NEWSಕೃಷಿದೇಶ-ವಿದೇಶ

ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಎರಡನೇ ಬಾರಿಗೆ ಭಾರತ್‌ ಬಂದ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಇಂದು (ಶುಕ್ರವಾರ( ಭಾರತ್‌ ಬಂದ್‌ಗೆ ಕರೆ ನೀಡಿದ ಬೆನ್ನಲ್ಲೇ ದೇಶದ ಹಲವೆಡೆ ಪ್ರತಿಭಟನೆಗಳು ಆರಂಭಗೊಂಡಿವೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಇಂದಿಗೆ 4 ತಿಂಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಬಂದ್ ಗೆ ಕರೆ ಕೊಟ್ಟಿದ್ದು, ಇದನ್ನು ಯಶಸ್ವಿಗೊಳಿಸುವಂತೆ ದೇಶದ ಜನತೆಯನ್ನು ಮನವಿ ಮಾಡಿಕೊಂಡಿವೆ.

ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಎರಡನೇ ಭಾರತ್ ಬಂದ್ ಇದಾಗಿದೆ. ಡಿ.8ರಂದು ರೈತರು ನಡೆಸಿದ್ದ ಬಂದ್’ಗೆ ದೆಹಲಿ, ಹರಿಯಾಣ, ಪಂಜಾಬ್, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ಹಾಗೂ ಅಸ್ಸಾಂನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಹಲವು ಕಾರ್ಮಿಕ ಸಂಘಟನೆಗಳು, ಕಾಂಗ್ರೆಸ್, ಎನ್‌ಸಿಪಿ ಸೇರಿ 24 ರಾಜಕೀಯ ಪಕ್ಷಗಳು ಆ ಬಂದ್‌ಗೆ ಬೆಂಬಲ ನೀಡಿದ್ದವು. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಇರಲಿದ್ದು, ಎಲ್ಲಾ ಅಂಗಡಿ-ಮುಂಗಟ್ಟುಗಳು ಮುಚ್ಚಲಿವೆ. ರಸ್ತೆ, ರೈಲು ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ರೈತ ಸಂಘಟನೆಗಳು ತಿಳಿಸಿವೆ.

ಇದೇ ವೇಳೆ ಮಾರ್ಚ್ 28ರಂದು ಹೋಳಿ ಹಬ್ಬ ಇದ್ದು, ಅಂದು ಹೋಳಿ ದಹನದ ವೇಳೆಗೆ ಕೃಷಿ ಕಾಯ್ದೆಗಳನ್ನು ರೈತರು ದಹಿಸಲಿದ್ದಾರೆಂದು ತಿಳಿಸಿದ್ದಾರೆ.

ಸಾಮಾನ್ಯ ಜನ ಜೀವನದ ಮೇಲೆ ಪರಿಣಾಮ ಬೀರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಶಾಂತಿ ಹದಗೆಡಲು ಯಾವುದೇ ಕಾರಣಕ್ಕೂ ಆಸ್ಪದ ನೀಡುವುದಿಲ್ಲ. ಈಗಾಗಲೇ ಬ್ಯಾರಿಕೇಡ್ ಗಳನ್ನೂ ಅಳವಡಿಸಲಾಗಿದೆ ಎಂದು ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ಭಾರತ್ ಬಂದ್ ಹಿನ್ನೆಲೆ ಘಾಜಿಪುರ ಗಡಿ ರಾಷ್ಟ್ರೀಯ ಹೆದ್ದಾರಿ 24ರನ್ನು ಬಂದ್ ಮಾಡಲಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಜನರು ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಪಾಲನೆ ಮಾಡಬೇಕಿದ್ದು, ಮಾಸ್ಕ್, ಸ್ವಚ್ಛತೆ ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡಬೇಕೆಂದು ದೆಹಲಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ