CrimeNEWSಕೃಷಿನಮ್ಮಜಿಲ್ಲೆ

ಪಿರಿಯಾಪಟ್ಟಣ :ಬೆಳೆ ನಷ್ಟ, ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ : ಬೆಳೆ ನಷ್ಟವಾದ ಕಾರಣ  ಮಾಡಿದ ಸಾಲ ತೀರಿಸಲಾಗದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಾಗಳಿ ಗ್ರಾಮದ  ನಡೆದಿದೆ.

ಗ್ರಾಮದ ಸಣ್ಣಹುಚ್ಚ(45)  ಆತ್ಮಹತ್ಯೆ ಮಾಡಿಕೊಂಡಿರುವ ರೈತ.  ಮೃತುರ  ತಮಗಿದ್ದ 2 ಎಕರೆ ಜಮೀನಿನಲ್ಲಿ  ಹೂ ಹಾಗೂ ತಂಬಾಕನ್ನು ಬೆಯುತ್ತಿದ್ದರು. ಹೂ ಸೇರಿದಂತೆ  ಸಣ್ಣಪುಟ್ಟ ವ್ಯಾಪಾರನೂ ಮಾಡುತಿದ್ದ ಅವರು,   ಕಳೆದ 1 ತಿಂಗಳ ಹಿಂದೆ ಮಗಳ ಮದುವೆಗಾಗಿ ಕೆಲವರ ಬಳಿ ಕೈ ಸಾಲವನ್ನು ಮಾಡಿಕೊಂಡಿದ್ದರು.

ಈ ನಡುವೆ ಕೊರೊನಾ ಲಾಕ್ ಡೌನ್ ಪ್ರಾರಂಭವಾದ ನಂತರ ಹೂವಿನ ವ್ಯಾಪಾರವೂ ಇಲ್ಲದೆ, ಮಾಡಿದ ಸಾಲವನ್ನು ತೀರಿಸಲಾದೆ ಜೀವನ ನಿರ್ವಹಿಸಲು ಕಷ್ಟಪಟ್ಟು ಹತಾಶರಾಗಿದ್ದರು.

ಈ ನೋವಿನಿಂದ ಹೊರಬರಲಾಗದೆ  ಮಾಗಳಿ  ಸಮೀಪ  ಕೂಡು ತೋಟದ ಹತ್ತಿರ  ತನ್ನ ಜಮೀನಿನಲ್ಲಿ  ನೇಣಿಗೆ ಶರಣಾಗಿದ್ದಾರೆ.  ಓರ್ವ ಪುತ್ರಿ ಹಾಗೂ  ಪುತ್ರನನ್ನು ಅಗಲಿದ್ದಾರೆ. ಈ ಕುರಿತು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ