೆ. ರಸಗೊಬ್ಬರ ಮಾರಾಟ ಪರವಾನಗಿ ಹೊಂದಿರುವ ಖಾಸಗಿ ರಸಗೊಬ್ಬರ ಮಾರಾಟಗಾರರು ಹಾಗು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಈಗಾಗಲೇ ದಾಸ್ತಾನು ಮಾಡಲಾಗಿರುವ ಹೊಸ ದಾಸ್ತಾನು ಪಡೆದಿರುವ ರಸಗೊಬ್ಬರ ಮಾರಾಟಗಾರರು ಹೊಸ ದರದಲ್ಲಿ ಮಾರಾಟ ಮಾಡಬಹುದಾಗಿದೆ. ಆದರೆ ಚೀಲದ ಮೇಲೆ ಮುದ್ರಿತ ಮಾರಾಟ ದರಕ್ಕಿಂತ ಹೆಚ್ಚಿನ ಬೆಲೆಯನ್ನು ಪಡೆಯುವಂತಿಲ್ಲ.

ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟವರ ಮೇಲೆ ಕಟ್ಟುನಿಟ್ಟಿನ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು. ರಸಗೊಬ್ಬರ ಖರೀದಿಗೆ ಬರುವ ರೈತರಿಗೆ ಮಾರಾಟಗಾರರು ಹಾಗೂ ಸಹಕಾರ ಸಂಘಗಳು ಮಾಸ್ಕ್ ಮತ್ತು ಸ್ಯಾನೀಟೈಸರ್ ಗಳನ್ನು ನೀಡುವ ಮೂಲಕ ಕೋವಿಡ್-19 ಹತೋಟಿಗೆ ಶ್ರಮಿಸುವಂತೆ ಸೂಚಿಸಿದ್ದಾರೆ.

ಮೇ ನಲ್ಲಿ ಬತ್ತನೆಬೀಜ ವಿತರಣೆ
ಈಗಾಗಲೇ ತಾಲೂಕಿನಲ್ಲಿ ಪೂರ್ವ ಮುಂಗಾರು ಆರಂಭವಾಗಿ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.  ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಸುಮಾರು 25 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತಂಬಾಕು, 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಹಾಗೂ 800 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ದ್ವಿದಳ ದಾನ್ಯಗಳನ್ನು ಬೆಳೆಯುವ ಸಂಭವವಿದ್ದು, ಅಗತ್ಯತೆಗೆ ತಕ್ಕಂತೆ ಮೇ ಮೊದಲ ವಾರದಲ್ಲಿ ಮುಸುಕಿನ ಜೋಳ, ಬಿತ್ತನೆಬೀಜ, ಕೀಟನಾಶಕ ವಿತರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ
ಪ್ರಸ್ತುತ ರಾಜ್ಯಾದ್ಯಂತ ಕೋವಿಡ್ 2ನೇ ಅಲೆ ಆರಂಭವಾಗಿದ್ದು  ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಕೃಷಿ ಪರಿಕರಗಳ ಖರೀದಿಗಾಗಿ ನಗರ ಪ್ರದೇಶಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ರಸಗೊಬ್ಬರ ಮಾರಾಟಗಾರರು ಹಾಗೂ ಸಹಕಾರ ಸಂಘಗಳಲ್ಲಿ ರೈತರಿಗೆ ಕಡ್ಡಾಯವಾಗಿ ಮಾಸ್ಕ ಧರಿಸುವಂತೆ ಹಾಗೂ ಮಾರಾಟ ಮಳಿಗೆಯಲ್ಲಿ ಕೈ ತೊಳೆಯಲು ಮತ್ತು ಸ್ಯಾನಿಟೈಸರ್ ಬಳಕೆಗೆ ಲಭ್ಯವಿರುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಮಾಹಿತಿ ನೀಡಲು ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ