NEWSಕೃಷಿನಮ್ಮಜಿಲ್ಲೆ

ಕರಡಿಲಕ್ಕನ ಕೆರೆ ಏತನೀರಾವರಿ ಘಟಕಕ್ಕೆ ಶಾಸಕ ಮಹದೇವ್ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ : ತಾಲೂಕಿನ ಚನ್ನಕೇಶವಪುರ ಗ್ರಾಮದಲ್ಲಿರುವ ಕರಡಿಲಕ್ಕನ ಕೆರೆ ಏತ ನೀರಾವರಿ ಯೋಜನೆ ವತಿಯಿಂದ ಕಾಲುವೆಗಳಿಗೆ ನೀರು ಬಿಡುವ ಕಾರ್ಯಕ್ರಮಕ್ಕೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವುದರಿಂದ ಕೆರೆಕಟ್ಟೆಗಳು ಭರ್ತಿಯಾಗುತ್ತಿರುವುದು ರೈತರ ಮುಗದಲ್ಲಿ ಆಶಾಭಾವನೆ ಮಾಡಿ ಕೃಷಿ ಚಟುವಟಿಕೆಯತ್ತ ಮುಖ ಮಾಡಿದ್ದಾರೆ ಎಂದರು.

ನೆರೆಯ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ನದಿ ಸೇರಿದಂತೆ ನದಿ ಪ್ರಾತ್ರದ ತಾಲೂಕಿನ ಅನೇಕ ಕೆರೆಕಟ್ಟೆಗಳು ತುಂಬಿ ಹರಿಯುತ್ತಿರುವುದರಿಂದ ರೈತರ ಜಮೀನಿನಲ್ಲಿ ಬೆಳೆ ಬೆಳೆಯಲು ನೀರು ಸರಬರಾಜು ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ. ಇದರಿಂದ ರೈತರ ವ್ಯವಸಾಯಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಅದೇ ರೀತಿ ಶೀಘ್ರದಲ್ಲಿ ತಾಲೂಕಿನಲ್ಲಿ 150 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಪೂರ್ಣಗೊಳ್ಳಲಿದ್ದು ಕಾಮಗಾರಿ ಮುಗಿದ ಕೂಡಲೇ ಮುಖ್ಯಮಂತ್ರಿಗಳನ್ನು ಆಹ್ವಾನಿಸಿ ಅವರಿಂದಲೇ ಚಾಲನೆ ನೀಡಲಾಗುವುದು ಎಂದರು.

ರೈತರರಿಗೆ ತೊಂದರೆಯಾದರೆ ಅಧಿಕಾರಿಗಳೆ ಹೊಣೆ
ಅಧಿಕಾರಿಗಳು ರೈತರ ಜಮೀನುಗಳಿಗೆ ಯಾವುದೇ ತೊಂದರೆಯಾಗದಂತೆ ಸಮರ್ಪಕವಾಗಿ ನೀರನ್ನು ಒದಗಿಸಬೇಕು. ರೈತರ ಕಷ್ಟ ಸುಖಗಳಿಗೆ ಸ್ಪಂದಿಸದೆ ತಾತ್ಸಾರ ಮಾಡಿದರೆ ಅಂತಹ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

ಯಾವುದೇ ಸಣ್ಣಪುಟ್ಟ ಸಮಸ್ಯೆಗಳಿದ್ದರೂ ಆದಷ್ಟು ಬೇಗನೆ ಬಗೆಹರಿಸಿಕೊಂಡು ರೈತರ ಜಮೀನಿಗೆ ನಿರಂತರವಾಗಿ ಅಗತ್ಯವಾದ ನೀರಿನ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ತಾ.ಪಂ.ಸಿ.ಆರ್.ಕೃಷ್ಣಕುಮಾರ್ ಕಾವೇರಿ ನೀರಾವರಿ ನಿಗಮದ ಎಇಇ ನವೀನ್, ಲೋಕೋಪಯೋಗಿ ಇಲಾಖೆಯ ಎಇಇ ಜಯಂತ್, ಜಿ.ಪಂ.ಎಇಇ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸಿದ್ದೇಗೌಡ, ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೆಶಕ ಸೋಮಯ್ಯ, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಣ್ಣಯ್ಯಶೆಟ್ಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಪಕ್ಷ ಸಂಘಟನೆ ಬಲಗೊಳಿಸಲು ವಾರಕ್ಕೊಮ್ಮೆ ಜಿಲ್ಲಾ ಪ್ರವಾಸ: ಮಾಜಿ ಸಿಎಂ ಬಿಎಸ್‌ವೈ

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ