NEWSಕೃಷಿದೇಶ-ವಿದೇಶ

ಅನಾಮಧೇಯ ಬಿತ್ತನೆ ಬೀಜದಿಂದ ಕೃಷಿ ಭೂಮಿ ನಾಶ : ಚೈನಾದ ಆ ಪೊಟ್ಟಣಗಳ ಸ್ವೀಕರಿಸದಿರಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕಲಬುರಗಿ: ಚೀನಾ ದೇಶವು ಅನೇಕ ದೇಶಗಳಿಗೆ ನಿಗೂಡ/ರಹಸ್ಯಮಯವಾಗಿ ಬೀತ್ತನೆ ಬೀಜಗಳು ರಫ್ತು ಮಾಡುತ್ತಿದ್ದು, ಕಲಬುರಗಿ ಜಿಲ್ಲೆಯ ರೈತರು ಇಂತಹ ಬಿತ್ತನೆ ಬೀಜದ ಪೊಟ್ಟಣಗಳು ತಮ್ಮ ಮನೆ ಬಾಗಿಲಿಗೆ ಬಂದಲ್ಲಿ ಅದನ್ನು ಸ್ವೀಕರಿಸದೇ ವಾಪಸ್ಸು ಕಳುಹಿಸಬೇಕು ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸೂಗೂರ ಮನವಿ ಮಾಡಿದ್ದಾರೆ.

ಒಂದು ವೇಳೆ ರೈತರು ಬಿತ್ತನೆ ಬೀಜವನ್ನು ಸ್ವೀಕರಿಸಿದ್ದಲ್ಲಿ ಅದನ್ನು ಪೊಟ್ಟಣ ಸಮೇತ ಸುಟ್ಟು ಹಾಕಬೇಕು ಇಲ್ಲವೇ ತಮ್ಮ ಸಮೀಪದ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ತಿಳಿಸಿದ್ದಾರೆ.

ಇಂತಹ ಅನಾಮಧೇಯ ಬಿತ್ತನೆ ಬೀಜದ ಪೊಟ್ಟಣಗಳು ರೈತರ ಮನೆ ಬಾಗಿಲಿಗೆ ಬಂದಾಗ ರೈತರು ಅದನ್ನು ಸ್ವೀಕರಿಸಿ ಬೀಜಗಳನ್ನು ಬಿತ್ತನೆ ಮಾಡಿದ್ದಲ್ಲಿ ಕೃಷಿ ಭೂಮಿಯು ಸಂಪೂರ್ಣ ನಾಶವಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಬೀಜಗಳ ಬಳಕೆಯಿಂದ ಕೃಷಿ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿ ಕ್ರಮೇಣ ಭೂಮಿಯು ಬಂಜರಾಗುವ ಸಾಧ್ಯತೆ ಇದೆ. ಆದ್ದರಿಂದ ಇಂತಹ ಬಿತ್ತನೆ ಬೀಜದ ಪೊಟ್ಟಣಗಳು ರೈತರು ಸ್ವೀಕರಿಸದೇ ವಾಪಸ್‌ ಕಳುಹಿಸಬೇಕು. ವಿವಿಧ ತಳಿಗಳ ಬಿತ್ತನೆ ಬೀಜದ ಈ ಪೊಟ್ಟಣಗಳನ್ನು ಯಾರು ಕಳುಹಿಸುತ್ತಾರೆ, ಇವು ಎಲ್ಲಿಂದ ಬರುತ್ತವೆ ಎಂಬ ವಿವರಗಳು ಇರುವುದಿಲ್ಲ. ಅದು ತೀವ್ರ ಆಚ್ಚರಿಗೂ ಕಾರಣವಾಗಿದೆ.

ಈಗಾಗಲೇ ಇಂಗ್ಲೇಡ್, ಕೆನಡಾದಲ್ಲಿ ಅನೇಕ ರೈತರಿಗೆ ಇಂತಹ ಬೀಜಗಳು ಸರಬರಾಜು ಆಗಿರುತ್ತವೆ ಹಾಗೂ ಅಮೇರಿಕದ 28 ರಾಜ್ಯಗಳಲ್ಲಿ 14 ಜಾತಿಯ ಹೂವಿನ ತಳಿಗಳು ಪತ್ತೆ ಮಾಡಲಾಗಿದೆ. ಈ ಬೀಜಗಳು ಕೀಟಗಳು ಮತ್ತು ರೋಗಾಣುಗಳಿಂದ ಕೂಡಿದ್ದು, ರೈತರು ಅವುಗಳು ಬಿತ್ತನೆ ಮಾಡಿದರೆ ಬೆಳೆಯು ಬೆಳೆದ ಒಂದು ತಿಂಗಳಲ್ಲಿ ಕೀಟ ಮತ್ತು ರೋಗದ ಬಾಧೆಯಿಂದ ಸಂಪೂರ್ಣ ಬೆಳೆ ನಾಶವಾಗುತ್ತದೆ.

ಆದ್ದರಿಂದ ರೈತರು ಪ್ರಮಾಣಿಕೃತ ಹಾಗೂ ನಂಬಿಕೆಯ ಬೀಜ ಮಾರಾಟಗಾರರಿಂದ ಮಾತ್ರ ಬಿತ್ತನೆ ಬೀಜ ಖರೀದಿ ಮಾಡಿ ಅದರ ರಸೀದಿ ಪಡೆದು ಬೀಜಗಳನ್ನು ಬಿತ್ತನೆ ಮಾಡಬೇಕೆಂದು ಜಂಟಿ ಕೃಷಿ ನಿರ್ದೇಶಕರು ರೈತರಲ್ಲಿ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್